ಸಾರಾಂಶ
ರಾಷ್ಟ್ರೀಯ ವಿಜ್ಞಾನ ದಿನದ ಅಂಗವಾಗಿ ಇಲ್ಲಿನ ಹಂಗಾರಕಟ್ಟೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಜ್ಞಾನ ಪ್ರದರ್ಶನ ಮತ್ತು ಕಾರ್ಯಾಗಾರ ಕಾರ್ಯಕ್ರಮ ಇತ್ತೀಚಿಗೆ ಜರುಗಿತು. ವಿದ್ಯಾರ್ಥಿಗಳ ಯುವ ಮನಸ್ಸುಗಳು ರಚಿಸಿದ ವಿಜ್ಞಾನ ಮಾದರಿಗಳು ಹಾಗೂ ಪುರಾತನ ಕಾಲದ ವಸ್ತುಗಳ ಪ್ರದರ್ಶನ ವಿಶೇಷವಾಗಿ ಗಮನ ಸೆಳೆಯಿತು.
ಕನ್ನಡಪ್ರಭ ವಾರ್ತೆ ಕುಂದಾಪುರ
ರಾಷ್ಟ್ರೀಯ ವಿಜ್ಞಾನ ದಿನದ ಅಂಗವಾಗಿ ಇಲ್ಲಿನ ಹಂಗಾರಕಟ್ಟೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಜ್ಞಾನ ಪ್ರದರ್ಶನ ಮತ್ತು ಕಾರ್ಯಾಗಾರ ಕಾರ್ಯಕ್ರಮ ಇತ್ತೀಚಿಗೆ ಜರುಗಿತು. ವಿದ್ಯಾರ್ಥಿಗಳ ಯುವ ಮನಸ್ಸುಗಳು ರಚಿಸಿದ ವಿಜ್ಞಾನ ಮಾದರಿಗಳು ಹಾಗೂ ಪುರಾತನ ಕಾಲದ ವಸ್ತುಗಳ ಪ್ರದರ್ಶನ ವಿಶೇಷವಾಗಿ ಗಮನ ಸೆಳೆಯಿತು.ಈ ಪ್ರದರ್ಶನವನ್ನು ಲಯನ್ಸ್ ಕ್ಲಬ್ ಬಾರ್ಕೂರು ಅಧ್ಯಕ್ಷ ಶ್ರೀನಿವಾಸ ಶೆಟ್ಟಿ ಉದ್ಘಾಟಿಸಿ ಮಾತನಾಡಿ, ಈ ಗ್ರಾಮೀಣ ಸಂಸ್ಥೆಯ ಉದಯೋನ್ಮುಖ ವಿಜ್ಞಾನಿಗಳನ್ನು ಸೃಷ್ಠಿಸುತ್ತಿರುವ ಬಗ್ಗೆ ಶ್ಲಾಘಿಸಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಕಿರಣ್ ಕುಮಾರ್ ಕುಂದಾಪುರ ಭಾಗವಹಿಸಿದ್ದರು. ಎಸ್‌ಡಿಎಂಸಿ ಅಧ್ಯಕ್ಷೆ ರೇಖಾ ಉಡುಪ ಅಧ್ಯಕ್ಷತೆ ವಹಿಸಿದ್ದರು.ಅತ್ಯುತ್ತಮ ಸಾಧನೆಗಳಿಗಾಗಿ ರಾಷ್ಟ್ರೀಯ ಮಟ್ಟದ ಪ್ರಶಸ್ತಿ ಪಡೆದ ಶಾಲೆಯ ಮೂವರು ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ವಿಜ್ಞಾನ ಶಿಕ್ಷಕಿ ವೀಣಾ ಶೆಟ್ಟಿ ಇವರನ್ನು ಗೌರವಿಸಲಾಯಿತು.ಮುಖ್ಯ ಅತಿಥಿಗಳಾಗಿ ಹಂಗಾರಕಟ್ಟೆ ಉದ್ಯಮಿ ಪ್ರಕಾಶ್ ಗಣಾಚಾರಿ, ಶಿಕ್ಷಣ ಇಲಾಖೆಯ ಬಿಆರ್‌ಪಿ ಉದಯ ಕೋಟ, ಸಿಆರ್‌ಪಿ ಮಾಲಿನಿ ಎಂ.ಪಿ., ಚೇತನ ಪ್ರೌಢಶಾಲೆಯ ಮುಖ್ಯೋಪಾಧ್ಯಯಿನಿ ಕಲ್ಪನಾ ಶೆಟ್ಟಿ, ಶಾಲಾಭಿವೃದ್ಧಿ ಸಮಿತಿ ಕಾರ್ಯದರ್ಶಿ ರಾಜಶೇಖರ್ ಹೆಬ್ಬಾರ್, ಲಯನ್ಸ್ ಬಾರ್ಕೂರು ಕಾರ್ಯದರ್ಶಿ ಉದಯ ಎಸ್. ಶೆಟ್ಟಿ, ಶಾಲಾ ನಿವೃತ್ತ ಮುಖ್ಯ ಶಿಕ್ಷಕಿ ಸೇಸು ಟೀಚರ್ ಉಪಸ್ಥಿತರಿದ್ದರು.ಮುಖ್ಯೋಪಾಧ್ಯಾಯಿನಿ ಪ್ರಸಿಲ್ಲಾ ನೊರೊನ್ಹಾ ಸ್ವಾಗತಿಸಿದರು. ಶಿಕ್ಷಕಿ ಉಷಾ ರಾಣಿ ಕಾರ್ಯಕ್ರಮವನ್ನು ನಿರೂಪಿಸಿದರು. ಗೌರವ ಶಿಕ್ಷಕಿಯರಾದ ಯಶೋದಾ, ರಮ್ಯಾ ಮತ್ತು ಲವೀನಾ ಒಲಿವೇರಾ ಸಹಕರಿಸಿದರು.