ಸಂವಿಧಾನ ರಕ್ಷಿಸಿ ಪ್ರಜಾಪ್ರಭುತ್ವ ಉಳಿಸಿ

| Published : Aug 18 2025, 12:00 AM IST

ಸಾರಾಂಶ

ದೇಶದಲ್ಲಿ ಸರ್ವಾಧಿಕಾರಿ ಧೋರಣೆ ತೊಲಗಿಸಲು ಮತ್ತು ಪಾರದರ್ಶಕ ಆಡಳಿತ ನಡೆಸಲು ಸಂವಿಧಾನ ಜಾರಿಗೊಂಡಿದೆ

ಯಲಬುರ್ಗಾ: ಡಾ. ಬಿ.ಆರ್.ಅಂಬೇಡ್ಕರ್ ರಚಿಸಿದ ಭಾರತದ ಸಂವಿಧಾನವನ್ನು ರಕ್ಷಿಸುವ ಮೂಲಕ ಪ್ರಜಾಪ್ರಭುತ್ವ ಉಳಿಸಬೇಕಿದೆ ಎಂದು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಹೇಳಿದರು.

ಪಟ್ಟಣದ ಬ್ಲಾಕ್ ಕಾಂಗ್ರೆಸ್‌ ವತಿಯಿಂದ ಇತ್ತೀಚೆಗೆ ಹಮ್ಮಿಕೊಂಡಿದ್ದ ಸಂವಿಧಾನ ರಕ್ಷಿಸಿ-ಪ್ರಜಾಪ್ರಭುತ್ವ ಉಳಿಸಿ ಪಥಸಂಚಲನದಲ್ಲಿ ಪಾಲ್ಗೊಂಡು ಮಾತನಾಡಿದರು.

ದೇಶದಲ್ಲಿ ಸರ್ವಾಧಿಕಾರಿ ಧೋರಣೆ ತೊಲಗಿಸಲು ಮತ್ತು ಪಾರದರ್ಶಕ ಆಡಳಿತ ನಡೆಸಲು ಸಂವಿಧಾನ ಜಾರಿಗೊಂಡಿದೆ. ಅಸಮಾನತೆ, ಅಸ್ಪೃಶ್ಯತೆ ತೊಲಗಬೇಕಿದೆ. ಯುವ ಜನಾಂಗ ದೇಶದ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಕುರಿತು ತಿಳಿಯಬೇಕಿದೆ. ಮೂಲಭೂತ ಹಕ್ಕುಗಳಲ್ಲಿ ಒಂದಾದ ಮತದಾನದ ಹಕ್ಕನ್ನು ಯಾರಿಂದಲೂ ಕಸಿದುಕೊಳ್ಳದಂತೆ ಚುನಾವಣೆ ವ್ಯವಸ್ಥೆ ರಕ್ಷಿಸಬೇಕಿದೆ ಎಂದರು.

ಬ್ಲಾಕ್ ಕಾಂಗ್ರೆಸ್ ಕಚೇರಿಯಿಂದ ಕಂದಾಯ ಭವನದವರೆಗೆ ಸಂವಿಧಾನ ರಕ್ಷಿಸಿ-ಪ್ರಜಾಪ್ರಭುತ್ವ ಉಳಿಸಿ ಎನ್ನುವ ಘೋಷಣೆ ಕೂಗುತ್ತಾ ಪಥಸಂಚಲನ ನಡೆಯಿತು.

ಈ ವೇಳೆ ಕೆರಿಬಸಪ್ಪ ನಿಡಗುಂದಿ, ಶೇಖರಗೌಡ ಉಳ್ಳಾಗಡ್ಡಿ, ಸಂಗಣ್ಣ ತೆಂಗಿನಕಾಯಿ, ಸುಧೀರ ಕೊರ್ಲಹಳ್ಳಿ, ಶರಣಪ್ಪ ಗಾಂಜಿ, ಡಾ.ನಂದಿತಾ ದಾನರಡ್ಡಿ, ಹಂಪಯ್ಯಸ್ವಾಮಿ ಹಿರೇಮಠ, ಶರಣಪ್ಪ ಅರಕೇರಿ, ಆನಂದ ಉಳ್ಳಾಗಡ್ಡಿ, ಮಲ್ಲಿಕಾರ್ಜುನ ಜಕ್ಕಲಿ, ರಿಯಾಜ್ ಅಹ್ಮದ್, ಈಶ್ವರ ಅಟಮಾಳಗಿ, ಶರಣಗೌಡ ಬಸಾಪುರ, ಪುನೀತ ಕೊಪ್ಪಳ, ಪರಶುರಾಮ ಸಂಗನಾಳ, ಕಳಕಪ್ಪ ಸೂಡಿ, ಬಸವರಾಜ ಪುಟಗಮರಿ, ಖಾಜಾವಲಿ, ರಾಜು ಸೇರಿದಂತೆ ಮತ್ತಿತರರು ಇದ್ದರು.