ಶನಿವಾರ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಬ್ಯಾಂಕ್ ಅಧ್ಯಕ್ಷ ಡಾ. ಎಂ. ಎನ್ ರಾಜೇಂದ್ರ ಕುಮಾರ್ ಅವರು ಹೊಸ ವಾಹನಕ್ಕೆ ಹಸಿರು ನಿಶಾನೆ ತೋರಿ, ಎಸ್ಪಿ ಹರಿರಾಮ್ ಶಂಕರ್ ಅವರಿಗೆ ಕೀಲಿ ಕೈ ಹಸ್ತಾಂತರ ಮಾಡಿದರು.
ಕೀಲಿ ಕೈ ಹಸ್ತಾಂತರಿಸಿದ ಸಹಕಾರಿ ರತ್ನ ಡಾ. ಎಂ.ಎನ್. ರಾಜೇಂದ್ರ ಕುಮಾರ್
ಉಡುಪಿ: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ತಮ್ಮ ಸಾಂಸ್ಥಿಕ ಸಾಮಾಜಿಕ ಹೊಣೆ ನಿಧಿಯಿಂದ (ಸಿಎಸ್‌ಆರ್ ಫಂಡ್) ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಗೆ ಬೋಲೇರೋ ವಾಹನ ಕೊಡುಗೆಯಾಗಿ ನೀಡಿದೆ.
ಶನಿವಾರ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಬ್ಯಾಂಕ್ ಅಧ್ಯಕ್ಷ ಡಾ. ಎಂ. ಎನ್ ರಾಜೇಂದ್ರ ಕುಮಾರ್ ಅವರು ಹೊಸ ವಾಹನಕ್ಕೆ ಹಸಿರು ನಿಶಾನೆ ತೋರಿ, ಎಸ್ಪಿ ಹರಿರಾಮ್ ಶಂಕರ್ ಅವರಿಗೆ ಕೀಲಿ ಕೈ ಹಸ್ತಾಂತರ ಮಾಡಿದರು.ಈ ಸಂದರ್ಭ ಮಾತನಾಡಿದ ಡಾ.ಎಂ.ಎನ್ ರಾಜೇಂದ್ರಕುಮಾರ್, ರಾಜ್ಯ ಸರ್ಕಾರದ ಇಲಾಖೆಗಳಲ್ಲೇ ಪೊಲೀಸ್ ಇಲಾಖೆ ಬಹಳಷ್ಟು ಸವಾಲುಗಳನ್ನು ಎದುರಿಸಿಕೊಂಡು ಕೆಲಸ ಮಾಡುತ್ತದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಪೊಲೀಸ್ ಇಲಾಖೆಯ ದೊಡ್ಡ ಜವಾಬ್ದಾರಿ. ಆದ್ದರಿಂದ ವಾಹನಕ್ಕಾಗಿ ಈ ಇಲಾಖೆಯಿಂದ ಮನವಿ ಬಂದಾಗ ಬಹಳ ಸಂತಸದಿಂದ ನಾವು ಒಪ್ಪಿಕೊಂಡೆವು ಎಂದರು.ಪೊಲೀಸ್ ಇಲಾಖೆ ಹಲವಾರು ವಾಹನಗಳು 15 ವರ್ಷವನ್ನು ಪೂರೈಸಿದ್ದು, ಅನೇಕ ವಾಹನಗಳು ದುರಸ್ತಿಯಲ್ಲಿ ಇರುವುದರಿಂದ ಇಲಾಖೆಗೆ ಕರ್ತವ್ಯ ನಿರ್ವಹಿಸಲು ಸಮಸ್ಯೆ ಆಗುತ್ತಿತ್ತು. ಹೀಗಾಗಿ ಎಸ್‌ಸಿಡಿಸಿಸಿ ಬ್ಯಾಂಕ್ ಸಿಎಸ್‌ಆರ್ ಫಂಡ್ ಮೂಲಕ ವಾಹನ ಒದಗಿಸಲು ಇಲಾಖೆ ಮನವಿ ಸಲ್ಲಿಸಿತ್ತು, ಅದರಂತೆ ಬ್ಯಾಂಕ್ ಈ ವಾಹನ ಕೊಡುಗೆಯಾಗಿ ನೀಡಿದೆ.ಪೊಲೀಸ್ ಇಲಾಖೆ ವತಿಯಿಂದ ಡಾ. ರಾಜೇಂದ್ರ ಕುಮಾರ್ ಅವರನ್ನು ಸನ್ಮಾನಿಸಿ ಧನ್ಯವಾದ ಸಲ್ಲಿಸಲಾಯಿತು. ಬ್ಯಾಂಕ್ ನಿರ್ದೇಶಕ ಡಾ.ದೇವಿಪ್ರಸಾದ್ ಶೆಟ್ಟಿ ಬೆಳಪು ಮುಂತಾದವರಿದ್ದರು.