ಸಾರಾಂಶ
ಸೌದಿ ಅರೇಬಿಯಾ ಬಿಲ್ಲವ ಎಸೋಸಿಯೇಷನ್ ವತಿಯಿಂದ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಜಯ ಸಿ ಸುವರ್ಣ ಸಭಾಭವನದಲ್ಲಿ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ ಇತ್ತೀಚೆಗೆ ನಡೆಯಿತು.
ಮೂಲ್ಕಿ: ಶಿಕ್ಷಣದಿಂದ ಉತ್ತಮ ಭವಿಷ್ಯ ಹಾಗೂ ಸಮಾಜ ನಿರ್ಮಾಣ ಸಾಧ್ಯವಿದ್ದು ಆರ್ಥಿಕವಾಗಿ ಸಂಕಷ್ಟದಲ್ಲಿರುವವರನ್ನು ಮೇಲೆತ್ತುವ ಕಾರ್ಯವಾಗಬೇಕು. ವಿದೇಶದಲ್ಲಿ ಕಷ್ಟಪಟ್ಟು ಸಂಪಾದಿಸಿದ ಹಣದಿಂದ ವಿದ್ಯಾರ್ಥಿಗಳಿಗೆ ಸಹಾಯ ಹಸ್ತ ಮಾಡುವ ಕಾರ್ಯ ಅಭಿನಂದನೀಯ ಎಂದು ಬೆಂಗಳೂರಿನ ಆರ್ಯ ಈಡಿಗ ಮಹಾ ಸಂಸ್ಥಾನದ ಪೀಠಾಧಿಪತಿ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಹೇಳಿದರು.
ಸೌದಿ ಅರೇಬಿಯಾ ಬಿಲ್ಲವ ಎಸೋಸಿಯೇಷನ್ ವತಿಯಿಂದ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಜಯ ಸಿ ಸುವರ್ಣ ಸಭಾಭವನದಲ್ಲಿ ನಡೆದ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭದಲ್ಲಿ ಆಶೀರ್ವಚನ ನೀಡಿ ಮಾತನಾಡಿದರು.ಸೌದಿ ಅರೇಬಿಯಾ ಬಿಲ್ಲವ ಎಸೋಸಿಯೇಷನ್ ಅಧ್ಯಕ್ಷ ಕೆ ಸಿ ಭಾಸ್ಕರ್ ಅಧ್ಯಕ್ಷತೆಯನ್ನು ವಹಿಸಿದ್ದು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಶಾಸಕ ಉಮಾನಾಥ ಕೋಟ್ಯಾನ್ ಮಾತನಾಡಿ ವಿದ್ಯಾರ್ಥಿಗಳು ದೇಶದ ಆಸ್ತಿಯಾಗಿದ್ದು ಶೈಕ್ಷಣಿಕ ಸಾಧನೆ ಮೂಲಕ ಅಶಕ್ತರ ಮತ್ತು ಬಡವರ ಕಣ್ಣೀರೊರೆಸುವ ಕಾರ್ಯ ಮಾಡಬೇಕು ಎಂದು ಹೇಳಿದರು.
ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷ ಡಾ. ರಾಜಶೇಖರ ಕೋಟ್ಯಾನ್, ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಮಹಿಳಾ ಘಟಕದ ಅಧ್ಯಕ್ಷ ಗೀತಾಂಜಲಿ ಸುವರ್ಣ, ಮಂಗಳೂರು ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರದ ಮುಖ್ಯ ಅಧೀಕ್ಷಕ ಡಾ.ಅರುಣ್ ಉಳ್ಳಾಲ, ಸೌದಿ ಅರೇಬಿಯಾ ಬಿಲ್ಲವ ಎಸೋಸಿಯೇಷನ್ ನ ಗೌರವಾಧ್ಯಕ್ಷ ಭಾಸ್ಕರ್ ಸಾಲ್ಯಾನ್, ಉಪಾಧ್ಯಕ್ಷ ಕಿಶೋರ್ ಪೂಜಾರಿ, ಪ್ರಧಾನ ಕಾರ್ಯದರ್ಶಿ ಜಯಕರ ಎಂ ಪೂಜಾರಿ, ಕೋಶಾಧಿಕಾರಿ ಭಾಸ್ಕರ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.ಮಲ್ಲಿಕಾ ರಕ್ಷಿತ್ ಸ್ವಾಗತಿಸಿದರು, ಶಶ್ಮಿತಾ ಅಜಯ್ ಪ್ರಸ್ತಾವನೆಗೈದರು, ದಿನೇಶ್ ರಾಯಿ ನಿರೂಪಿಸಿದರು. ಸುಮಾರು 4 .5 ಲಕ್ಷ ವೆಚ್ಚದಲ್ಲಿ 98 ವಿಧ್ಯಾರ್ಥಿಗಳಿಗೆ ಸಹಾಯ ಹಸ್ತ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು..