ಶಾಲಾ ಪ್ರಾರಂಭೋತ್ಸವ, ಶಾಲಾ ದಾಖಲಾತಿ ಆಂದೋಲನ ಕಾರ್ಯಕ್ರಮ

| Published : Jun 01 2024, 12:47 AM IST

ಶಾಲಾ ಪ್ರಾರಂಭೋತ್ಸವ, ಶಾಲಾ ದಾಖಲಾತಿ ಆಂದೋಲನ ಕಾರ್ಯಕ್ರಮ
Share this Article
  • FB
  • TW
  • Linkdin
  • Email

ಸಾರಾಂಶ

ಮಾನ್ವಿ ಪಟ್ಟಣದ ಕೋನಾಪುರ ಪೇಟೆಯಲ್ಲಿ ಶಾಲಾ ಪ್ರಾರಂಭೋತ್ಸವ ಹಾಗೂ ಶಾಲಾ ದಾಖಲಾತಿ ಆಂದೋಲನ ಕಾರ್ಯಕ್ರಮಕ್ಕೆ ಪ್ರಭಾರಿ ಕ್ಷೇತ್ರ ಶಿಕ್ಷಣಾಧಿಕಾರಿ ಜೀವನಸಾಬ್ ಚಾಲನೆ ನೀಡಿದರು.

ಮಾನ್ವಿ: ಪಟ್ಟಣದ ಕೋನಾಪುರ ಪೇಟೆ ಉನ್ನತ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಣ ಇಲಾಖೆಯಿಂದ 2024-25ನೇ ಸಾಲಿನ ಶಾಲಾ ಪ್ರಾರಂಭೋತ್ಸವ ಹಾಗೂ ಶಾಲಾ ದಾಖಲಾತಿ ಆಂದೋಲನ ಕಾರ್ಯಕ್ರಮಕ್ಕೆ ಪ್ರಭಾರಿ ತಾ. ಕ್ಷೇತ್ರ ಶಿಕ್ಷಣಾಧಿಕಾರಿ ಜೀವನಸಾಬ್ ಚಾಲನೆ ನೀಡಿ ಮಾತನಾಡಿ, ಮಾನ್ವಿ ಮತ್ತು ಸಿರವಾರ ತಾಲೂಕುಗಳಲ್ಲಿನ ಎಲ್ಲಾ ಸರಕಾರಿ ಶಾಲೆಗಳಲ್ಲಿ ಇಂದು ಶಾಲೆಗಳಿಗೆ ಮುಖ್ಯಗುರುಗಳು, ಶಿಕ್ಷಕರು ಮಕ್ಕಳನ್ನು ಬರಮಾಡಿಕೊಳ್ಳುವ ಮೂಲಕ ಶೈಕ್ಷಣಿಕ ವರ್ಷ ಪ್ರಾರಂಭಿಸಲಿದ್ದಾರೆ. ಶಿಕ್ಷಣ ಇಲಾಖೆಯಿಂದ ಮಕ್ಕಳ ಶಿಕ್ಷಣಕ್ಕೆ ಅಗತ್ಯವಾದ ಎಲ್ಲಾ ಸೌಲಭ್ಯಗಳನ್ನು ಶಾಲೆಗಳಲ್ಲಿ ಕಲ್ಪಿಸಲಾಗಿದ್ದು, ಆಯ್ದ ಕೆಲವು ಶಾಲೆಗಳಲ್ಲಿ ಈ ವರ್ಷದಿಂದ ಕನ್ನಡ ಮತ್ತು ಇಂಗ್ಲೀಷ ಭಾಷೆ ಸೇರಿ ದ್ವಿ ಭಾಷೆಗಳಲ್ಲಿ ಮಕ್ಕಳು ಶಿಕ್ಷಣ ಪಡೆಯಬಹುದಾಗಿದೆ ಎಂದು ತಿಳಿಸಿದರು. ಮಂಗಳವಾಧ್ಯಗಳ ಮೂಲಕ ಶಾಲೆಗೆ ಮಕ್ಕಳನ್ನು ಬರಮಾಡಿಕೊಳ್ಳಲಾಯಿತು.

ಕಾರ್ಯಕ್ರಮದಲ್ಲಿ ತಾ.ಅಕ್ಷರ ದಾಸೋಹ ಅಧಿಕಾರಿ ಸುರೇಶನಾಯಕ, ಇಸಿಒ ಮಹಮ್ಮದ್ ಯೂನೂಸ್, ಮಹೇಶ್, ಬಿಆರ್‌ಪಿ ಸಿದ್ದಲಿಂಗೇಶ್ವರ, ಸಿಆರ್‌ಪಿ ಸೋಮಶೇಖರ,ಗಜೇಂದ್ರ, ಕನಕಪ್ಪ ಯಾದವ್, ಆಂಜನೇಯ್ಯ, ಆಶೋಕ.ಎಂ. ಸೇರಿ ಇನ್ನಿತರರಿದ್ದರು.