ಎಸ್‌ಸಿಡಿಸಿಸಿ ಬ್ಯಾಂಕ್ ಗ್ರಾಹಕ ಸ್ನೇಹಿ: ಡಾ.ಎಂಎನ್‌ಆರ್‌

| Published : Apr 21 2025, 12:55 AM IST

ಸಾರಾಂಶ

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್‌ಸಿಡಿಸಿಸಿ ಬ್ಯಾಂಕ್ ) ಗ್ರಾಹಕರ ಸೇವೆಯಲ್ಲಿ ರಾಷ್ಟ್ರೀಕೃತ ಬ್ಯಾಂಕ್‌ಗಳಿಗಿಂತ ಮುಂಚೂಣಿಯಲ್ಲಿದೆ. ಬ್ಯಾಂಕ್ ತನ್ನ 113 ಶಾಖೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಹೊಂದಿದ್ದು, ಗ್ರಾಹಕರಿಗೆ ಉತ್ಕೃಷ್ಟ ಸೇವೆ ನೀಡಿ ‘ಗ್ರಾಹಕ ಸ್ನೇಹಿ ಬ್ಯಾಂಕ್’ ಆಗಿ ಬೆಳೆದಿದೆ ಎಂದು ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಹೇಳಿದ್ದಾರೆ.

ಕನ್ನಡಪ್ರಭ ವಾರ್ತೆ ಮಂಗಳೂರು

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್‌ಸಿಡಿಸಿಸಿ ಬ್ಯಾಂಕ್ ) ಗ್ರಾಹಕರ ಸೇವೆಯಲ್ಲಿ ರಾಷ್ಟ್ರೀಕೃತ ಬ್ಯಾಂಕ್‌ಗಳಿಗಿಂತ ಮುಂಚೂಣಿಯಲ್ಲಿದೆ. ಬ್ಯಾಂಕ್ ತನ್ನ 113 ಶಾಖೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಹೊಂದಿದ್ದು, ಗ್ರಾಹಕರಿಗೆ ಉತ್ಕೃಷ್ಟ ಸೇವೆ ನೀಡಿ ‘ಗ್ರಾಹಕ ಸ್ನೇಹಿ ಬ್ಯಾಂಕ್’ ಆಗಿ ಬೆಳೆದಿದೆ ಎಂದು ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಹೇಳಿದ್ದಾರೆ.

ಬ್ಯಾಂಕಿನ ಸಿಬ್ಬಂದಿಗೆ ಭಾನುವಾರ ಮಂಗಳೂರಿನಲ್ಲಿ ಗಿಫ್ಟ್ ಕೂಪನ್ ವಿತರಣಾ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಿಬ್ಬಂದಿಗೆ ಪೂರಕವಾಗಿರುವ ಪಿಂಚಣಿ ಯೋಜನೆಯನ್ನು ರಾಜ್ಯದಲ್ಲಿ ಮೊದಲಿಗೆ ಜಾರಿಗೆ ತಂದ ಹೆಗ್ಗಳಿಕೆ ಎಸ್‌ಸಿಡಿಸಿಸಿ ಬ್ಯಾಂಕಿಗೆ ಇದೆ. ಮಾತ್ರವಲ್ಲ, ಬ್ಯಾಂಕ್ ಕಾಲ ಕಾಲಕ್ಕೆ ವಿವಿಧ ಸವಲತ್ತುಗಳನ್ನು ಸಿಬ್ಬಂದಿಗೆ ನೀಡುತ್ತಿದೆ. ಹಾಗಾಗಿ ಸಿಬ್ಬಂದಿ ತಮ್ಮ ಕಾರ್ಯದಕ್ಷತೆಯನ್ನು ಇನ್ನಷ್ಟು ಹೆಚ್ಚಿಸಿ ಬ್ಯಾಂಕಿನ ಅಭಿವೃದ್ಧಿಗೆ ಶ್ರಮಿಸಬೇಕು ಎಂದರು.ಬ್ಯಾಂಕಿನ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೋಟ್ಟು ಮಾತನಾಡಿ, ಬ್ಯಾಂಕ್ ಇಂದು ರಾಷ್ಟ್ರ ಮಟ್ಟದಲ್ಲಿ ಗುರುತಿಸುವಂತಾಗಲು ಸಹಕಾರ ರತ್ನ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರ ದಕ್ಷ ನಾಯಕತ್ವ ಕಾರಣ. 31 ವರ್ಷಗಳ ಕಾಲ ಎಸ್‌ಸಿಡಿಸಿಸಿ ಬ್ಯಾಂಕ್‌ನ್ನು ಅತ್ಯುನ್ನತ ಮಟ್ಟಕ್ಕೇರಿಸಿದ ಅವರು ಬ್ಯಾಂಕಿನ ಸರ್ವಾಂಗೀಣ ಪ್ರಗತಿಯ ರೂವಾರಿಯಾಗಿದ್ದಾರೆ ಎಂದು ಹೇಳಿದರು.10 ಸಾವಿರ ರು. ಮೌಲ್ಯದ ಗಿಫ್ಟ್ ಕೂಪನ್:

ಬ್ಯಾಂಕಿನ ಸಿಬ್ಬಂದಿಗೆ ತಲಾ 10 ಸಾವಿರ ರು. ಮೌಲ್ಯದ ಗಿಫ್ಟ್ ಕೂಪನ್ ವಿತರಿಸಲಾಯಿತು. ಬ್ಯಾಂಕಿನ ಸಿಬ್ಬಂದಿ ಪರವಾಗಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆ. ಗೋಪಾಲಕೃಷ್ಣ ಭಟ್, ಮಹಾಪ್ರಬಂಧಕ ಸುನಿಲ್ ಕುಮಾರ್ ಹೊಳ್ಳ, ಸಹಾಯಕ ಮಹಾಪ್ರಬಂಧಕ ಅಶೋಕ್ ಎಚ್.ಎಂ. ಹಾಗೂ ಸಿಬ್ಬಂದಿಗಳಾದ ಶ್ರೇಯಾ ಶೆಟ್ಟಿ, ಪ್ರಕಾಶ್ ಕೆ. ಹಾಗೂ ರಮೇಶ್ ಅವರು ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರಿಂದ 10 ಸಾವಿರ ರು. ಮೌಲ್ಯದ ಗಿಫ್ಟ್ ಕೂಪನ್ ಸ್ವೀಕರಿಸಿದರು.ಎಸ್‌ಸಿಡಿಸಿಸಿ ಬ್ಯಾಂಕಿನ ಉಪಾಧ್ಯಕ್ಷ ವಿನಯ ಕುಮಾರ್ ಸೂರಿಂಜೆ, ನಿರ್ದೇಶಕರಾದ ಭಾಸ್ಕರ್ ಎಸ್. ಕೋಟ್ಯಾನ್, ಶಶಿಕುಮಾರ್ ರೈ ಬಾಲ್ಯೋಟ್ಟು, ಮಹೇಶ್ ಎಂ. ಹೆಗ್ಡೆ, ಸದಾಶಿವ ಉಳ್ಳಾಲ್, ಮೋನಪ್ಪ ಶೆಟ್ಟಿ, ರಾಜೇಶ್ ರಾವ್ ಇದ್ದರು. ಬ್ಯಾಂಕಿನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಗೋಪಾಲಕೃಷ್ಣ ಭಟ್ ಸ್ವಾಗತಿಸಿದರು. ಮಹಾಪ್ರಬಂಧಕ ಸುನಿಲ್ ಕುಮಾರ್ ಹೊಳ್ಳ ವಂದಿಸಿದರು. ಉಪ ಮಹಾಪ್ರಬಂಧಕ ನಿತ್ಯಾನಂದ ಶೇರಿಗಾರ್ ನಿರೂಪಿಸಿದರು.