ಸಾರಾಂಶ
ಭಾರತ ದೇಶದ ಮೊದಲ ಮಹಿಳಾ ಶಿಕ್ಷಕಿ ಮಾತೆ ಸಾವಿತ್ರಿಬಾಯಿಫುಲೆ ಅವರ ಅಕ್ಷರ ಕ್ರಾಂತಿಯ ಫಲವಾಗಿ ಇಂದು ಭಾರತ ದೇಶದ ಸರ್ವ ಸಮುದಾಯದ ಮಹಿಳೆಯರಿಗೆ ಅಕ್ಷರ ಕಲಿಯುವ ಹಕ್ಕು ದೊರೆತಿದೆ. ಅಂಧಕಾರದಲ್ಲಿದ್ದ ಸಾಮಾಜಿಕ ವ್ಯವಸ್ಥೆಯನ್ನು ಶಿಕ್ಷಣ ನೀಡುವ ಮೂಲಕ ಬೆಳಕು ನೀಡಿದ ದಿಟ್ಟ ಮಹಿಳೆ.
ಕನ್ನಡಪ್ರಭ ವಾರ್ತೆ ಗೌರಿಬಿದನೂರು
ಜಿಲ್ಲಾ ಕದಳಿ ಮಹಿಳಾ ವೇದಿಕೆ ಮತ್ತು ಕರ್ನಾಟಕ ರಾಜ್ಯ ಸಾವಿತ್ರಿ ಬಾಯಿಫುಲೆ ಶಿಕ್ಷಕರ ಸಂಘದ ವತಿಯಿಂದ ಅಕ್ಷರದವ್ವ, ದೇಶದ ಮೊದಲ ಮಹಿಳಾ ಶಿಕ್ಷಕಿ ಸಾವಿತ್ರಿಬಾಯಿ ಫುಲೆ ಜಯಂತಿ ಆಚರಿಸಲಾಯಿತು.ಸಮಾರಂಭದಲ್ಲಿ ಸಾವಿತ್ರಿ ಬಾಯಿ ಪುಲೆ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿ, ಶ್ರೀನಿವಾಸಮೂರ್ತಿ ಚಾಲನೆ ನೀಡಿದರು.ದೇಶದ ಪ್ರಥಮ ಶಿಕ್ಷಕಿಬಳಿಕ ಮಾತನಾಡಿ, ಭಾರತ ದೇಶದ ಮೊದಲ ಮಹಿಳಾ ಶಿಕ್ಷಕಿ ಮಾತೆ ಸಾವಿತ್ರಿಬಾಯಿಫುಲೆ ಅವರ ಅಕ್ಷರ ಕ್ರಾಂತಿಯ ಫಲವಾಗಿ ಇಂದು ಭಾರತ ದೇಶದ ಸರ್ವ ಸಮುದಾಯದ ಮಹಿಳೆಯರಿಗೆ ಅಕ್ಷರ ಕಲಿಯುವ ಹಕ್ಕು ದೊರೆತಿದೆ. ಅಂಧಕಾರದಲ್ಲಿದ್ದ ಸಾಮಾಜಿಕ ವ್ಯವಸ್ಥೆಯನ್ನು ಶಿಕ್ಷಣ ನೀಡುವ ಮೂಲಕ ಬೆಳಕು ನೀಡಿದರು ಎಂದರು.
ಕೆಎಚ್‌ಪಿ ಬಣದ ಮುಖ್ಯಸ್ಥೆ ಶಶಿಕಲಾ ಮಾತನಾಡಿ, ಯಾವುದೇ ವ್ಯವಸ್ಥೆ ಇಲ್ಲದ ಕಾಲದಲ್ಲಿ ಸಾವಿತ್ರಿ ಬಾಯಿ ಫುಲೆ ಸಾಕಷ್ಟು ಸಾಧನೆ ಮಾಡಿದ್ದಾರೆ. ಆದರೆ ಇಂದಿನ ಕಾಲದಲ್ಲಿ ಸಾಧನೆ ಬಗ್ಗೆ ಯೋಚನೆ ಮಾಡದೇ ಕೇವಲ ಮೊಬೈಲ್ ಗೀಳಿನಲ್ಲಿ ಬಿದ್ದಿದ್ದಾರೆ, ಶಿಕ್ಷಕರು ಸಮಾಜದ ಅಂಕುಡೊಂಕುಗಳನ್ನು ತಿದ್ದಬೇಕು ಎಂದು ತಿಳಿಸಿದರು.ಸಮಾಜ ಸುಧಾರಕಿ ಫುಲೆ
ಸರ್ವೋದಯ ಸಂಘದ ಜಿಲ್ಲಾ ಅಧ್ಯಕ್ಷೆ ಪದ್ಮ ಮಾತನಾಡಿ, ಸಾವಿತ್ರಿ ಬಾಯಿಫುಲೆ ಸಮಾಜ ಸುಧಾರಣೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಮಹಿಳೆಯರಿಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದರು ಎಂದು ತಿಳಿಸಿದರು.ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹಿಳಾ ಸಾಧಕರನ್ನು ಸನ್ಮಾನಿಸಲಾಯಿತು.ಇದೇ ಸಂದರ್ಭದಲ್ಲಿ, ನೌಕರರ ಸಂಘದ ಅಧ್ಯಕ್ಷ ಮಂಜುನಾಥ್, ಸಾವಿತ್ರಿಬಾಯಿಪುಲೆ ರಾಷ್ಟ್ರಪ್ರಶಸ್ತಿ ಪುರಸ್ಕೃತರಾದ ಚಂದ್ರಕಲಾ ಜಯರಾಮ್, ಸಾವಿತ್ರಿಬಾಯಿ ಪುಲೆ ಘಟಕ ತಾಲೂಕು ಅಧ್ಯಕ್ಷರು ಸುವರ್ಣಮ್ಮ ಇದ್ದರು.