ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಯುವಕರಲ್ಲಿ ನಾಯಕತ್ವ ಗುಣ, ಕ್ರೀಡಾ ಪ್ರತಿಭೆ, ಸಾಂಸ್ಕೃತಿಕ ಆಸಕ್ತಿ, ವೈಜ್ಞಾನಿಕ ಮನೋಭಾವ ಹಾಗೂ ಸಾಮಾಜಿಕ ಹೊಣೆಗಾರಿಕೆಯನ್ನು ಬೆಳೆಸುವ ಉದ್ದೇಶದಿಂದ ರಾಜ್ಯ ಸರ್ಕಾರ ಜಾರಿಗೊಳಿಸಿರುವ ಭಾರತ್ ಜೋಡೋ ಯುವ ಸಂಘ ಯೋಜನೆ ಮುದ್ದೇಬಿಹಾಳ ತಾಲೂಕಿನ ಯುವಕರಿಗೂ ಹೊಸ ಅವಕಾಶದ ಬಾಗಿಲು ತೆರೆದಿದೆ ಎಂದು ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಹಾಗೂ ಶಾಸಕ ಸಿ.ಎಸ್.ನಾಡಗೌಡ(ಅಪ್ಪಾಜಿ) ಹೇಳಿದರು.
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ
ಯುವಕರಲ್ಲಿ ನಾಯಕತ್ವ ಗುಣ, ಕ್ರೀಡಾ ಪ್ರತಿಭೆ, ಸಾಂಸ್ಕೃತಿಕ ಆಸಕ್ತಿ, ವೈಜ್ಞಾನಿಕ ಮನೋಭಾವ ಹಾಗೂ ಸಾಮಾಜಿಕ ಹೊಣೆಗಾರಿಕೆಯನ್ನು ಬೆಳೆಸುವ ಉದ್ದೇಶದಿಂದ ರಾಜ್ಯ ಸರ್ಕಾರ ಜಾರಿಗೊಳಿಸಿರುವ ಭಾರತ್ ಜೋಡೋ ಯುವ ಸಂಘ ಯೋಜನೆ ಮುದ್ದೇಬಿಹಾಳ ತಾಲೂಕಿನ ಯುವಕರಿಗೂ ಹೊಸ ಅವಕಾಶದ ಬಾಗಿಲು ತೆರೆದಿದೆ ಎಂದು ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಹಾಗೂ ಶಾಸಕ ಸಿ.ಎಸ್.ನಾಡಗೌಡ(ಅಪ್ಪಾಜಿ) ಹೇಳಿದರು.ಪಟ್ಟಣದ ತಮ್ಮ ಗೃಹ ಕಚೇರಿಯಲ್ಲಿ ರವಿವಾರ ಯರಝರಿ, ಹುಲ್ಲೂರ, ಬಿದರಕುಂದಿ ಸೇರಿ ವಿವಿಧ ಗ್ರಾಮಗಳ ಮುಖಂಡರೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ರಾಜ್ಯಾದ್ಯಂತ 10 ಸಾವಿರ ಭಾರತ್ ಜೋಡೋ ಯುವ ಸಂಘಗಳನ್ನು ಸ್ಥಾಪಿಸಲು ಸರ್ಕಾರ ಕ್ರಮ ಕೈಗೊಂಡಿದೆ. ಪ್ರತಿ ಸಂಘಕ್ಕೆ ವಾರ್ಷಿಕ ₹10 ಲಕ್ಷ ಅನುದಾನ ನೀಡಲಾಗುತ್ತಿದೆ. ಯೋಜನೆಯ ಒಟ್ಟು ವಾರ್ಷಿಕ ವೆಚ್ಚ ಸುಮಾರು ₹1,010 ಕೋಟಿ ಎಂದು ತಿಳಿಸಿದರು.ಮುದ್ದೇಬಿಹಾಳ ತಾಲೂಕಿನ ಗ್ರಾಮ ಪಂಚಾಯಿತಿ ಹಾಗೂ ನಗರ ಪ್ರದೇಶದ ಅರ್ಹ ಯುವಕರು ಯೋಜನೆಯಡಿ ಸಂಘ ರಚಿಸಿಕೊಂಡು ಕ್ರೀಡಾಕೂಟ, ಯೋಗ, ಫಿಟ್‌ನೆಸ್, ಆರೋಗ್ಯ ಮತ್ತು ಸ್ವಚ್ಛತಾ ಕಾರ್ಯಕ್ರಮ, ಸಾಂಸ್ಕೃತಿಕ ಚಟುವಟಿಕೆ, ಪರಿಸರ ಸಂರಕ್ಷಣೆ, ಸಾಮಾಜಿಕ ಸೇವೆ, ಸಮುದಾಯ ಅಭಿವೃದ್ಧಿ ಹಾಗೂ ಕೌಶಲ್ಯಾಭಿವೃದ್ಧಿ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬಹುದು ಎಂದು ನಾಡಗೌಡ ಹೇಳಿದರು.16 ರಿಂದ 35 ವರ್ಷದ ಯುವಕರಿಗೆ ಅವಕಾಶ:
ಭಾರತ್ ಜೋಡೋ ಯುವ ಸಂಘದ ಸದಸ್ಯತ್ವ ಪಡೆಯಲು 16 ರಿಂದ 35 ವರ್ಷದೊಳಗಿನ ಯುವಕ-ಯುವತಿಯರು ಅರ್ಹರು. ಒಂದು ಸಂಘದಲ್ಲಿ ಕನಿಷ್ಠ 100 ಯುವ ಸದಸ್ಯರು ಇರಬೇಕು. ಸಂಬಂಧಪಟ್ಟ ಗ್ರಾಮ ಪಂಚಾಯಿತಿ ಅಥವಾ ನಗರ ವಾರ್ಡ್‌ನ ಯುವಕರು ಸದಸ್ಯರಾಗಬದು. ಒಬ್ಬ ವ್ಯಕ್ತಿ ಒಂದು ಸಂಘದಲ್ಲಿ ಮಾತ್ರ ಸದಸ್ಯರಾಗಬಹುದು ಎಂದು ತಿಳಿಸಿದರು.ಯುವಕರನ್ನು ಸಂಘಟಿಸಿ ಪ್ರತಿಭೆಯನ್ನು ಗುರುತಿಸುವುದರ ಜೊತೆಗೆ, ಸಮಾಜಮುಖಿ ಚಟುವಟಿಕೆಗಳಲ್ಲಿ ಅವರನ್ನು ಸಕ್ರಿಯವಾಗಿ ತೊಡಗಿಸಿಕೊಳ್ಳುವ ಉದ್ದೇಶ ಯೋಜನೆಯದ್ದಾಗಿದೆ. ಗ್ರಾಮೀಣ ಪ್ರದೇಶದ ಯುವಕರು ಯೋಜನೆಯ ಸದುಪಯೋಗ ಪಡೆದುಕೊಂಡು ತಮ್ಮ ಗ್ರಾಮಗಳ ಅಭಿವೃದ್ಧಿಯಲ್ಲಿ ಪಾಲುದಾರರಾಗಬೇಕು ಎಂದರು.ಗ್ರಾಮಕ್ಕೊಂದು ಯುವ ಸಂಘಯೋಜನೆಯ ಮಾರ್ಗಸೂಚಿಯಂತೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಒಂದು ಸಂಘ ಹಾಗೂ ನಗರ ಪ್ರದೇಶಗಳಲ್ಲಿ ಜನಸಂಖ್ಯೆ ಆಧಾರದಲ್ಲಿ ಸಂಘಗಳನ್ನು ಸ್ಥಾಪಿಸುವ ವ್ಯವಸ್ಥೆ ಮಾಡಲಾಗಿದೆ. ಯೋಜನೆಯನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅನುಷ್ಠಾನಗೊಳಿಸಲಿದ್ದು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ನಗರಾಭಿವೃದ್ಧಿ, ಕಂದಾಯ ಹಾಗೂ ಶಿಕ್ಷಣ ಇಲಾಖೆಗಳು ಸಹಕಾರ ನೀಡಲಿವೆ. ಯುವಕರಿಗೆ ಕೇವಲ ಕ್ರೀಡೆ ಅಥವಾ ಸಾಂಸ್ಕೃತಿಕ ಚಟುವಟಿಕೆಗಳಿಗಷ್ಟೇ ಸೀಮಿತವಾಗದೆ, ಸಾಮಾಜಿಕ ಸಾಮರಸ್ಯ, ಪರಿಸರ ಸಂರಕ್ಷಣೆ, ಸಮುದಾಯ ಸೇವೆ, ಆರೋಗ್ಯ, ಫಿಟ್‌ನೆಸ್ ಹಾಗೂ ಸ್ಥಳೀಯ ಅಭಿವೃದ್ಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಯೋಜನೆ ವೇದಿಕೆ ಕಲ್ಪಿಸುತ್ತದೆ ಎಂದು ತಿಳಿಸಿದರು.ಈ ವೇಳೆ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನಾ ಸಮಿತಿ ತಾಲೂಕಾಧ್ಯಕ್ಷ ಶಿವಶಂಕರ ಹಿರೇಗೌಡರ, ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರಣ್ಣ ತಾರನಾಳ, ಮುಖಂಡರಾದ ಬಿ.ಕೆ.ಬಿರಾದಾರ, ವೈ.ಎಚ್.ವಿಜಯಕರ, ಮಲ್ಲಣ್ಣ ಅಪರಾಧಿ ಸೇರಿ ಹುಲ್ಲೂರ, ಯರಝರಿ, ನೇಬಗೇರಿ, ಬಿದರಕುಂದಿ ಗ್ರಾಮಗಳ ಮುಖಂಡರು ಉಪಸ್ಥಿತರಿದ್ದರು.ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳಯುವಕರಲ್ಲಿ ನಾಯಕತ್ವ ಗುಣ, ಕ್ರೀಡಾ ಪ್ರತಿಭೆ, ಸಾಂಸ್ಕೃತಿಕ ಆಸಕ್ತಿ, ವೈಜ್ಞಾನಿಕ ಮನೋಭಾವ ಹಾಗೂ ಸಾಮಾಜಿಕ ಹೊಣೆಗಾರಿಕೆಯನ್ನು ಬೆಳೆಸುವ ಉದ್ದೇಶದಿಂದ ರಾಜ್ಯ ಸರ್ಕಾರ ಜಾರಿಗೊಳಿಸಿರುವ ಭಾರತ್ ಜೋಡೋ ಯುವ ಸಂಘ ಯೋಜನೆ ಮುದ್ದೇಬಿಹಾಳ ತಾಲೂಕಿನ ಯುವಕರಿಗೂ ಹೊಸ ಅವಕಾಶದ ಬಾಗಿಲು ತೆರೆದಿದೆ ಎಂದು ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಹಾಗೂ ಶಾಸಕ ಸಿ.ಎಸ್.ನಾಡಗೌಡ(ಅಪ್ಪಾಜಿ) ಹೇಳಿದರು.