ಸಂವಿಧಾನ ರಕ್ಷಿಸಿ -ಪ್ರಜಾಪ್ರಭುತ್ವ ಉಳಿಸಿ ಅಭಿಯಾನ ಯಶಸ್ವಿ

| Published : Aug 16 2025, 02:01 AM IST

ಸಂವಿಧಾನ ರಕ್ಷಿಸಿ -ಪ್ರಜಾಪ್ರಭುತ್ವ ಉಳಿಸಿ ಅಭಿಯಾನ ಯಶಸ್ವಿ
Share this Article
  • FB
  • TW
  • Linkdin
  • Email

ಸಾರಾಂಶ

ರಾಮನಗರ: ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಸಂವಿಧಾನ ರಕ್ಷಿಸಿ-ಪ್ರಜಾಪ್ರಭುತ್ವ ಉಳಿಸಿ ಅಭಿಯಾನ ಜಾಥಾ ಶುಕ್ರವಾರ ಯಶಸ್ವಿಯಾಗಿ ನಡೆಯಿತು.

ರಾಮನಗರ: ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಸಂವಿಧಾನ ರಕ್ಷಿಸಿ-ಪ್ರಜಾಪ್ರಭುತ್ವ ಉಳಿಸಿ ಅಭಿಯಾನ ಜಾಥಾ ಶುಕ್ರವಾರ ಯಶಸ್ವಿಯಾಗಿ ನಡೆಯಿತು.

ಕಾಂಗ್ರೆಸ್ ಸಮಿತಿ ಜಿಲ್ಲಾಧ್ಯಕ್ಷ ಎಸ್.ಗಂಗಾಧರ್ ನೇತೃತ್ವದಲ್ಲಿ ನಡೆದ ಅಭಿಯಾನ‌ ಜಾಥಾವು ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಹೊರಟು ಕೆಂಪೇಗೌಡ ವೃತ್ತ, ಐಜೂರು ವೃತ್ತ , ಕೆಂಗಲ್ ಹನುಮಂತಯ್ಯ ವೃತ್ತದ ಮೂಲಕ ಸಾಗಿ ಜಿಲ್ಲಾ ಕಾಂಗ್ರೆಸ್ ಕಚೇರಿ ತಲುಪಿತು.

ಜಾಥಾದಲ್ಲಿ ಶಾಸಕ ಎಚ್.ಎ.ಇಕ್ಬಾಲ್ ಹುಸೇನ್, ಮಾಜಿ ಶಾಸಕ ಕೆ.ರಾಜು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚೇತನ್ ಕುಮಾರ್, ಮಾಜಿ ಅಧ್ಯಕ್ಷ ಸಿಎನ್ಆರ್ ವೆಂಕಟೇಶ್, ತಾಲೂಕು ಗ್ಯಾರಂಟಿ ‌ಸಮಿತಿ ಅಧ್ಯಕ್ಷ ವಿ.ಹೆಚ್.ರಾಜು, ಕಾರ್ಮಿಕ ಘಟಕದ ತಾಲೂಕು ಅಧ್ಯಕ್ಷ ಕುರುಬಳ್ಳಿ ದೇವರಾಜು, ಮುಖಂಡರಾದ ವಿಶ್ವನಾಥ್, ನಗರಸಭೆ ಉಪಾಧ್ಯಕ್ಷೆ ಆಯಿಷಾಬಾನು, ಸದಸ್ಯೆ ಪಾರ್ವತಮ್ಮ, ನಾಗಮ್ಮ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಚಂದ್ರಸಾಗರ್, ಉಪಾಧ್ಯಕ್ಷ ಗುರುಪ್ರಸಾದ್, ಗ್ರಾಪಂ ಮಾಜಿ ಅಧ್ಯಕ್ಷ ರಂಜಿತ್, ಗ್ರಾಮಾಂತರ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ನಾಗಭೂಷಣ್, ನಗರ ಘಟಕದ ಅಧ್ಯಕ್ಷ ಮುಷೀರ್, ಮುಖಂಡರಾದ ಷಡಕ್ಷರಿ, ಮೋಹನ್, ರವಿ, ಶ್ರೀನಿವಾಸ್ ಮತ್ತಿತರರು ಭಾಗವಹಿಸಿದ್ದರು.

15ಕೆಆರ್ ಎಂಎನ್ 4.ಜೆಪಿಜಿ

ರಾಮನಗರ ಟೌನಿನಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಸಂವಿಧಾನ ರಕ್ಷಿಸಿ-ಪ್ರಜಾಪ್ರಭುತ್ವ ಉಳಿಸಿ ಅಭಿಯಾನ ಜಾಥಾ ನಡೆಯಿತು.