ಮಹಿಳೆಯರ ಶಿಕ್ಷಣಕ್ಕಾಗಿ ಚಳವಳಿ ಹಾದಿ ತುಳಿದಿದ್ದ ಸಾವಿತ್ರಿಬಾಯಿ ಫುಲೆ: ಡಾ.ಪ್ರಭಾ

| Published : Jan 20 2025, 01:30 AM IST

ಮಹಿಳೆಯರ ಶಿಕ್ಷಣಕ್ಕಾಗಿ ಚಳವಳಿ ಹಾದಿ ತುಳಿದಿದ್ದ ಸಾವಿತ್ರಿಬಾಯಿ ಫುಲೆ: ಡಾ.ಪ್ರಭಾ
Share this Article
  • FB
  • TW
  • Linkdin
  • Email

ಸಾರಾಂಶ

ಸಮಾಜದಲ್ಲಿ ಮೊದಲು ಅವಿಭಕ್ತ ಕುಟುಂಬಗಳಿಂದಾಗಿ ಮಕ್ಕಳು ಚಿಕ್ಕಂದಿನಿಂದಲೇ ಉತ್ತಮ ಮೌಲ್ಯಗಳನ್ನು ತಿಳಿದುಕೊಳ್ಳುತ್ತಿದ್ದರು. ಆದರೆ, ಇಂದು ವಿಭಕ್ತ ಕುಟುಂಬಗಳೇ ಹೆಚ್ಚಾಗಿದ್ದು ಜೀವನದ ಮೌಲ್ಯಗಳು ಮರೆಯಾಗುತ್ತಿವೆ. ಆದ್ದರಿಂದ ಮಕ್ಕಳಿಗೆ ಜೀವನ ಮೌಲ್ಯಗಳ ಬಗ್ಗೆ ತಿಳಿಸಬೇಕು ಎಂದು ದಾವಣಗೆರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಲಕ್ಷ್ಮೇಶ್ವರದಲ್ಲಿ ಹೇಳಿದ್ದಾರೆ.

- ಲಕ್ಷ್ಮೇಶ್ವರದಲ್ಲಿ ಶ್ರೀ ತಾಯಿ ಪಾರ್ವತಿ ಮಕ್ಕಳ ಬಳಗ ಅಮೃತ ಮಹೋತ್ಸವ - - - ಕನ್ನಡಪ್ರಭ ವಾರ್ತೆ ದಾವಣಗೆರೆ/ಲಕ್ಷ್ಮೀಶ್ವರ

ಸಮಾಜದಲ್ಲಿ ಮೊದಲು ಅವಿಭಕ್ತ ಕುಟುಂಬಗಳಿಂದಾಗಿ ಮಕ್ಕಳು ಚಿಕ್ಕಂದಿನಿಂದಲೇ ಉತ್ತಮ ಮೌಲ್ಯಗಳನ್ನು ತಿಳಿದುಕೊಳ್ಳುತ್ತಿದ್ದರು. ಆದರೆ, ಇಂದು ವಿಭಕ್ತ ಕುಟುಂಬಗಳೇ ಹೆಚ್ಚಾಗಿದ್ದು ಜೀವನದ ಮೌಲ್ಯಗಳು ಮರೆಯಾಗುತ್ತಿವೆ. ಆದ್ದರಿಂದ ಮಕ್ಕಳಿಗೆ ಜೀವನ ಮೌಲ್ಯಗಳ ಬಗ್ಗೆ ತಿಳಿಸಬೇಕು ಎಂದು ದಾವಣಗೆರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದರು.

ಗದಗ ಜಿಲ್ಲೆಯ ಲಕ್ಷ್ಮೇಶ್ವರದಲ್ಲಿ ಭಾನುವಾರ ನಡೆದ ಶ್ರೀ ತಾಯಿ ಪಾರ್ವತಿ ಮಕ್ಕಳ ಬಳಗದ ಅಮೃತ ಮಹೋತ್ಸವ ಹಾಗೂ ಪ್ರೌಢಶಾಲೆ ಸುವರ್ಣ ಮಹೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.

ಮಹಿಳೆಯರ ಶಿಕ್ಷಣದ ಬಗ್ಗೆ ಸ್ವಾತಂತ್ರ‍್ಯಪೂರ್ವದಲ್ಲೇ ಸಾವಿತ್ರಿ ಬಾಯಿ ಫುಲೆ ಅವರು ದೊಡ್ಡ ಚಳವಳಿಯನ್ನೇ ಮಾಡಿದ್ದರು. ಅದೇ ರೀತಿ ಶ್ರೀ ತಾಯಿ ಪಾರ್ವತಿ ಮಕ್ಕಳ ಬಳಗದವರು ಮಹಿಳೆಯರೇ ಸೇರಿ ಶಿಕ್ಷಣ ಸಂಸ್ಥೆ ನಡೆಸುತ್ತಿರುವುದು ಹಾಗೂ ಶಿಕ್ಷಣ ದಾಸೋಹವನ್ನು ಮೂರು ತಲೆಮಾರಿನಿಂದ ಮಾಡುತ್ತಿರುವುದು ಶ್ಲಾಘನೀಯ ಎಂದರು.

ಸಂವಿಧಾನದ ಅರಿವು ಮೂಡಿಸುವ ಕೆವೈಸಿ ಅಭಿಯಾನವನ್ನು ದಾವಣಗೆರೆ ಜಿಲ್ಲೆಯಲ್ಲಿ ಮುಂಬರುವ ದಿನದಲ್ಲಿ ಕೈಗೊಳ್ಳಲಿದ್ದೇವೆ. ನಮ್ಮ ಸಂವಿಧಾನದಲ್ಲಿ ಎಲ್ಲಾ ರೀತಿಯ ಹಕ್ಕುಗಳನ್ನು ನೀಡಲಾಗಿದೆ. ದಾವಣಗೆರೆ ಕ್ಷೇತ್ರದ ಪ್ರಥಮ ಮಹಿಳಾ ಸಂಸದೆಯಾಗಿ ನನ್ನ ಕ್ಷೇತ್ರದ ಅಭಿವೃದ್ಧಿಗೆ ಕೆಲಸ ಮಾಡಲು ಹೆಮ್ಮೆಯಾಗುತ್ತದೆ ಎಂದು ತಿಳಿಸಿದರು.

ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರು ಸಾನಿಧ್ಯ ವಹಿಸಿದ್ದರು. ಬಳಗದ ಅಧ್ಯಕ್ಷೆ ಸುವರ್ಣಬಾಯಿ ಬಿ. ಬಹದ್ದೂರ ದೇಸಾಯಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಶಾಸಕ ಡಾ.ಚಂದ್ರು ಲಮಾಣಿ, ಮಾಜಿ ಶಾಸಕರಾದ ಜಿ.ಎಂ.ಮಹಾಂತಶೆಟ್ಟರ, ಜಿ.ಎಸ್.ಗಡ್ಡದ್ದೇವರಮಠ, ರಾಮಕೃಷ್ಣ ದೊಡ್ಡಮನಿ, ಪುರಸಭೆ ಅಧ್ಯಕ್ಷರಾದ ಯಲ್ಲಮ್ಮ ದುರಗಣ್ಣವರ, ಬಳಗದ ಸದಸ್ಯರು ಇತರರು ಭಾಗವಹಿಸಿದ್ದರು.

- - -

-19ಕೆಡಿವಿಜಿ36:

ಲಕ್ಷ್ಮೇಶ್ವರದಲ್ಲಿ ನಡೆದ ಶ್ರೀ ತಾಯಿ ಪಾರ್ವತಿ ಮಕ್ಕಳ ಬಳಗದ ಅಮೃತ ಮಹೋತ್ಸವ ಹಾಗೂ ಪ್ರೌಢಶಾಲೆ ಸುವರ್ಣ ಮಹೋತ್ಸವ ಸಮಾರಂಭದಲ್ಲಿ ದಾವಣಗೆರೆ ಸಂಸದೆ ಡಾ.ಪ್ರಭಾ ಅವರು ರಂಭಾಪುರಿ ಶ್ರೀಗಳಿಂದ ಆಶೀರ್ವಾದ ಪಡೆದರು.