ಸಾರಾಂಶ
ಕೆನರಾ ಬ್ಯಾಂಕ್ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಡಾ.ಬಿ.ಆರ್.ಅಂಬೇಡ್ಕರ್ ಕೆನರಾ ವಿದ್ಯಾ ಜ್ಯೋತಿ ಯೋಜನೆಯಡಿ ೩೨೬ ಎಸ್ಸಿ,ಎಸ್ಟಿ, ವಿದ್ಯಾರ್ಥಿನಿಯರಿಗೆ ಉಚಿತ ವಿದ್ಯಾರ್ಥಿ ವೇತನ ವಿತರಣೆ.
ಕನ್ನಡಪ್ರಭ ವಾರ್ತೆ ಮಂಡ್ಯ
ನಗರದ ಮಹಾವೀರ ಸರ್ಕಲ್‌ನ ಕೆನರಾ ಬ್ಯಾಂಕ್ ಪ್ರಾದೇಶಿಕ ಕಚೇರಿಯಲ್ಲಿ ಕೆನರಾ ಬ್ಯಾಂಕ್ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಡಾ.ಬಿ.ಆರ್.ಅಂಬೇಡ್ಕರ್ ಕೆನರಾ ವಿದ್ಯಾ ಜ್ಯೋತಿ ಯೋಜನೆಯಡಿ ೩೨೬ ಎಸ್ಸಿ,ಎಸ್ಟಿ, ವಿದ್ಯಾರ್ಥಿನಿಯರಿಗೆ ಉಚಿತ ವಿದ್ಯಾರ್ಥಿ ವೇತನ ವಿತರಣೆ ಮಾಡಲಾಯಿತು.೫ರಿಂದ ೭ನೇ ತರಗತಿ ವಿದ್ಯಾರ್ಥಿನಿಯರಿಗೆ ೩೦೦೦ ರು. ಹಾಗೂ ೮ ರಿಂದ ೧೦ನೇ ತರಗತಿ ವಿದ್ಯಾರ್ಥಿನಿಯರಿಗೆ ೫೦೦೦ ರು. ವಿದ್ಯಾರ್ಥಿ ವೇತನ ನೀಡಲಾಯಿತು. ಅಧ್ಯಕ್ಷತೆಯನ್ನು ಕೆನರಾ ಬ್ಯಾಂಕ್ ಪ್ರಾದೇಶಿಕ ಕಚೇರಿ ಮಂಡ್ಯ ಸಹಾಯಕ ಮಹಾ ಪ್ರಬಂಧಕರಾದ ಸಂಗಮೇಶ ಪಡನಾಡ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕೆನರಾ ಬ್ಯಾಂಕ್ ಬೆಂಗಳೂರು ವೃತ್ತ ಕಚೇರಿ ಸಹಾಯಕ ಮಹಾ ಪ್ರಬಂಧಕ ಶಿಖಾ ಮೆಹತ್, ಮಂಡ್ಯ ಪ್ರಾದೇಶಿಕ ಕಚೇರಿ ವಿಭಾಗೀಯ ಪ್ರಬಂಧಕ ಪ್ರದೀಪ್‌ಕುಮಾರ್ ಮಿಶ್ರಾ ಭಾಗಿಯಾಗಿದ್ದರು. ಕೆನರಾ ಬ್ಯಾಂಕ್ ಸಿಬ್ಬಂದಿ, ಶಾಲಾ ಶಿಕ್ಷಕರು, ಪೋಷಕರು ಉಪಸ್ಥಿತರಿದ್ದರು.20ರಂದು ಡಿ.ದೇವರಾಜ ಅರಸು ಜನ್ಮ ದಿನಾಚರಣೆ
ಮಂಡ್ಯ:ಡಿ.ದೇವರಾಜ ಅರಸುರವರ 109ನೇ ಜನ್ಮ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಆಗಸ್ಟ್ 20ರಂದು ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮಕ್ಕೆ ಜಿಲ್ಲೆಯ ಸಾರ್ವಜನಿಕರು, ಎಲ್ಲಾ ಸಂಘ ಸಂಸ್ಥೆಗಳ ಸಮುದಾಯದ ಅಧ್ಯಕ್ಷರು ಹಾಗೂ ಮುಖಂಡರು ಭಾಗವಹಿಸಿ ಕಾರ್ಯಕ್ರಮವು ಯಶಸ್ವಿಯಾಗಲು ಸಹಕರಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂ-08232-220835 ಅನ್ನು ಸಂಪರ್ಕಿಸಬಹುದು ಎಂದು ಮಂಡ್ಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾಧಿಕಾರಿ ತಿಳಿಸಿದ್ದಾರೆ.