ವಾಜಪೇಯಿ ಜಾರಿಗೊಳಿಸಿದ ಯೋಜನೆಗಳು ಇಂದಿಗೂ ಜನಮಾನಸದಲ್ಲಿ ಉಳಿದಿವೆ

| Published : Dec 26 2024, 01:01 AM IST

ವಾಜಪೇಯಿ ಜಾರಿಗೊಳಿಸಿದ ಯೋಜನೆಗಳು ಇಂದಿಗೂ ಜನಮಾನಸದಲ್ಲಿ ಉಳಿದಿವೆ
Share this Article
  • FB
  • TW
  • Linkdin
  • Email

ಸಾರಾಂಶ

ಮೊಳಕಾಲ್ಮುರು: ದೇಶ ಕಂಡಂತಹ ಪ್ರಬುದ್ಧ ರಾಜಕಾರಣಿಗಳಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಒಬ್ಬರು. ಅವರು ಪ್ರಧಾನಿಯಾಗಿದ್ದ ಸಂಧರ್ಭದಲ್ಲಿ ಅವರು ಜಾರಿ ಮಾಡಿದ್ದ ಜನಪರ ಯೋಜನೆಗಳು ಇಂದಿಗೂ ಜನಮಾನಸದಲ್ಲಿ ಉಳಿದಿವೆ ಎಂದು ಬಿಜೆಪಿ ಮಂಡಲ ಅಧ್ಯಕ್ಷ ಡಾ.ಪಿ.ಎಂ.ಮಂಜುನಾಥ ಹೇಳಿದರು.

ಮೊಳಕಾಲ್ಮುರು: ದೇಶ ಕಂಡಂತಹ ಪ್ರಬುದ್ಧ ರಾಜಕಾರಣಿಗಳಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಒಬ್ಬರು. ಅವರು ಪ್ರಧಾನಿಯಾಗಿದ್ದ ಸಂಧರ್ಭದಲ್ಲಿ ಅವರು ಜಾರಿ ಮಾಡಿದ್ದ ಜನಪರ ಯೋಜನೆಗಳು ಇಂದಿಗೂ ಜನಮಾನಸದಲ್ಲಿ ಉಳಿದಿವೆ ಎಂದು ಬಿಜೆಪಿ ಮಂಡಲ ಅಧ್ಯಕ್ಷ ಡಾ.ಪಿ.ಎಂ.ಮಂಜುನಾಥ ಹೇಳಿದರು.ಪಟ್ಟಣದ ಬಿಜಿಪಿ ಕಚೇರಿಯಲ್ಲಿ ಬುಧವಾರ ನಡೆದ ವಾಜಪೇಯ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ದೇಶ ಕಂಡ ಅಪ್ರತಿಮ ನಾಯಕರಲ್ಲಿ ಒಬ್ಬರು. ಅವರು ಅಪ್ಪಟ ದೇಶ ಪ್ರೇಮಿಯಾಗಿದ್ದರು. ಜನಸಂಘ ಸಂಸ್ಥಾಪಕರಲ್ಲಿ ಒಬ್ಬರಾಗಿ ದೇಶಾದ್ಯಂತ ಯುವಕರನ್ನು ಸಂಘಟಿಸಿ ಬಿಜೆಪಿಯನ್ನು ಕಟ್ಟಿ ಬೆಳೆಸಿದರು. ನೇರ ನಿಷ್ಠುರವಾದಿಯಾಗಿ ದೇಶ ಕಟ್ಟುವ ಕಾರ್ಯದಲ್ಲಿ ಅನೇಕ ಏಳುಬೀಳುಗಳನ್ನು ಕಂಡಿದ್ದರು. ಅಂದುಕೊಂಡ ಕೆಲಸಗಳನ್ನು ಯಶಸ್ವಿಯಾಗಿ ನಿರ್ವಹಿಸುತ್ತಿದ್ದ ಅವರು ಪಕ್ಷಕ್ಕಾಗಿ ತಮ್ಮ ಇಡೀ ಜೀವನವನ್ನೇ ಮುಡುಪಾಗಿಟ್ಟಿದ್ದರು ಎಂದು ತಿಳಿಸಿದರು. ಅವರು ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ದೇಶದಲ್ಲಿ ಅಭಿವೃದ್ಧಿ ಪರ್ವ ಆರಂಭಗೊಂಡಿತು. ರಾಷ್ಟ್ರೀಯ ಹೆದ್ದಾರಿಗಳು ಮೇಲ್ದರ್ಜೆಗೇರಿದವು. ಗ್ರಾಮೀಣ ರಸ್ತೆಗಳು ಅಭಿವೃದ್ಧಿ ಕಂಡವು. ಯುವಕರಿಗೆ ಉದ್ಯೋಗಗಳನ್ನು ಸೃಷ್ಟಿಸಿ ಸ್ವದೇಶಿ ಉತ್ಪಾದನೆಗೆ ಹೆಚ್ಚಿನ ಮಹತ್ವ ನೀಡಿದರು. ಜನತಾ ಸರ್ಕಾದಲ್ಲಿ ವಿದೇಶಾಂಗ ಸಚಿವರಾಗಿ ಯಶಸ್ವಿಯಾಗಿ ನಿರ್ವಹಿಸಿದರು. ಅವರು ಮಾಡಿದ ಅಭಿವೃದ್ಧಿ ಕಾರ್ಯಗಳು ಇಂದಿಗೂ ಜನಮಾನಸದಲ್ಲಿ ಉಳಿದಿವೆ ಎಂದರು.

ಯುವಕರು ಮಾಜಿ ಪ್ರಧಾನಿ ವಾಜಪೇಯ ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸಾಗಬೇಕು. ಅವರಲ್ಲಿದ್ದ ಪಕ್ಷ ನಿಷ್ಠೆಯನ್ನು ಅರಿತುಕೊಂಡು ತಾಲೂಕಿನಲ್ಲಿ ಪಕ್ಷವನ್ನು ಇನ್ನಷ್ಟು ಗಟ್ಟಿಗೊಳಿಸಬೇಕು ಎಂದು ಹೇಳಿದರು.ಸಂದರ್ಭದಲ್ಲಿ ಪಪಂ ಮಾಜಿ ಅಧ್ಯಕ್ಷ ಟಿ.ಟಿ.ರವಿಕುಮಾರ್, ಸದಸ್ಯ ಮಂಜಣ್ಣ, ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಭಾಕರ್, ಮುಖಂಡರಾದ ಸಿದ್ದಣ್ಣ, ಪೃತ್ವಿರಾಜ, ಅರ್ಜುನ, ರಾಮಾಂಜಿನೇಯ, ಬೀಮಣ್ಣ ಇದ್ದರು.