ಸಾರಾಂಶ
ನಗರದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಸಮಾಜ ಸುಧಾರಕಿ, ರಾಷ್ಟ್ರದ ಪ್ರಥಮ ಶಿಕ್ಷಕಿಯವರಲ್ಲಿ ಒಬ್ಬರಾದ ಸಾವಿತ್ರಿಬಾಯಿ ಫುಲೆ ಜನ್ಮದಿನಾಚರಣೆ ನೆರವೇರಿತು.
ಕನ್ನಡಪ್ರಭ ವಾರ್ತೆ ಮಡಿಕೇರಿ
ಸಾವಿತ್ರಿ ಬಾಯಿಫುಲೆ ಅವರು ರಾಷ್ಟ್ರದ ಸ್ತ್ರೀವಾದಿ ಚಳುವಳಿಯ ಹರಿಕಾರರಲ್ಲಿ ಒಬ್ಬರಾಗಿದ್ದಾರೆ. ಪತಿ ಜ್ಯೋತಿ ಬಾಫುಲೆ ಅವರ ಜೊತೆಗೂಡಿ ಮಹಾರಾಷ್ಟ್ರದ ಪುಣೆಯಲ್ಲಿ ೧೮೪೮ರಲ್ಲಿ ರಾಷ್ಟ್ರದ ಮೊದಲ ಬಾಲಕಿಯರ ಶಾಲೆ ತೆರೆದಿದ್ದು ವಿಶೇಷವೇ ಸರಿ ಎಂದು ಜಿಲ್ಲಾ ಉಪ ಯೋಜನಾ ಸಮನ್ವಯ ಅಧಿಕಾರಿ ಎಂ.ಕೃಷ್ಣಪ್ಪ ಹೇಳಿದ್ದಾರೆ.ನಗರದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಆಚರಿಸಿದ ಸಮಾಜ ಸುಧಾರಕಿ, ರಾಷ್ಟ್ರದ ಪ್ರಥಮ ಶಿಕ್ಷಕಿಯವರಲ್ಲಿ ಒಬ್ಬರಾದ ಸಾವಿತ್ರಿಬಾಯಿ ಫುಲೆ ಜನ್ಮದಿನಾಚರಣೆಯಲ್ಲಿ ಅವರು ಮಾತನಾಡಿದರು.
ಮಹಾರಾಷ್ಟ್ರದಲ್ಲಿ ೧೮೩೧ ರ ಜ.೩ ರಂದು ಸಾವಿತ್ರಿ ಬಾಯಿಫುಲೆ ಜನಿಸಿದ್ದು, ಮಹಿಳೆಯರ ಹಕ್ಕುಗಳಿಗಾಗಿ ಹೋರಾಟ ನಡೆಸಿದ್ದಾರೆ ಎಂದು ಗಣ್ಯರು ಸ್ಮರಿಸಿದರು.ಜಾತಿಭೇದ, ಲಿಂಗಾಧಾರಿತ ಅಸಮಾನತೆ ಹೋಗಲಾಡಿಸಲು ಅವರು ತಮ್ಮ ಜೀವನ ಮುಡಿಪಾಗಿಟ್ಟಿದ್ದರು. ಅವರ ನಿಲುವುಗಳು ಮತ್ತು ಅವರ ಸುಧಾರಣಾ ಕಾರ್ಯಗಳು ಜನಮೆಚ್ಚುಗೆಗೆ ಪಾತ್ರವಾಗಿದ್ದವು ಎಂದು ಕೃಷ್ಣಪ್ಪ ವಿವರಿಸಿದರು.
ಬಾಲಕಿಯರಿಗಾಗಿ ಮೊದಲ ಶಾಲೆಯನ್ನು ತೆರೆದ ಭಾರತದ ಮೊದಲ ಮಹಿಳಾ ಶಿಕ್ಷಕಿ. ಆಧುನಿಕ ಶಿಕ್ಷಣದ ತಾಯಿ ಎಂದು ಕರೆಯಲ್ಪಡುವ ಸಾವಿತ್ರಿಬಾಯಿಫುಲೆ ಎರಡು ಶತಮಾನಗಳ ಹಿಂದೆ ಸಮುದಾಯಗಳಿಗೆ ಆಧುನಿಕ ಶಿಕ್ಷಣ ಕೊಟ್ಟಂ ಸೇವೆ ಅವಿಸ್ಮರಣಿಯ ಎಂದು ಶಾಲೆಯ ಮುಖ್ಯೋಪಾಧ್ಯಾಯ ಸುಶೀಲಾ ತಿಳಿಸಿದರು.ಎಸ್‌ಡಿಎಂಸಿ ಅಧ್ಯಕ್ಷ ಜಗದೀಶ್, ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಪಾಲ್ಗೊಂಡರು.