ಸಾರಾಂಶ
ಪರಿಸರ ಸಮತೋಲನಕ್ಕಾಗಿ ಜಿಲ್ಲಾಡಳಿತ ಭವನ ಸೇರಿದಂತೆ ಕಚೇರಿಗಳ ಆವರಣದಲ್ಲಿ ಗಿಡ, ಮರಗಳ ಬೆಳೆಸಲು ಈ ವರ್ಷ ಸಸಿ ಹಾಕಲಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ಹೇಳಿದ್ದಾರೆ.
ಕನ್ನಡಪ್ರಭ ವಾರ್ತೆ, ದಾವಣಗೆರೆ ಪರಿಸರ ಸಮತೋಲನಕ್ಕಾಗಿ ಜಿಲ್ಲಾಡಳಿತ ಭವನ ಸೇರಿದಂತೆ ಕಚೇರಿಗಳ ಆವರಣದಲ್ಲಿ ಗಿಡ, ಮರಗಳ ಬೆಳೆಸಲು ಈ ವರ್ಷ ಸಸಿ ಹಾಕಲಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ಹೇಳಿದರು.
ನಗರದ ಜಿಲ್ಲಾಡಳಿತ ಭವನ ಆವರಣದಲ್ಲಿ ಬುಧವಾರ ಜಿಲ್ಲಾಡಳಿತ ಮತ್ತು ಮಾಲಿನ್ಯ ನಿಯಂತ್ರಣ ಮಂಡಳಿ, ಅರಣ್ಯ ಇಲಾಖೆ ವತಿಯಿಂದ ಸಸಿ ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಇಲಾಖೆಗಳ ಅವರಣ ಮತ್ತು ನೀರು ಪೂರೈಕೆ ಮಾಡುವ ಟ್ಯಾಂಕ್‌ಗಳ ಸುತ್ತಮುತ್ತ ಹಾಗೂ ಖಾಲಿ ಇರುವ ಸರ್ಕಾರಿ ಜಾಗಗಳಲ್ಲಿ ಸಸಿ ನೆಡುವ ಮೂಲಕ ವೃಕ್ಷಗಳಾಗಿಸುವುದು, ಆ ಮೂಲಕ ಪರಿಸರ ಸಮತೋಲನ ಕಾಯ್ದುಕೊಳ್ಳಲು ಯೋಜಿಸಲಾಗಿದೆ. ಜಿಲ್ಲೆಯ ರೈತ ಸಂಘಟನೆಗಳು ಸಹ ಪರಿಸರ ಸಂರಕ್ಷಣೆಗೆ ಗಿಡ, ಮರ ಬೆಳೆಸಲು ಮುಂದೆ ಬಂದಿದ್ದಾರೆ ಎಂದರು.
ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಶ್ ಬಿ. ಇಟ್ನಾಳ್, ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ್, ಅಪರ ಜಿಲ್ಲಾಧಿಕಾರಿ ಸೈಯ್ಯದಾ ಆಫ್ರೀನಾ ಭಾನು ಎಸ್. ಬಳ್ಳಾರಿ, ಮಹಾನಗರ ಪಾಲಿಕೆ ಆಯುಕ್ತರಾದ ರೇಣುಕಾ ಹಾಗೂ ಇನ್ನಿತರರು ಭಾಗವಹಿಸಿದ್ದರು.- - - -5ಕೆಡಿವಿಜಿ35ಃ:
ದಾವಣಗೆರೆ ಜಿಲ್ಲಾಡಳಿತ ಭವನದ ಆವರಣದಲ್ಲಿ ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ ಸಸಿ ನೆಡುವ ಮೂಲಕ ಪರಿಸರ ದಿನಾಚರಣೆ ಆಚರಿಸಿದರು.