ಕಬಡ್ಡಿ ಆಟವನ್ನು ಉಳಿಸಿ, ಬೆಳೆಸಿ ಜೊತೆಗೆ ಪ್ರೋತ್ಸಾಹಿಸಿ: ಎಚ್.ಆರ್.ಸಿದ್ದಪ್ಪ

| Published : Sep 10 2024, 01:32 AM IST

ಕಬಡ್ಡಿ ಆಟವನ್ನು ಉಳಿಸಿ, ಬೆಳೆಸಿ ಜೊತೆಗೆ ಪ್ರೋತ್ಸಾಹಿಸಿ: ಎಚ್.ಆರ್.ಸಿದ್ದಪ್ಪ
Share this Article
  • FB
  • TW
  • Linkdin
  • Email

ಸಾರಾಂಶ

ಗ್ರಾಮೀಣ ಪ್ರದೇಶದಲ್ಲಿ ಪ್ರತಿಭಾವಂತರು ಹೇರಳವಾಗಿದ್ದಾರೆ. ಜತೆಗೆ ಆರೋಗ್ಯವಂತರಾಗಿ ಸದೃಢ ಮೈಕಟ್ಟು ಹೊಂದಿದ್ದಾರೆ. ಆದರೆ, ನಗರ ಪ್ರದೇಶಗಳಲ್ಲಿ ಪ್ರತಿಭಾವಂತರ ಸಂಖ್ಯೆ ಕ್ಷೀಣ. ಹೀಗಾಗಿ ಗ್ರಾಮೀಣ ಪ್ರತಿಭೆಗಳನ್ನು ಬೆಳೆಸಬೇಕಿದೆ.

ಕನ್ನಡಪ್ರಭ ವಾರ್ತೆ ಪಾಂಡವಪುರ

ಅಪ್ಪಟ ಗ್ರಾಮೀಣ ಕ್ರೀಡೆ ಕಬಡ್ಡಿ ಆಟವನ್ನು ಉಳಿಸಿ ಬೆಳೆಸುವ ಮೂಲಕ ಪ್ರೋತ್ಸಾಹಿಸಬೇಕು ಎಂದು ಮೇಲುಕೋಟೆ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಎಚ್.ಆರ್.ಸಿದ್ದಪ್ಪ ಹೇಳಿದರು.

ತಾಲೂಕಿನ ನೀಲನಹಳ್ಳಿಯಲ್ಲಿ ಶ್ರೀವಿನಾಯಕ ಗೆಳೆಯರ ಬಳಗದಿಂದ ಆಯೋಜಿಸಿದ್ದ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿ, ಈ ಹಿಂದೆ ರಾಷ್ಟ್ರೀಯ ಕ್ರೀಡೆಯಾಗಿದ್ದ ಕಬಡ್ಡಿ ಆಟವು ಈಗ ಅಂತಾರಾಷ್ಟ್ರೀಯ ಕ್ರೀಡೆಯಾಗಿ ಮಾರ್ಪಟ್ಟಿದೆ. ಜತೆಗೆ ಕಬಡ್ಡಿ ಕ್ರೀಡಾಪಟುಗಳು ರೂಪುಗೊಳ್ಳುತ್ತಿದ್ದು, ಅವರನ್ನು ಉತ್ತೇಜಿಸಿ ಪ್ರೋತ್ಸಾಹಿಸುವ ಕೆಲಸ ಆಗಬೇಕು ಎಂದರು.

ಗ್ರಾಮೀಣ ಪ್ರದೇಶದಲ್ಲಿ ಪ್ರತಿಭಾವಂತರು ಹೇರಳವಾಗಿದ್ದಾರೆ. ಜತೆಗೆ ಆರೋಗ್ಯವಂತರಾಗಿ ಸದೃಢ ಮೈಕಟ್ಟು ಹೊಂದಿದ್ದಾರೆ. ಆದರೆ, ನಗರ ಪ್ರದೇಶಗಳಲ್ಲಿ ಪ್ರತಿಭಾವಂತರ ಸಂಖ್ಯೆ ಕ್ಷೀಣ. ಹೀಗಾಗಿ ಗ್ರಾಮೀಣ ಪ್ರತಿಭೆಗಳನ್ನು ಬೆಳೆಸಬೇಕಿದೆ ಎಂದರು.

ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ವಿವಿಧ ಜಿಲ್ಲೆಗಳಿಂದ ನೂರಾರು ಕ್ರೀಡಾಪಟುಗಳು ಭಾಗಿಯಾಗಿದ್ದರು.

ಕಾರ್ಯಕ್ರಮದಲ್ಲಿ ಜಕ್ಕನಹಳ್ಳಿ ಬಂಕ್ ಮಾಲೀಕ ಮೋಹನ ಕುಮಾರ್, ಲಕ್ಷೀಸಾಗರ ಗ್ರಾಪಂ ಅಧ್ಯಕ್ಷೆ ವಿನೂತ ತಿಮ್ಮೇಗೌಡ, ಸದಸ್ಯರಾದ ಪ್ರಮೋದ್, ಸವಿತಾ ನಾರಾಯಣ್, ವಿನಾಯಕ ಗೆಳೆಯರ ಬಳಗದ ಅಧ್ಯಕ್ಷ ಬೋರ್ ವೆಲ್ ಏಜೆನ್ಸಿ‌ಮಾಲೀಕ ಸತೀಶ್, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಹುಲಿ ಕೆಂಪೆಗೌಡ, ನೀಲನಹಳ್ಳಿ ಯಜಮಾನರು, ಶ್ರೀ ವಿನಾಯಕ ಗೆಳೆಯರ ಬಳಗದ ಯುವಕರು, ಗ್ರಾಮಸ್ಥರು, ಮುಖಂಡರು ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರು, ಸದಸ್ಯರು ಇತರರು ಇದ್ದರು.

ಕಲಾವಿದರಿಂದ ಅರ್ಜಿ ಆಹ್ವಾನಶ್ರೀರಂಗಪಟ್ಟಣ: ಪಟ್ಟಣದಲ್ಲಿ ಅಕ್ಟೋಬರ್ 4 ರಿಂದ ಶ್ರೀರಂಗಪಟ್ಟಣ ದಸರಾವನ್ನು ಹಮ್ಮಿಕೊಂಡಿದ್ದು, ಕಾರ್ಯಕ್ರಮಕ್ಕೆ ಕಲಾವಿದರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿಯನ್ನು ಸೆಪ್ಟಂಬರ್ 20 ರೊಳಗೆ ತಮ್ಮ ಕಲಾಪ್ರಕಾರ ಮಾಹಿತಿಯೊಂದಿಗೆ ಬ್ಯಾಂಕ್ ಖಾತೆ ಜೆರಾಕ್ಸ್ ಪ್ರತಿ ಸಹಿತ ಮಂಡ್ಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ದೂ- 08232-223197 ಅನ್ನು ಸಂಪರ್ಕಿಸಬಹುದು.11 ರಂದು ಕುಂದು ಕೊರತೆ ಸಭೆ

ಮಂಡ್ಯ: ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗದ ಕಾರ್ಯಕ್ರಮಗಳ ಅನುಷ್ಠಾನಕ್ಕಾಗಿ ನಗರದ ಜಿಪಂ ಕಾವೇರಿ ಸಭಾಂಗಣದಲ್ಲಿ ಸೆ.11 ರಂದು ಜಿಲ್ಲಾ ಮಟ್ಟದ ಕುಂದು ಕೊರತೆ ಸಭೆಯನ್ನು ಆಯೋಜಿಸಲಾಗಿದೆ. ಜಿಲ್ಲಾ ವ್ಯಾಪ್ತಿಯ ನೋಂದಾಯಿತ ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗದ ಸಂಘ/ಸಂಸ್ಥೆ ವತಿಯಿಂದ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳು ಸಭೆಗೆ ಹಾಜರಾಗಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.