ಸಾರಾಂಶ
ಮಂಗಳೂರು: ದಾಮೋದರ ಆರ್. ಸುವರ್ಣ ಎಜುಕೇಶನ್ ಟ್ರಸ್ಟ್ ವತಿಯಿಂದ ಬಿಲ್ಲವ ಸಮಾಜದ ಬಡ ಕುಟುಂಬದ, ವೃತ್ತಿಪರ ಶಿಕ್ಷಣ ಮಾಡುತ್ತಿರುವ ಸುಮಾರು 500ಕ್ಕೂ ಅಧಿಕ ಅರ್ಹ ಫಲಾನುಭವಿ ವಿದ್ಯಾರ್ಥಿಗಳಿಗೆ ಸುಮಾರು 50 ಲಕ್ಷ ರು. ಮೊತ್ತದ ವಿದ್ಯಾರ್ಥಿ ವೇತನ ವಿತರಣೆ ಸಮಾರಂಭ ಡಿ.21ರಂದು ಬೆಳಗ್ಗೆ 10 ಗಂಟೆಗೆ ಕುದ್ರೋಳಿ ಶ್ರೀಗೋಕರ್ಣನಾಥ ಕ್ಷೇತ್ರದ ಸಭಾಂಗಣದಲ್ಲಿ ನಡೆಯಲಿದೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಖಿಲ ಭಾರತ ಬಿಲ್ಲವರ ಯೂನಿಯನ್ ಅಧ್ಯಕ್ಷ ನವೀನ್ ಚಂದ್ರ ಸುವರ್ಣ, ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಮಂಗಳೂರಿನ ಉಜ್ಜೋಡಿ ಮಹಾಕಾಳಿ ದೇವಸ್ಥಾನದ ಎದುರಿನ ದಾಮೋದರ ಸುವರ್ಣ ಎಜ್ಯುಕೇಶನ್ ಟ್ರಸ್ಟ್ ಕಚೇರಿ (ಪೆಟ್ರೋಲ್ ಬಂಕ್ ಹತ್ತಿರ) ಸಂಪರ್ಕಿಸಬಹುದು. ಪಿಯುಸಿಯಲ್ಲಿ ಕನಿಷ್ಠ ಶೇ.75 ಅಂಕದಲ್ಲಿ ತೇರ್ಗಡೆಯಾಗಿರುವ ಅಂಕಪಟ್ಟಿ ಪ್ರತಿ, ಬಿಪಿಎಲ್ ಕಾರ್ಡ್, ಸ್ಥಳೀಯ ಬಿಲ್ಲವ ಸಂಘದ ಶಿಫಾರಾಸಿನೊಂದಿಗೆ ಅರ್ಜಿಯನ್ನು ನ.15ರೊಳಗೆ ಟ್ರಸ್ಟ್ ಕಚೇರಿಗೆ ಸಲ್ಲಿಸಬೇಕು. ಬಳಿಕ ಪರಿಶೀಲನೆ ನಡೆಸಿ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು ಎಂದರು.
ಆಯ್ಕೆಯಾದ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲಾಗುವುದು. ವಿದ್ಯಾರ್ಥಿ ವೇತನ ವಿತರಣೆ ಸಮಾರಂಭದ ದಿನ ಆಯ್ಕೆಯಾದ ವಿದ್ಯಾರ್ಥಿಗಳು ತಮ್ಮ ಹೆತ್ತವರು ಅಥವಾ ಪೋಷಕರೊಂದಿಗೆ ತಮಗೆ ಬಂದಿರುವ ಮಾಹಿತಿ ಪತ್ರದ ಜತೆ ಹಾಜರಾಗಬೇಕು ಎಂದು ಅವರು ತಿಳಿಸಿದರು.ಟ್ರಸ್ಟ್ ಅಧ್ಯಕ್ಷ ಉದಯಚಂದ್ರ ಡಿ. ಸುವರ್ಣ, ಉದ್ಯಮಿ ವಿನಯಚಂದ್ರ ಡಿ. ಸುವರ್ಣ ಇದ್ದರು.;Resize=(128,128))
;Resize=(128,128))
;Resize=(128,128))