ಶಾಲಾ ವಾಹನ ಪಲ್ಟಿ: ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯ

| Published : Jul 25 2024, 01:19 AM IST / Updated: Jul 25 2024, 01:20 AM IST

ಸಾರಾಂಶ

ಗೋಕಾಕ: ತಾಲೂಕಿನ ಮೇಲ್ಮಟ್ಟಿ ಬಳಿ ಮರಡಿಮಠ ಗ್ರಾಮದ ಜೈ ಹನುಮಾನ್ ಆಂಗ್ಲ ಮಾಧ್ಯಮ ಶಾಲೆಯ ಶಾಲಾ ಬಸ್ ಸ್ಟೇರಿಂಗ್ ರಾಡ್ ಕಟ್ಟ್ ಆಗಿ ಪಲ್ಟಿಯಾಗಿರುವ ಘಟನೆ ಬುಧವಾರ ನಡೆದಿದೆ. ಘಟನೆಯಲ್ಲಿ ಬಸ್‌ನಲ್ಲಿದ್ದ 17 ವಿದ್ಯಾರ್ಥಿಗಳಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಗಾಯಗೊಂಡ ಎಲ್ಲ ವಿದ್ಯಾರ್ಥಿಗಳನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಎಲ್ಲ ವಿದ್ಯಾರ್ಥಿಗಳು ಆರೋಗ್ಯವಾಗಿದ್ದಾರೆ.

ಆಸ್ಪತ್ರೆಗೆ ಭೇಟಿ ನೀಡಿದ ಗೋಕಾಕ ವಲಯ ಶಿಕ್ಷಣಾಧಿಕಾರಿ ಜಿ.ಬಿ.ಬಳಗಾರ ಹಾಗೂ ಗ್ರಾಮೀಣ ಠಾಣೆ ಪಿಎಸ್‌ಐ ಕಿರಣ ಮೋಹಿತೆ ಘಟನೆಯಲ್ಲಿ ಗಾಯಗೊಂಡ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿ ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದ್ದಾರೆ. ಈ ಕುರಿತು ಗೋಕಾಕ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.