ಸಾವಿತ್ರಿಬಾ ಫುಲೆ ಜಯಂತಿಯನ್ನು ಪ್ರತಿವರ್ಷ ಜ. 3ರಂದು ದೇಶಾದ್ಯಂತ ಆಚರಿಸಲಾಗುತ್ತದೆ. ಈ ದಿನ ಭಾರತದ ಮೊದಲು ಮಹಿಳಾ ಶಿಕ್ಷಕಿ, ಸಮಾಜ ಸುಧಾರಕಿ ಸಾವಿತ್ರಿಬಾ ಫುಲೆ ಅವರ ಜನ್ಮದಿನವಾಗಿದೆ.
ಗದಗ: ಮಹಿಳೆಯರ ಹಕ್ಕುಗಳಿಗಾಗಿ ನಿರಂತರ ಚಳವಳಿಗಳನ್ನು ಸಂಘಟಿಸಿ, ಶಿಕ್ಷಣದ ಕ್ರಾಂತಿ ಮಾಡಿದ ಆಧುನಿಕ ಶಿಕ್ಷಣದ ತಾಯಿ ಸಾವಿತ್ರಿಬಾ ಫುಲೆ ಸ್ತ್ರೀಯರಿಗೆ ಸ್ಫೂರ್ತಿ ಆಗಿದ್ದಾರೆ ಎಂದು ಜಿಲ್ಲಾ ಸ್ಲಂ ಸಮಿತಿ ಅಧ್ಯಕ್ಷ ಇಮ್ತಿಯಾಜ ಆರ್. ಮಾನ್ವಿ ತಿಳಿಸಿದರು.
ಜಿಲ್ಲಾ ಸ್ಲಂ ಮಹಿಳಾ ಸಮಿತಿಯಿಂದ ಗಂಗಿಮಡಿಯಲ್ಲಿ ಆಯೋಜಿಸಿದ್ದ ಅಕ್ಷರದವ್ವ ಮಾತೆ ಸಾವಿತ್ರಿಬಾ ಫುಲೆಯವರ 195ನೇ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.ಸಾವಿತ್ರಿಬಾ ಫುಲೆ ಜಯಂತಿಯನ್ನು ಪ್ರತಿವರ್ಷ ಜ. 3ರಂದು ದೇಶಾದ್ಯಂತ ಆಚರಿಸಲಾಗುತ್ತದೆ. ಈ ದಿನ ಭಾರತದ ಮೊದಲು ಮಹಿಳಾ ಶಿಕ್ಷಕಿ, ಸಮಾಜ ಸುಧಾರಕಿ ಸಾವಿತ್ರಿಬಾ ಫುಲೆ ಅವರ ಜನ್ಮದಿನವಾಗಿದೆ. ಈ ಸಂದರ್ಭದಲ್ಲಿ ಮಹಿಳಾ ಶಿಕ್ಷಣ ಮತ್ತು ಸಾಮಾಜಿಕ ಸಮಾನತೆಗೆ ಅವರ ಕೊಡುಗೆಗಳನ್ನು ಸ್ಮರಿಸಲಾಗುತ್ತದೆ ಎಂದರು.
ಮಹಿಳಾ ಸಮಿತಿ ಸಂಚಾಲಕಿ ಪರವೀನಬಾನು ಹವಾಲ್ದಾರ ಮಾತನಾಡಿ, ಮಾತೆ ಸಾವಿತ್ರಿಬಾ ಫುಲೆ ಅವರು ಹೆಣ್ಣುಮಕ್ಕಳಿಗೆ ಶಿಕ್ಷಣ ನೀಡುವ ಮೂಲಕ ಸಾಮಾಜಿಕ ಅಡತಡೆಗಳನ್ನು ಎದುರಿಸಿ, ಅಂದಿನ ಕಠಿಣ ಪರಿಸ್ಥಿತಿಯಲ್ಲೂ ತಮ್ಮ ಛಲವನ್ನು ಬಿಡದೆ ಮಹಿಳೆಯರಿಗೆ ಶಿಕ್ಷಣದ ಜ್ಞಾನವನ್ನು ನೀಡಿದರು ಎಂದರು.ಈ ವೇಳೆ ಸ್ಲಂ ಸಮಿತಿ ಕಾರ್ಯದರ್ಶಿ ಅಶೋಕ ಕುಸಬಿ, ಸಮಿತಿ ಮುಖಂಡರಾದ ಮೌಲಾಸಾಬ ಗಚ್ಚಿ, ಶರಣಪ್ಪ ಸೂಡಿ, ಸಲೀಂ ಹರಿಹರ, ಖಾಜಾಸಾಬ ಇಸ್ಮಾಯಿಲನವರ, ಮೆಹರುನಿಸಾ ಡಂಬಳ, ಇಬ್ರಾಹಿಂ ಮುಲ್ಲಾ, ಪ್ರೇಮವ್ವ ಮಣ್ಣವಡ್ಡರ, ಮೈಮುನ ಬೈರಕದಾರ, ಮಕ್ತುಮಸಾಬ ಮುಲ್ಲಾನವರ, ಸಲೀಮ ಬೈರಕದಾರ, ಗೌಸಸಾಬ ಅಕ್ಕಿ ಹಾಗೂ ಇತರರು ಇದ್ದರು.
ಆದರಳ್ಳಿ ಗ್ರಾಮಕ್ಕೆ ಉಪಕಾರ್ಯದರ್ಶಿ ದಿಢೀರ್ ಭೇಟಿಲಕ್ಷ್ಮೇಶ್ವರ: ತಾಲೂಕಿನ ಅದರಹಳ್ಳಿ ಗ್ರಾಮ ಪಂಚಾಯಿತಿಗೆ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಸಿ.ಆರ್. ಮುಂಡರಗಿ ಭೇಟಿ ನೀಡಿ ಜಲಜೀವನ್ ಮಿಷನ್ ಹಾಗೂ ಕುಡಿಯುವ ನೀರಿನ ಕುಂದುಕೊರತೆ ಪರಿಶೀಲಿಸಿ, ಸಾರ್ವಜನಿಕರಿಗೆ ಕುಡಿಯುವ ನೀರಿನ ತೊಂದರೆಯಾಗದಂತೆ ಗಮನ ಹರಿಸಬೇಕೆಂದು ಎಇಇ ಮಲ್ಲಿಕಾರ್ಜುನ್ ಪಾಟೀಲ್ ಅವರಿಗೆ ಅಗತ್ಯ ಸಲಹೆ ನೀಡಿದರು.ಶಾಲಾ ಕಟ್ಟಡಗಳಿಗೆ ಭೇಟಿ ನೀಡಿ ಶಾಲೆಯ ಅಕ್ಷರ ದಾಸೋಹ ಶೈಕ್ಷಣಿಕ ಪ್ರಗತಿ ಪರಿಶೀಲಿಸಿದರು ಹಾಗೂ ನರೇಗಾ ಕ್ರಿಯಾಯೋಜನೆ, ಕರ ವಸೂಲಾತಿ, ಎಸ್‌ಬಿಎಂ ವಿವಿಧ ಯೋಜನೆಗಳ ಕುರಿತು ಪ್ರಗತಿ ಪರಿಶೀಲಿಸಿದರು.ಈ ವೇಳೆ ತಾಪಂ ಇಒ ಧರ್ಮರ ಕೃಷ್ಣಪ್ಪ, ಬಿಇಒ, ತಾಲೂಕು ಮಟ್ಟದ ಅಧಿಕಾರಿಗಳು, ಜಿಲ್ಲಾಮಟ್ಟದ ಅಧಿಕಾರಿಗಳು, ಪಿಡಿಒ, ಕಾರ್ಯದರ್ಶಿ, ಗ್ರಾಮ ಪಂಚಾಯಿತಿ ಅಧ್ಯಕ್ಷ, ಸದಸ್ಯರು ಗ್ರಾಮ ಪಂಚಾಯಿತಿ ಸಿಬ್ಬಂದಿ ಉಪಸ್ಥಿತರಿದ್ದರು.