ಹೊರ ಗುತ್ತಿಗೆ ಎಇ ವಜಾಕ್ಕೆ ಎಸ್ಸಿ-ಎಸ್ಟಿ ಗುತ್ತಿಗೆದಾರರ ಒತ್ತಾಯ

| Published : Aug 19 2025, 01:00 AM IST

ಹೊರ ಗುತ್ತಿಗೆ ಎಇ ವಜಾಕ್ಕೆ ಎಸ್ಸಿ-ಎಸ್ಟಿ ಗುತ್ತಿಗೆದಾರರ ಒತ್ತಾಯ
Share this Article
  • FB
  • TW
  • Linkdin
  • Email

ಸಾರಾಂಶ

ರಾಮನಗರ: ಎಸ್ಸಿ ಎಸ್ಟಿ ಗುತ್ತಿಗೆದಾರರ ಮೇಲೆ ದೌರ್ಜನ್ಯ ಎಸಗುತ್ತಿರುವ ಕೆಆರ್ ಐಡಿಎಲ್ ಕಚೇರಿಯಲ್ಲಿ ಹೊರ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಸಹಾಯಕ ಎಂಜಿನಿಯರ್ ಮಂಜುನಾಥ್‌ನನ್ನು ಸೇವೆಯಿಂದ ವಜಾಗೊಳಿಸಿ ಶಿಸ್ತು ಕ್ರಮ ಜರುಗಿಸುವಂತೆ ಆಗ್ರಹಿಸಿ ಎಸ್ಸಿ ಎಸ್ಟಿ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳು ಕೆಆರ್ ಐಡಿಎಲ್ ಸಹಾಯಕ ಕಾರ್ಯಪಾಲಕ ಅಭಿಯಂತರ ಲೋಕೇಶ್ ಅವರಿಗೆ ಮನವಿ ಸಲ್ಲಿಸಿದರು.

ನಗರದ ಕೆಆರ್ ಐಡಿಎಲ್ ಕಚೇರಿಯಲ್ಲಿ ಸಹಾಯಕ ಕಾರ್ಯಪಾಲಕ ಅಭಿಯಂತರರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಪದಾಧಿಕಾರಿಗಳು, ಸಹಾಯಕ ಎಂಜಿನಿಯರ್ ಮಂಜುನಾಥ್ ಎಸ್ಸಿಎಸ್ಟಿ ಗುತ್ತಿಗೆದಾರರಿಗೆ ಜಾತಿ ನಿಂದನೆ ಮಾಡುವುದರ ಜೊತೆಗೆ ಪ್ರಾಣ ಬೆದರಿಕೆವೊಡ್ಡುತ್ತಿದ್ದಾನೆ ಎಂದು ದೂರಿದರು.

ಈ ವೇಳೆ ಸಂಘದ ಜಿಲ್ಲಾಧ್ಯಕ್ಷ ಚಿಕ್ಕಣ್ಣ ಮಾತನಾಡಿ, ಮಂಜುನಾಥ್ ಕಾನೂನು ಬಾಹಿರವಾಗಿ ಶ್ರೀ ಮಂಜುನಾಥ ಕನ್ ಷ್ಟ್ರಕ್ಷನ್ , ಶ್ರೀ ರಾಜು ಎಂಟರ್ ಪ್ರೈಸಸ್, ಎ.ಎಂ.ಎಂಟರ್ ಪ್ರೈಸಸ್ ಹಾಗೂ ರುತಿಕ್ಷ ಎಂಟರ್ ಪ್ರೈಸಸ್ ಸಂಸ್ಥೆಗಳನ್ನು ಮಾಡಿಕೊಂಡಿದ್ದು, ಆ ಮೂಲಕ ಕೆಆರ್ ಐಡಿಎಲ್ ನ ಕಾಮಗಾರಿಗಳನ್ನು ನಿರ್ವಹಿಸಿ ಅಧಿಕಾರ ದುರುಪಯೋಗ ಪಡಿಸಿಕೊಂಡು ಸರ್ಕಾರದ ಹಣವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.

ನಾಲ್ಕು ಸಂಸ್ಥೆಗಳ ಮುಖಾಂತರ ಮಂಜುನಾಥ್ ಕೆಆರ್ ಐಡಿಎಲ್ ನ ಕೋಟ್ಯಂತರ ರುಪಾಯಿಗಳನ್ನು ಸಹಾಯಕ ಎಂಜಿನಿಯರ್ ಅಧಿಕಾರವನ್ನು ಬಳಸಿ ಲೂಟಿ ಮಾಡಿದ್ದಾನೆ. ಆದ್ದರಿಂದ ಈತನ ಮೇಲೆ ಕಾನೂನು ಕ್ರಮ ಜರುಗಿಸಿ ಸರ್ಕಾರದ ಬೊಕ್ಕಸದಿಂದ ಹಣ ಬಳಸಿರುವ ಬಗ್ಗೆ ಸೂಕ್ತ ತನಿಖೆ ನಡೆಸಿ ಸೇವೆಯಿಂದ ವಜಾಗೊಳಿಸಿ ಶಿಸ್ತು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

ಮಂಜುನಾಥ್ ವಿರುದ್ಧ ಕಾನೂನು ರೀತಿ ಕ್ರಮ ಜರುಗಿಸದಿದ್ದರೆ ರಾಮನಗರ ಕೆಆರ್ ಐಡಿಎಲ್ ಕಚೇರಿ ಹಾಗೂ ಬೆಂಗಳೂರಿನ ಆನಂದ ರಾವ್ ಸರ್ಕಲ್ ನಲ್ಲಿರುವ ಕೆಆರ್ ಐಡಿಎಲ್ ವ್ಯವಸ್ಥಾಪಕ ನಿರ್ದೇಶಕರ ಕಚೇರಿ ಎದುರು ತಮಟೆ ಚಳವಳಿ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಹೊರ ಗುತ್ತಿಗೆ ಸಹಾಯಕ ಎಂಜಿನಿಯರ್ ವಿರುದ್ಧ ಜಿಲ್ಲಾಧಿಕಾರಿಗಳು, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಕೆಆರ್ ಐಡಿಎಲ್ ವ್ಯವಸ್ಥಾಪಕ ನಿರ್ದೇಶಕರು, ಲೋಕಾಯುಕ್ತ ಎಸ್ಪಿ, ಶಾಸರು ಹಾಗೂ ವಾಣಿಜ್ಯ ತೆರಿಗೆ ಇಲಾಖೆ ಸಹಾಯಕ ಆಯುಕ್ತರಿಗೂ ದೂರು ಸಲ್ಲಿಸಿ ಕಾನೂನು ಕ್ರಮಕ್ಕೆ ಒತ್ತಾಯಿಸುವುದಾಗಿ ಚಿಕ್ಕಣ್ಣ ಹೇಳಿದರು.

ಈ ಸಂದರ್ಭದಲ್ಲಿ ಸಂಘದ ಪದಾಧಿಕಾರಿಗಳಾದ ಶಿವಲಿಂಗಯ್ಯ, ಕುಂಬಾಪುರ ಬಾಬು, ಶಿವರಾಜು, ರವಿಕುಮಾರ್ , ಯೋಗೇಶ್, ಗಿರೀಶ್, ದಿನೇಶ್, ಗಿರಿಯಪ್ಪ, ಅಶೋಕ್, ಭೈರವ, ರಾಜಣ್ಣ, ಸುರೇಶ್, ಅರುಣ್ ಕುಮಾರ್, ಚಂದ್ರಪ್ಪ ಮತ್ತಿತರರು ಹಾಜರಿದ್ದರು.

18ಕೆಆರ್ ಎಂಎನ್ 1.ಜೆಪಿಜಿ

ರಾಮನಗರ ಜಿಲ್ಲಾ ಎಸ್ಸಿ ಎಸ್ಟಿ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳು ಕೆಆರ್ ಐಡಿಎಲ್ ಸಹಾಯಕ ಕಾರ್ಯಪಾಲಕ ಅಭಿಯಂತರ ಲೋಕೇಶ್ ಅವರಿಗೆ ಮನವಿ ಸಲ್ಲಿಸಿದರು.