ಸಾರಾಂಶ
ಚಿಕ್ಕಮಗಳೂರುಸವಿತಾ ಮಹರ್ಷಿಗಳು ಸಮಾಜದ ಶ್ರೇಷ್ಠತೆಗೆ ಶ್ರಮಿಸಿದ ಮಹಾನ್ ಯುಗ ಪುರುಷ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದ್ದಾರೆ.
ನಗರದ ಕುವೆಂಪು ಕಲಾ ಮಂದಿರದ ಹೇಮಾಂಗಣ ಸಭಾಂಗಣದಲ್ಲಿ ಸವಿತಾ ಮಹರ್ಷಿ ಜಯಂತಿ
ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುಸವಿತಾ ಮಹರ್ಷಿಗಳು ಸಮಾಜದ ಶ್ರೇಷ್ಠತೆಗೆ ಶ್ರಮಿಸಿದ ಮಹಾನ್ ಯುಗ ಪುರುಷ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದ್ದಾರೆ.ನಗರದ ಕುವೆಂಪು ಕಲಾ ಮಂದಿರದ ಹೇಮಾಂಗಣ ಸಭಾಂಗಣದಲ್ಲಿ ಜಿಲ್ಲಾಡಳಿತದಿಂದ ಏರ್ಪಡಿಸಲಾಗಿದ್ದ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸವಿತಾ ಮಹರ್ಷಿಗಳು ಸಮಾಜಮುಖಿಯಾಗಿ ಬೆಳೆದು ದಾರಿ ದೀಪವಾಗಿದ್ದಾರೆ. ಇಂತಹ ಮಹಾತ್ಮರ ಜಯಂತಿಗಳನ್ನು ಆಚರಿಸುವ ಮೂಲಕ ಸರ್ಕಾರ ಇವರ ಆದರ್ಶಗಳ ಹಾದಿಯಲ್ಲಿ ನಡೆಯಲು ನಮಗೆ ಬೆಳಕು ತೋರಿಸಿದೆ.ಸವಿತಾ ಸಮಾಜದ ಬಂಧುಗಳು ಮಹರ್ಷಿಗಳ ಆದರ್ಶಗಳನ್ನು ತಮ್ಮ ಜೀವನದಲ್ಲಿ ಆಳವಡಿಸಿಕೊಂಡು ಮುನ್ನಡೆಯಬೇಕು ಎಂದು ಹೇಳಿದರು.
ಸವಿತಾ ಸಮಾಜ ಹಿಂದುಳಿದ ಸಮಾಜವಾಗಿದ್ದು, ಸಮಾಜ ಸಂಘಟನೆಯಿಂದ ಸರ್ಕಾರದ ಸೌಲಭ್ಯ ಬಳಸಿಕೊಂಡು ಆರ್ಥಿಕ, ಸಾಮಾಜಿಕ, ಶೈಕ್ಷಣಿಕವಾಗಿ ಬೆಳೆಯಬೇಕು. ಜೊತೆಗೆ ಸಹಕಾರ ಸಂಘಗಳು ಹಾಗೂ ಆರ್ಥಿಕ ಚಟುವಟಿಕೆಗಳ ಮೂಲಕ ಸಂಘ ಸ್ಥಾಪಿಸಿಕೊಂಡು ಮುಂದೆ ಬರಲು ಪ್ರಯತ್ನಿಸಬೇಕು. ಸವಿತಾ ಸಮಾಜಕ್ಕೆ ಜಾಗ ಮಂಜೂರು ಮಾಡಿಸಲು ಕ್ರಮಕೈಗೊಳ್ಳಲಾಗುವುದು ಎಂದರು.ಸಾಹಿತಿ ಬಿ. ತಿಪ್ಪೇರುದ್ರಪ್ಪ ಉಪನ್ಯಾಸ ನೀಡಿ, ಪೌರಾಣಿಕ ವ್ಯಕ್ತಿಯಾದ ಸವಿತಾ ಮಹರ್ಷಿರಥ ಸಪ್ತಮಿ ದಿನ ಜನಿಸಿದರು. ಶಿವನ ಬಲಗಣ್ಣಿನಿಂದ ಜನಿಸಿದವರೇ ಸವಿತಾ ಮಹರ್ಷಿ ಎಂಬ ಮಾತಿದೆ. ಸವಿತಾ ಸಮಾಜದವರು ಸೂರ್ಯ ವಂಶಕ್ಕೆ ಸೇರಿದವರೆಂದು ಹೇಳಿದರು. ಅಪಾರ ಜ್ಞಾನ ಭಂಡಾರ ಹೊಂದಿದ ಮಹರ್ಷಿಗಳು ನಾಲ್ಕನೇ ವೇದವಾದ ಸಾಮವೇದ ಕೃತಿ ರಚಿಸಿದ್ದಾರೆ ಎಂದು ಹೇಳಿದರು.ಸಮಾರಂಭದ ಅಧ್ಯಕ್ಷತೆಯನ್ನು ಉಪ ತಹಸೀಲ್ದಾರ್ ರಾಮರಾವ್ ದೇಸಾಯಿ ವಹಿಸಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರಮೇಶ್, ಸಮಾಜದ ಮುಖಂಡ ವಿಶ್ವನಾಥ್ , ಸವಿತಾ ಸಮಾಜದ ಜಿಲ್ಲಾ ಅಧ್ಯಕ್ಷ ಮಹಾಲಿಂಗ, ಯೋಗೇಶ್, ವಿಶ್ವನಾಥ್, ರಾಘವೇಂದ್ರ ಉಪಸ್ಥಿತರಿದ್ದರು.4 ಕೆಸಿಕೆಎಂ 2ಚಿಕ್ಕಮಗಳೂರಿನ ಕುವೆಂಪು ಕಲಾ ಮಂದಿರದ ಹೇಮಾಂಗಣ ಸಭಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ ಏರ್ಪಡಿಸಲಾಗಿದ್ದ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮವನ್ನು ಶಾಸಕ ಎಚ್.ಡಿ. ತಮ್ಮಯ್ಯ ಉದ್ಘಾಟಿಸಿದರು.