ಗ್ರಾಮದಲ್ಲಿ ವ್ಯಾಸಂಗ ಮಾಡಿದ ಶಾಲೆಯನ್ನು ಇಂದಿಗೂ ಮರೆಯಬಾರದು. ಸರ್ಕಾರಿ ಶಾಲೆಗಳನ್ನುಉಳಿಸಿ ಬೆಳೆಸುವ ನಿಟ್ಟಿನಲ್ಲಿ ಬಡ ವಿದ್ಯಾರ್ಥಿಗಳಿಗೆ ಸಮಾನತೆಯ ಶಿಕ್ಷಣ ಸಿಗಬೇಕೆಂಬ ದೃಢಸಂಕಲ್ಪದೊಂದಿಗೆ ಶಾಸಕ ಪಿ.ಎಂ.ನರೇಂದ್ರ ಸ್ವಾಮಿಯವರ ಮಾರ್ಗದರ್ಶನದಲ್ಲಿ ಪರೀಕ್ಷೆಗೆ ಪೂರಕವಾಗಿ ಜಾಮಿಟ್ರಿ ಬಾಕ್ಸ್ ವಿತರಿಸುತಿದ್ದೇವೆ.
ಹಲಗೂರು:
ಖಾಸಗಿ ಶಾಲೆಗಳ ವ್ಯಾಮೋಹ ಬಿಟ್ಟು ಸರ್ಕಾರಿ ಶಾಲೆಗೆ ಮಕ್ಕಳನ್ನು ಸೇರಿಸಿ, ಅವುಗಳನ್ನು ಉಳಿಸಿ ಬೆಳೆಸಲು ಮುಂದಾಗಬೇಕು ಎಂದು ಕೆಂಪಯ್ಯನದೊಡ್ಡಿ ಗ್ರಾಮದ ಯುವ ಮುಖಂಡ ಕೆ.ಎಂ.ಮೋಹನ್ ಕುಮಾರ್ ತಿಳಿಸಿದರು.ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ 77ನೇ ಗಣರಾಜ್ಯೋತ್ಸವದ ವೇಳೆ ವ್ಯಾಸಂಗ ಮಾಡುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ಜಾಮಿಟ್ರಿ ಬಾಕ್ಸ್ ವಿತರಿಸಿ ಮಾತನಾಡಿದರು.
ಗ್ರಾಮದಲ್ಲಿ ವ್ಯಾಸಂಗ ಮಾಡಿದ ಶಾಲೆಯನ್ನು ಇಂದಿಗೂ ಮರೆಯಬಾರದು. ಸರ್ಕಾರಿ ಶಾಲೆಗಳನ್ನುಉಳಿಸಿ ಬೆಳೆಸುವ ನಿಟ್ಟಿನಲ್ಲಿ ಬಡ ವಿದ್ಯಾರ್ಥಿಗಳಿಗೆ ಸಮಾನತೆಯ ಶಿಕ್ಷಣ ಸಿಗಬೇಕೆಂಬ ದೃಢಸಂಕಲ್ಪದೊಂದಿಗೆ ಶಾಸಕ ಪಿ.ಎಂ.ನರೇಂದ್ರ ಸ್ವಾಮಿಯವರ ಮಾರ್ಗದರ್ಶನದಲ್ಲಿ ಪರೀಕ್ಷೆಗೆ ಪೂರಕವಾಗಿ ಜಾಮಿಟ್ರಿ ಬಾಕ್ಸ್ ವಿತರಿಸುತಿದ್ದೇವೆ ಎಂದರು.ಸರ್ಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಣ ದೊರಕುತ್ತಿದೆ. ಯಾವುದೇ ಖಾಸಗಿ ಶಾಲೆಗಳಿಗಿಂತ ಕಡಿಮೆ ಏನಿಲ್ಲ ಎಂಬುದನ್ನು ಅರಿತುಕೊಳ್ಳಬೇಕು. ಎಲ್ಲರೂ ಸರ್ಕಾರಿ ಶಾಲೆಯಲ್ಲಿ ನಿಮ್ಮ ಮಕ್ಕಳಿಗೆ ವ್ಯಾಸಂಗ ಕೊಡಿಸಿ ಎಂದರು.
ಶಾಲೆ ಮುಖ್ಯ ಶಿಕ್ಷಕ ತಿಮ್ಮಯ್ಯ ಧ್ವಜಾರೋಹಣ ನೆರವೇರಿಸಿದರು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಶಿಕ್ಷಕರಾದ ಶರತ್, ರಚನಾ ,ರಮ್ಯ, ಧನುಶ್ರೀ,ತಿಮ್ಮಯ್ಯ ಮತ್ತು ಗ್ರಾಮದ ಮುಖಂಡರು ಇದ್ದರು.ಭಾರತೀಯರ ಪಾಲಿಗೆ ಹೆಮ್ಮೆಯ ಹಬ್ಬ ಗಣರಾಜ್ಯೋತ್ಸವ: ಅಪ್ಪಾಜಿಗೌಡ
ದೇವಲಾಪುರ:ಭಾರತೀಯರ ಪಾಲಿಗೆ ಹೆಮ್ಮೆಯ ದಿನವಾಗಿ ಗಣರಾಜ್ಯೋತ್ಸವ ಆಚರಿಸಲಾಗುತ್ತಿದೆ. ಸಂವಿಧಾನ ಮತ್ತು ಅದರ ಆಶಯಗಳನ್ನು ಈ ದಿನ ನಮ್ಮ ಹಕ್ಕು ಮತ್ತು ಕರ್ತವ್ಯಗಳ ಬಗ್ಗೆ ನೆನಪಿಸಬೇಕಾಗುತ್ತದೆ ಎಂದು ಮನ್ಮುಲ್ ನಿರ್ದೇಶಕ ಅಪ್ಪಾಜಿಗೌಡ ಹೇಳಿದರು.
ಹೋಬಳಿ ಕೇಂದ್ರದ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ 77ನೇ ಗಣರಾಜ್ಯೋತ್ಸವದಲ್ಲಿ ಮಾತನಾಡಿ, ದೇಶದ ಪ್ರತಿಯೊಬ್ಬ ಪ್ರಜೆಗೂ ಸಾಮಾಜಿಕ ಸಮಾನತೆ ಮತ್ತು ಮೂಲ ಕರ್ತವ್ಯಗಳು, ಹಕ್ಕುಗಳು ನೀಡಲು ಅವಕಾಶ ಸಿಕ್ಕಿದೆ. ಇಂತಹ ಅವಕಾಶಗಳನ್ನು ನಾವುಗಳ ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.ಸರ್ಕಾರಿ ಶಾಲೆಗಳನ್ನು ಕಡೆಗಣಿಸದೆ ಉನ್ನತ ಮಟ್ಟಕ್ಕೆ ಬೆಳೆಸುವಂತೆ ನಾವುಗಳು ಸಹಕಾರ ನೀಡುವ ಮುಖಾಂತರ ನಮ್ಮ ಮುಂದಿನ ಯುವ ಜನಾಂಗಕ್ಕೆ ಸರ್ಕಾರಿ ಶಾಲೆ ಬಗ್ಗೆ ಅಭಿಮಾನ ಬೆಳೆಯುವಂತೆ ಮಾಡಬೇಕು ಎಂದರು.
ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆದವು. ಸಮಾರಂಭದಲ್ಲಿ ಮುಖ್ಯ ಶಿಕ್ಷಕರಾದ ನೂರು ಅಪ್ರೋಜ್, ಎಸ್ಡಿಎಂಸಿ ಅಧ್ಯಕ್ಷ ಸುರೇಶ್, ಶಾಲಾ ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಜವರೇಗೌಡ, ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ವಾಸು,ಶಾಲಾ ಅಭಿವೃದ್ಧಿ ಸಮಿತಿ ಪದಾಧಿಕಾರಿಗಳು, ಸದಸ್ಯರು, ಶಿಕ್ಷಕರು ಹಾಜರಿದ್ದರು.