ಪರಿಶಿಷ್ಟರ ಹಣ ಗ್ಯಾರಂಟಿಗೆ ಬಳಸಕೂಡದು: ದಸಂಸ

| Published : Aug 08 2025, 01:00 AM IST

ಸಾರಾಂಶ

ಪರಿಶಿಷ್ಟರ ಹಣ ಪರಿಶಿಷ್ಟರಿಗೆ ಮಾತ್ರ, ಎಸ್‌ಸಿಎಸ್‌ಪಿ - ಟಿಎಸ್‌ಪಿ-2013 ರ ಕಾಯ್ದೆಯ ಸಮರ್ಪಕ ಜಾರಿಗೆ ಒತ್ತಾಯಿಸಿ ಗುರುವಾರ ಇಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ ನಡೆಸಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿತು.

ಕನ್ನಡಪ್ರಭ ವಾರ್ತೆ ಯಾದಗಿರಿ

ಪರಿಶಿಷ್ಟರ ಹಣ ಪರಿಶಿಷ್ಟರಿಗೆ ಮಾತ್ರ, ಎಸ್‌ಸಿಎಸ್‌ಪಿ - ಟಿಎಸ್‌ಪಿ-2013 ರ ಕಾಯ್ದೆಯ ಸಮರ್ಪಕ ಜಾರಿಗೆ ಒತ್ತಾಯಿಸಿ ಗುರುವಾರ ಇಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ ನಡೆಸಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿತು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರಿಗೆ ಪ್ರದರ್ಶನ ನಡೆಸಿದ ದಸಂಸ ಕಾರ್ಯಕರ್ತರು, ಎಸ್.ಸಿ.ಎಸ್.ಪಿ.- ಟಿ.ಎಸ್.ಪಿ ಕಾಯ್ದೆ 2013 ನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರು ಆರ್ಥಿಕವಾಗಿ ಹಾಗೂ ಶೈಕ್ಷಣಿಕವಾಗಿ ಅಭಿವೃದ್ಧಿ ಅವಕಾಶಗಳನ್ನು ಶಾಸನಬದ್ಧವಾಗಿ ಹೊಂದಲು ರಾಜ್ಯ ಸರ್ಕಾರಗಳು ಕಾಯ್ದೆ ರೂಪಿಸಿದೆ.

ಈ ಕಾಯ್ದೆಯ ಕಲಂ 7ಡಿ ಮತ್ತು 7ಸಿ ರಲ್ಲಿ ಕಾಯ್ದೆಯಡಿ ನಿಗದಿಪಡಿಸಿದ ಅನುದಾನವನ್ನು ಅನ್ಯ ಉದ್ದೇಶಗಳಿಗೆ ಬಳಸಿಕೊಂಡು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳನ್ನು ಸರ್ಕಾರಗಳು ವಂಚಿಸುತ್ತಿವೆ. ಆದ್ದರಿಂದ 7ಡಿ ಮತ್ತು 7ಸಿ ಕಲಂಗಳನ್ನು ರದ್ದು ಪಡಿಸುವಂತೆ ಹಲವಾರು ದಲಿತರ ಹೋರಾಟಗಳ ಫಲದಿಂದ, 7ಡಿ ರದ್ದು ಮಾಡಿ 7ಸಿ ಯನ್ನು ಯಥಾಪ್ರಕಾರ ಉಳಿಸಿಕೊಂಡು ಅನ್ಯ ಕಾರ್ಯಗಳಿಗೆ ಬಳಸುತ್ತಿದೆ. ಆದರೆ, ಪ್ರಸ್ತುತ ಸರ್ಕಾರ ಘೋಷಿಸಿರುವ ಗ್ಯಾರಂಟಿ ಯೋಜನೆಗಳಿಗೆ ಎಸ್ಸಿಪಿ ಟಿಎಸ್‌ಪಿ ಹಣ ರಾಜಾರೋಷವಾಗಿ ಬಳಕೆ ಮಾಡಿಕೊಳ್ಳಲಾಗುತ್ತಿದೆ, ಗ್ಯಾರಂಟಿ ಯೋಜನೆಗಳನ್ನು ಒಳಗೊಂಡಂತೆ ಅನ್ಯ ಯೋಜನೆಗಳಿಗೆ ಎಸ್.ಸಿ.ಎಸ್.ಪಿ-ಟಿ.ಎಸ್.ಪಿ. ಹಣ ಉಪಯೋಗಿಸುವಂತೆ ಅವಕಾಶ ನೀಡುವ ಮೂಲಕ ಪರಿಶಿಷ್ಟರಿಗೆ ಆರ್ಥಿಕ ಮತ್ತು ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದುವ ಅವಕಾಶವನ್ನು ಸರ್ಕಾರಗಳೇ ನೇರವಾಗಿ ಅಸ್ಪೃಶ್ಯ ಆಚರಣೆ ಮಾಡುತ್ತಿದೆ. ಪರಿಶಿಷ್ಟರ ಹಣವನ್ನು ಪರಿಶಿಷ್ಟರಿಗೆ ಮೀಸಲಿಡಬೇಕೆಂದು ಒತ್ತಾಯಿಸಿದರು.

ಅನ್ಯ ಕಾರ್ಯಗಳಿಗೆ ಬಳಸಿರುವ ಹಣವನ್ನು ವಾಪಸ್ ಪಡೆದು ಪರಿಶಿಷ್ಟ ಅಭಿವೃದ್ಧಿಗಾಗಿ ಉಪಯೋಗಿಸಬೇಕೆಂದು ಒತ್ತಾಯಿಸುತ್ತದೆ. ಅಲ್ಲದೆ 38 ಇಲಾಖೆಗಳಲ್ಲಿರುವ ಬ್ಯಾಕ್ ಲಾಗ್ ಹುದ್ದೆಗಳನ್ನು ಕಾಲ ಕಾಲಕ್ಕೆ ತುಂಬುವ ಮೂಲಕ ದಲಿತರ ಏಳಿಗೆಗಾಗಿ ಕ.ದ.ಸಂ.ಸ ಒತ್ತಾಯಿಸುತ್ತದೆ. ಪರಿಶಿಷ್ಟರ ಹಣವನ್ನು ಬಳಕೆ ಮಾಡದೆ ನಿರ್ಲಕ್ಷ್ಯತೆ ವಹಿಸಿ ಸರ್ಕಾರಕ್ಕೆ ವಾಪಸ್ ಕಳುಹಿಸುವ ಮತ್ತು ಅನ್ಯ ಕಾರ್ಯಗಳಿಗೆ ಬಳಸುವ ಜಿಲ್ಲಾ ಮಟ್ಟದ ಜಾಗೃತಿ ಸಮಿತಿ ಮುಖ್ಯಸ್ಥರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದರು.

ಜಿಲ್ಲಾ ಸಂಚಾಲಕ ಮೋಹನರಾಜಗೌಡ ಮನವಿ ಸಲ್ಲಿಸಿದರು, ಈ ಸಂದರ್ಭದಲ್ಲಿ ಮಲ್ಲಿಕಾರ್ಜುನ ಕಟ್ಟಿಮನಿ, ಅಶೋಕ ಗುರುಮಠಕಲ್, ಹಣುಮಂತ ಗೊಬ್ಬೂರ ಶಹಾಪೂರ, ಶಿವಶರಣಪ್ಪ ಸಾವೂರ, ಭೀಮರಾಯ ಕರಣಿಗಿ, ಆಂಜಿನೇಯ ಟೊಣ್ಣೂರು, ಶರಣಪ್ಪ ಉಕ್ಕನಾಳ, ಆಕಾಶ ದೊಡ್ಡಮನಿ, ಸೂರ್ಯಕಾಂತ ಗುತ್ತಿಪೇಟೆ, ಭೀಮಾಶಂಕರ ಮಲ್ಹಾರ, ಹೊನ್ನಪ್ಪ, ನಾಟೇಕರ್, ಸುಂದರ ರಸ್ತಾಪೂರ, ಹಣಮಂತ ಹುಲಕಲ್, ಶಂಕರು ಮದ್ದರಕಿ, ಶರಣಪ್ಪ ಮದ್ದರಕಿ, ಬಸವರಾಜ ಜಗಲಿ, ಮಲ್ಲಿಕಾರ್ಜುನ ಸಿಂಗರಿ, ಯಲ್ಲಪ್ಪ ಮಲದಕಲ್, ರಿಯಾಜ್ ಗುರುಮಠಕಲ್, ಸುರೇಶ, ಕೃಷ್ಣ ಸೇರಿದಂತೆ ಅನೇಕರು ಇದ್ದರು.