ಅಕ್ಷರ ಕ್ರಾಂತಿ ಆರಂಭಿಸಿದ ಶ್ರೇಷ್ಠ ಶಿಕ್ಷಕಿ ಸಾವಿತ್ರಿ ಬಾಯಿಫುಲೆ

| Published : Jan 04 2024, 01:45 AM IST

ಅಕ್ಷರ ಕ್ರಾಂತಿ ಆರಂಭಿಸಿದ ಶ್ರೇಷ್ಠ ಶಿಕ್ಷಕಿ ಸಾವಿತ್ರಿ ಬಾಯಿಫುಲೆ
Share this Article
  • FB
  • TW
  • Linkdin
  • Email

ಸಾರಾಂಶ

ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ ಎನ್ನುವ ಆಧುನಿಕ ಭಾರತದ ಪ್ರಥಮ ಮಹಿಳಾ ಶಿಕ್ಷಕಿ ಮಾತೆ ಸಾವಿತ್ರಿ ಬಾ ಪುಲೆ ಅಕ್ಷರ ಕ್ರಾಂತಿ ಅರಂಭಿಸಿದ ಶ್ರೇಷ್ಠ ಶಿಕ್ಷಕಿ ಎಂದು ಶ್ರೀ ಪ್ರಹರ್ಷಿತ ವಿದ್ಯಾ ಸಂಸ್ಥೆ ಮುಖ್ಯ ಶಿಕ್ಷಕಿ ವಿದ್ಯಾ ಹೇಳಿದರು.

ಕನ್ನಡಪ್ರಭ ವಾರ್ತೆ, ತರೀಕೆರೆ

ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ ಎನ್ನುವ ಆಧುನಿಕ ಭಾರತದ ಪ್ರಥಮ ಮಹಿಳಾ ಶಿಕ್ಷಕಿ ಮಾತೆ ಸಾವಿತ್ರಿ ಬಾ ಪುಲೆ ಅಕ್ಷರ ಕ್ರಾಂತಿ ಅರಂಭಿಸಿದ ಶ್ರೇಷ್ಠ ಶಿಕ್ಷಕಿ ಎಂದು ಶ್ರೀ ಪ್ರಹರ್ಷಿತ ವಿದ್ಯಾ ಸಂಸ್ಥೆ ಮುಖ್ಯ ಶಿಕ್ಷಕಿ ವಿದ್ಯಾ ಹೇಳಿದರು.

ಪಟ್ಟಣದ ಶ್ರೀ ಪ್ರಹರ್ಷಿತ ವಿದ್ಯಾ ಸಂಸ್ಥೆಯಿಂದ ಶಾಲಾ ಅವರಣದಲ್ಲಿ ಏರ್ಪಡಿಸಿದ್ದ 193ನೇ ಸಾವಿತ್ರಿ ಬಾ ಫುಲೆ ಜನ್ಮದಿನದ ಕಾರ್ಯಕ್ರಮದಲ್ಲಿ ಭಾವ ಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು. ಹೆಣ್ಣು ಮಕ್ಕಳಿಗೆ ವಿದ್ಯೆ ನಿರಾಕರಿಸಿದ ಸಮಾಜವನ್ನು ದಿಟ್ಟತನದಿಂದ ಎದುರಿಸಿ ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡಲು ಶಾಲೆ ಆರಂಭಿಸಿದ ಭಾರತದ ಮೊಟ್ಟ ಮೊದಲ ಮಹಿಳಾ ಶಿಕ್ಷಕಿ ಅಕ್ಷರದವ್ವ ಸಾವಿತ್ರಿ ಬಾ ಫುಲೆ, ಮುಖ್ಯೋಪಾಧ್ಯಾಯಿನಿ, ಸಂಚಾಲಕಿ, ಸಾಮಾಜಿಕ ಮತ್ತು ಮಹಿಳಾ ಹಕ್ಕುಗಳ ಹೋರಾಟ ಗಾರ್ತಿ, ಭಾರತದ ಮೊಟ್ಟಮೊದಲ ಶಿಕ್ಷಕಿ ದಣಿದವರಿಯದ ಸತ್ಯಶೋಧಕಿ ಈ ಎಲ್ಲಾ ಸಾಧನೆಗಳನ್ನು ಪರಿಗಣಿಸಿ ಬ್ರಿಟಿಷ್ ಸರಕಾರ ಇವರಿಗೆ "ಇಂಡಿಯನ್ ಫಸ್ಟ್ ಲೇಡಿ ಟೇಚರ್ " ಎಂದು ಬಿರುದು ಕೂಡ ಕೊಟ್ಟಿದೆ ಇಂತಹ ತಾಯಿಯ ಜನ್ಮದಿನವನ್ನು ಸಂಭ್ರಮದಿಂದ ನಮ್ಮ ಶಾಲೆಯಲ್ಲಿ ಆಚರಣೆ ಮಾಡುತ್ತಿರುವುದು ನಮ್ಮೆಲ್ಲರಿಗೂ ಹೆಮ್ಮೆಯ ವಿಚಾರವೆಂದು ತಿಳಿಸಿದರು.

ಸಮಾರಂಭದಲ್ಲಿ ಸಂಸ್ಥೆ ಆಡಳಿತಾಧಿಕಾರಿ ಅನೂಪ್ ಮಾತನಾಡಿ ಸಾವಿತ್ರಿ ಬಾಯಿ ಫುಲೆ ಅವರು ಜೀವನದಲ್ಲಿ ಸಮಾಜದ ಕೆಂಗಣ್ಣಿಗೆ ಗುರಿಯಾಗಿ, ನೋವು, ಅವಮಾನಗಳನ್ನು ಮೆಟ್ಟಿನಿಂತು ಶತ ಶತಮಾನಗಳಿಂದ ಶಿಕ್ಷಣದಿಂದ ವಂಚಿತರಾದ ಹೆಣ್ಣು ಮಕ್ಕಳಿಗೆ ಉಚಿತವಾಗಿ ಶಾಲೆ ಪ್ರಾರಂಭಿಸಿ ವಿದ್ಯೆ ಕೊಟ್ಟಿದ್ದು ನಮ್ಮ ಅಕ್ಷರದ ತಾಯಿ ಕ್ರಾಂತಿ ಜ್ಯೋತಿ ದೇಶದ ಮೊದಲ ಶಿಕ್ಷಕಿ ಸಾವಿತ್ರಿ ಬಾ ಫುಲೆ, ಹೆಣ್ಣು ಮಕ್ಕಳಿಗೆ ಶಿಕ್ಷಣಕ್ಕೆ ಭದ್ರ ಬುನಾದಿ ಹಾಕಿದ ಮಹಾನ್ ವ್ಯಕ್ತಿ ಸಾವಿತ್ರಿ ಬಾ ಫುಲೆ ಅವರ ಜನ್ಮ ಜಯಂತಿ ಯನ್ನು ನಮ್ಮಶಾಲೆಯಲ್ಲಿ ಆಚರಣೆ ಮಾಡುವುದು ನಮ್ಮೆಲ್ಲರಿಗೂ ಸಂತೋಷ ತಂದಿದೆ ಎಂದರು.

ಕಾರ್ಯಕ್ರಮದಲ್ಲಿ ಶಾಲಾ. ವಿದ್ಯಾರ್ಥಿಗಳು, ಶಿಕ್ಷಕಿಯರು,ಪೋಷಕರು ಉಪಸ್ಥಿತರಿದ್ದರು,

2ಕೆಟಿಆರ್.ಕೆ.8ಃ

ತರೀಕೆರೆಯಲ್ಲಿ ಪ್ರಹರ್ಷಿತ ವಿದ್ಯಾ ಸಂಸ್ಥೆಯಿಂದ ಏರ್ಪಡಿಸಿದ್ದ 139ನೇ ಸಾವಿತ್ರಿ ಬಾ ಪುಲೆ ಅವರ ಜನ್ಮ ದಿನದ ಕಾರ್ಯಕ್ರಮದಲ್ಲಿ ಶ್ರೀ ಪ್ರಹರ್ಷಿತ ವಿದ್ಯಾ ಸಂಸ್ಥೆ ಮುಖ್ಯ ಶಿಕ್ಷಕಿ ವಿದ್ಯಾ, ಶಾಲೆ ಶಿಕ್ಷಕಿಯರು ಭಾಗವಹಿಸಿದ್ದರು.