ನರಸಿಂಹರಾಜಪುರ ಜೇಸಿ ಸಂಸ್ಥೆಯಿಂದ ಸರ್ಕಾರಿ ಶಾಲೆಯಲ್ಲಿ 9 ರಿಂದ 12 ನೇ ತರಗತಿಯಲ್ಲಿ ಅತಿ ಹೆಚ್ಚು ಅಂಕ ಪಡೆದ 10 ಬಡ ವಿದ್ಯಾರ್ಥಿಗಳಿಗೆ ಪ್ರತಿ ಜೇಸಿ ಘಟಕದಿಂದ ಸ್ಕಾಲರ್ ಶಿಪ್ ನೀಡುವ ಕಾರ್ಯಕ್ರಮವಿದೆ ಎಂದು ಜ್ವಾಲಾಮಾಲಿನಿ ಜೇಸಿ ಸಂಸ್ಥೆ ಅಧ್ಯಕ್ಷ ಆದರ್ಶ ಬಿ. ಗೌಡ ತಿಳಿಸಿದರು.
ಜ್ವಾಲಾಮಾಲಿನಿ ಜೇಸಿ ಸಂಸ್ಥೆಯಿಂದ ಗುಬ್ಬಿಗಾ ಗ್ರಾಪಂನಲ್ಲಿ ವ್ಯಕ್ತಿತ್ವ ವಿಕಸನ ಶಿಬಿರ
ಕನ್ನಡಪ್ರಭ ವಾರ್ತೆ, ನರಸಿಂಹರಾಜಪುರಜೇಸಿ ಸಂಸ್ಥೆಯಿಂದ ಸರ್ಕಾರಿ ಶಾಲೆಯಲ್ಲಿ 9 ರಿಂದ 12 ನೇ ತರಗತಿಯಲ್ಲಿ ಅತಿ ಹೆಚ್ಚು ಅಂಕ ಪಡೆದ 10 ಬಡ ವಿದ್ಯಾರ್ಥಿಗಳಿಗೆ ಪ್ರತಿ ಜೇಸಿ ಘಟಕದಿಂದ ಸ್ಕಾಲರ್ ಶಿಪ್ ನೀಡುವ ಕಾರ್ಯಕ್ರಮವಿದೆ ಎಂದು ಜ್ವಾಲಾಮಾಲಿನಿ ಜೇಸಿ ಸಂಸ್ಥೆ ಅಧ್ಯಕ್ಷ ಆದರ್ಶ ಬಿ. ಗೌಡ ತಿಳಿಸಿದರು.
ಗುರುವಾರ ಗುಬ್ಬಿಗಾ ಗ್ರಾಮ ಪಂಚಾಯಿತಿಯಲ್ಲಿ ನಡೆಯುತ್ತಿದ್ದ ಮಕ್ಕಳ ಬೇಸಿಗೆ ಶಿಬಿರದಲ್ಲಿ ಜ್ವಾಲಾಮಾಲಿನಿ ಜೇಸಿ ಸಂಸ್ಥೆಯಿಂದ ನಡೆದ ವ್ಯಕ್ತಿತ್ವ ವಿಕಸನ ಶಿಬಿರದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜೇಸಿ ಸಂಸ್ಥೆ ಪ್ರಾರಂಭವಾಗಿ 110 ವರ್ಷಗಳು ತುಂಬಿದೆ. 120 ಕ್ಕೂ ಹೆಚ್ಚು ದೇಶಗಳಲ್ಲಿ ಜೇಸಿ ಸಂಸ್ಥೆ ಘಟಕಗಳಿವೆ.18 ರಿಂದ 45 ವರ್ಷದ ವಯೋಮಾನದ ಯುವ ಜನರು ಜೇಸಿ ಸದಸ್ಯರಾಗಬಹುದು. ಮಕ್ಕಳು ಮೊಬೈಲ್, ಟಿ.ವಿ.ಗಳನ್ನು ಹೆಚ್ಚು ನೋಡದೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಬೇಕು. ಬೇಸಿಗೆ ಶಿಬಿರದಲ್ಲಿ ಮಕ್ಕಳು ಭಾಗವಹಿಸುವುದರಿಂದ ಬೇರೆ, ಬೇರೆ ಶಾಲೆ ಮಕ್ಕಳ ಪರಿಚಯವಾಗಲಿದೆ ಎಂದರು.ಇದೇ ಸಂದರ್ಭದಲ್ಲಿ ಜೇಸಿ ಸಂಸ್ಥೆಯ ಸೆಲ್ಯೂಟ್ ಸೈಲೆಂಟ್ ಸ್ಟಾರ್ ಕಾರ್ಯಕ್ರಮದಡಿ ಗುಬ್ಬಿಗಾ ಗ್ರಾಮ ಪಂಚಾಯಿತಿಯಲ್ಲಿ ವಾಟರ್ ಮ್ಯಾನ್ ವೃತ್ತಿಯಲ್ಲಿ ಕಳೆದ 27 ವರ್ಷದಿಂದ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿರುವ ಜೆ. ರಾಘವ ಪೂಜಾರಿ ಅವರನ್ನು ಗೌರವಿಸಲಾಯಿತು.
ಗುಬ್ಬಿಗಾ ಗ್ರಾಮ ಪಂಚಾಯಿತಿ ಪಿಡಿಓ ಸೀಮಾ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಭೆಯಲ್ಲಿ ಜೇಸಿ ಸಂಸ್ಥೆ ಕಾರ್ಯದರ್ಶಿ ರಜಿತ್ ವಗಡೆ, ಜೇಸಿ ಸದಸ್ಯರಾದ ಮನು ಕೂಸ್ಗಲ್, ಜೋಯಿ ಬ್ರೋ , ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಹೂವಮ್ಮ ಇದ್ದರು.