ಸಾರಾಂಶ
ಹಾವೇರಿ: ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್‌ದಾಸ್ ಅವರ ಏಕ ವಿಚಾರಣಾ ಆಯೋಗ ಪರಿಶಿಷ್ಟ ಜಾತಿಯ ಒಳ ಮೀಸಲಾತಿ ವರ್ಗೀಕರಣ- 2025ಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಮೇ 5ರಿಂದ ಮೂರು ಹಂತದಲ್ಲಿ ಪರಿಶಿಷ್ಟ ಜಾತಿ ಸಮುದಾಯ ವಿವಿಧ ಅಂಶಗಳ ಬಗ್ಗೆ ದತ್ತಾಂಶಗಳನ್ನು ಶೇಖರಿಸಲು ಸಮೀಕ್ಷೆ ಕಾರ್ಯ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳು ಹಾಗೂ ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಅಧ್ಯಕ್ಷ ಡಾ. ವಿಜಯಮಹಾಂತೇಶ ದಾನಮ್ಮನವರ ತಿಳಿಸಿದ್ದಾರೆ.ಈ ಸಮೀಕ್ಷೆ ಕಾರ್ಯಕ್ಕೆ ಪ್ರತಿ ಮತಗಟ್ಟೆಗೆ ಒಬ್ಬರಂತೆ ಗಣತಿದಾರರು, ಪ್ರತಿ 10ರಿಂದ 12 ಗಣತಿದಾರರಿಗೆ ಓರ್ವ ಮೇಲ್ವಿಚಾರಕರನ್ನು ಹಾಗೂ ಪ್ರತಿ ವಿಧಾನಸಭಾ ಕ್ಷೇತ್ರದ ಪ್ರತಿ ಮತಗಟ್ಟೆಗೆ ಒಬ್ಬರಂತೆ ಗಣತಿದಾರರನ್ನು ನೇಮಿಸಲಾಗಿದೆ. ಮೇ 5ರಿಂದ ಮೇ 17ರ ವರೆಗೆ ಮೊದಲ ಹಂತ ಗಣತಿ ಜರುಗಲಿದೆ. ಈ ಅವಧಿಯಲ್ಲಿ ನೇಮಕಗೊಂಡ ಗಣತಿದಾರರು ತಮಗೆ ವಹಿಸಿರುವ ಮತಗಟ್ಟೆ ವ್ಯಾಪ್ತಿಯ ಪರಿಶಿಷ್ಟ ಜಾತಿ ಸಮುದಾಯಗಳ ಮನೆ ಮನೆಗೆ ತೆರಳಿ ಗಣತಿ ಕಾರ್ಯ ಕೈಗೊಳ್ಳುವರು.ಮನೆ- ಮನೆ ಗಣತಿಯಲ್ಲಿ ಬಾಕಿ ಉಳಿದವರಿಗಾಗಿ ಎರಡನೇ ಹಂತದಲ್ಲಿ ಮೇ 19ರಿಂದ ಮೇ 21ರ ವರೆಗೆ ಮತಗಟ್ಟೆ ವ್ಯಾಪ್ತಿಯಲ್ಲಿ ಗುರುತಿಸಿರುವ ವಿಶೇಷ ಶಿಬಿರಗಳಿಗೆ ಪರಿಶಿಷ್ಟ ಜಾತಿ ಸಮುದಾಯದವರು ತೆರಳಿ ಗಣಿತಿದಾರರಿಗೆ ಮಾಹಿತಿ ನೀಡಬೇಕು. ಮೇ 19ರಿಂದ ಮೇ 23ರ ವರೆಗೆ ಮೂರನೇ ಹಂತದ ಗಣತಿ ಜರುಗಲಿದ್ದು, ಈ ಅವಧಿಯಲ್ಲಿ ಮನೆ ಮನೆ ಸಮೀಕ್ಷೆ ಹಾಗೂ ವಿಶೇಷ ಶಿಬಿರದಲ್ಲಿ ಜಾತಿಯ ಬಗ್ಗೆ ಘೋಷಣೆ ಮಾಡಿಕೊಳ್ಳದೇ ಇರುವವರು ಆನ್‌ಲೈನ್ ಮೂಲಕ ಸ್ವಯಂ ಘೋಷಣೆ ಮಾಡಿಕೊಳ್ಳಬೇಕು(ಸ್ವಯಂ ಘೋಷಣೆಗೆ ಆಧಾರ್ ನಂಬರ್ ಹಾಗೂ ಜಾತಿ ಪ್ರಪತ್ರದ ಆರ್.ಡಿ. ನಂಬರ್ ಕಡ್ಡಾಯ).ಈ ಗಣತಿ ಸಮಯದಲ್ಲಿ ಗಣತಿದಾರರು ಮನೆ ಮನೆಗೆ ಭೇಟಿ ನೀಡಿ ಪರಿಶಿಷ್ಟ ಜಾತಿ ಸಮುದಾಯದ ವಿವಿಧ ಅಂಶಗಳ ಬಗ್ಗೆ ದತ್ತಾಂಶಗಳನ್ನು ಶೇಖರಿಸಲಾಗುತ್ತದೆ. ಈ ಸಮಯದಲ್ಲಿ ಸಾರ್ವಜನಿಕರು ಗಣಿದಾರರಿಗೆ ಆಧಾರ್ ಕಾರ್ಡ್, ಪಡಿತರ ಚೀಟಿ(ರೇಷನ್ ಕಾರ್ಡ್) ಮೊಬೈಲ್ ನಂಬರ್ ಕಡ್ಡಾಯವಾಗಿ ನೀಡಬೇಕು. ಈ ಗಣತಿಯು ಪರಿಶಿಷ್ಟ ಜಾತಿಯ ಒಳಮೀಸಲಾತಿಗೆ ಸಂಬಂಧಿಸಿದ್ದರಿಂದ ಪರಿಶಿಷ್ಟ ಜಾತಿಯ ಒಳ ಪಂಗಡಗಳ ಕುರಿತು ಸ್ಪಷ್ಡವಾಗಿ ಗಣತಿದಾರರಿಗೆ ತಿಳಿಸಲು ಕೋರಲಾಗಿದೆ. ಈವರೆಗೆ ಆಧಾರ್ ಕಾರ್ಡ್ ಹೊಂದದೇ ಇರುವ ಪರಿಶಿಷ್ಟ ಜಾತಿ ಸಮುದಾಯದವರು ಗಣತಿ ಕಾರ್ಯ ಮುಕ್ತಾಯವಾಗುವುದರೊಳಗಾಗಿ ಆಧಾರ್ ಕೇಂದ್ರಗಳಿಗೆ ತೆರಳಿ ಆಧಾರ್ ಕಾರ್ಡ್ ಮಾಡಿಕೊಳ್ಳುವಂತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಸವಣ್ಣದೇವರ ಜಾತ್ರಾ ಮಹೋತ್ಸವ ಇಂದಿನಿಂದಸವಣೂರು: ಪಟ್ಟಣದ ಹೊರಕೇರಿ ಓಣಿಯ ಬಸವಣ್ಣದೇವರ ಜಾತ್ರಾ ಮಹೋತ್ಸವವು ಏ. 30 ಮತ್ತು ಮೇ 1ರಂದು ಎರಡು ದಿನಗಳ ಕಾಲ ನಡೆಯಲಿದೆ.
ಏ. 30ರಂದು ಬೆಳಗ್ಗೆ ಬಸವಣ್ಣದೇವರ ಮೂರ್ತಿಗೆ ರುದ್ರಾಭಿಷೇಕ, 108 ಬಿಲ್ವಾರ್ಚನೆ, ವಿಶೇಷ ಪೂಜೆ ಜರುಗುಲಿದೆ. ನಂತರ 8 ಗಂಟೆಗೆ ಬಸವಣ್ಣ ದೇವರ ದೇವಸ್ಥಾನದಿಂದ ವಾದ್ಯ ವೈಭವಗಳೊಂದಿಗೆ ಪಲ್ಲಕ್ಕಿ ಉತ್ಸವ ಮತ್ತು ಎತ್ತಿನ ಮೆರವಣಿಗೆ ಪಟ್ಟಣದ ಪ್ರಮುಖ ಬೀದಿಯಲ್ಲಿ ನಡೆಯಲಿದೆ.ಸಂಜೆ 5 ಗಂಟೆಗೆ ಬಸವಣ್ಣದೇವರ ಮಹಾ ರಥೋತ್ಸವವು ಜರುಗುವುದು. ನಂತರ ರಾತ್ರಿ ಶಿವಭಜನೆ ಕಾರ್ಯಕ್ರಮಗಳು ನಡೆಯಲಿವೆ. ಮೇ 1ರಂದು ಸಂಜೆ 6 ಗಂಟೆಗೆ ಕಡುಬಿನ ಕಾಳಗ ಜರುಗುವುದು ಎಂದು ಬಸವಣ್ಣದೇವರ ಸೇವಾ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.