ಸಾರಾಂಶ
ಮಡಿಕೇರಿ: ನಗರದ ಕೊಡಗು ವಿದ್ಯಾಲಯದಲ್ಲಿ ವಿಜ್ಞಾನ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.ಕಾರ್ಯಕ್ರಮವನ್ನು ಶಾಲಾ ಪ್ರಾಂಶುಪಾಲರಾದ ಸುಮಿತ್ರಾ, ಆಡಳಿತ ನಿರ್ವಹಣಾಧಿಕಾರಿ ಪಿ.ರವಿ ಮತ್ತು ವಿಜ್ಞಾನ ಶಿಕ್ಷಕರು ಸಸಿಗೆ ನೀರು ಸಿಂಪಡಿಸುವ ಮೂಲಕ ಉದ್ಘಾಟಿಸಿದರು.
ವಿಜ್ಞಾನ ದಿನಾಚರಣೆಯ ಮುಖ್ಯ ಆಕರ್ಷಣೆಯಾಗಿ 3 ರಿಂದ 5ನೇ ತರಗತಿಯ ವಿದ್ಯಾರ್ಥಿಗಳು ವೈವಿಧ್ಯಮಯ ವಿಜ್ಞಾನ ಪ್ರದರ್ಶನ ನಡೆಸಿದರು. ಪ್ರತಿ ತರಗತಿಯ ವಿದ್ಯಾರ್ಥಿಗಳು ತಮ್ಮ ತರಗತಿ ಕೊಠಡಿಗಳಲ್ಲಿ ವೈಜ್ಞಾನಿಕ ಮಾದರಿಗಳನ್ನು ನಿರ್ಮಿಸಿ, ಅವುಗಳ ಕಾರ್ಯವಿಧಾನವನ್ನು ವಿವರಿಸಿದರು.ಈ ಮಾದರಿಗಳು ವಿಜ್ಞಾನ ಪ್ರಕ್ರಿಯೆಗಳ ತಿಳುವಳಿಕೆಯನ್ನು ಜಾಗೃತಗೊಳಿಸಿ, ವಿದ್ಯಾರ್ಥಿಗಳ ಉತ್ಸಾಹ ಮತ್ತು ಸೃಜನಶೀಲತೆಯನ್ನು ಪ್ರತಿಬಿಂಬಿಸಿದವು.6 ರಿಂದ 9ನೇ ತರಗತಿಯ ವಿದ್ಯಾರ್ಥಿ ತಂಡಗಳು ಪ್ರಾತ್ಯಕ್ಷಿಕೆಗಳ ಮೂಲಕ ವೈಜ್ಞಾನಿಕ ವಿಚಾರಗಳನ್ನು ವಿವರಿಸಿದರು. ವಿಶೇಷವಾಗಿ, ಕೊಡಗಿನ ರೈತರು ಎದುರಿಸುತ್ತಿರುವ ಸಮಸ್ಯೆಗಳನ್ನು ಗುರುತಿಸಿ, ಅದಕ್ಕೆ ಸುಧಾರಿತ ಪರಿಹಾರಗಳನ್ನು ಕಂಡುಹಿಡಿದ ವಿದ್ಯಾರ್ಥಿಗಳ ತಂಡದ ಪ್ರಸ್ತುತಿ ನೋಡುಗರ ಮೆಚ್ಚುಗೆ ಪಡೆಯಿತು. ವಿಜ್ಞಾನ ಶಿಕ್ಷಕಿ ಶ್ರುತಿ ವಿಜ್ಞಾನ ದಿನದ ಮಹತ್ವವನ್ನು ವಿವರಿಸಿದರು.
ಶಾಲಾ ಪ್ರಾಂಶುಪಾಲರಾದ ಸುಮಿತ್ರಾ ವಿಜ್ಞಾನದ ಮಹತ್ವದ ಬಗ್ಗೆ ಸಂದೇಶ ನೀಡಿದರು.ಈ ವಿಜ್ಞಾನ ದಿನಾಚರಣೆಯು ವಿದ್ಯಾರ್ಥಿಗಳಲ್ಲಿ ಸಂಶೋಧನಾ ಮನೋಭಾವ, ವೈಜ್ಞಾನಿಕ ದೃಷ್ಟಿಕೋನ ಹಾಗೂ ನಾವೀನ್ಯತೆಯನ್ನು ಉತ್ತೇಜಿಸುವ ಪೂರಕ ವೇದಿಕೆಯಾಗಿತ್ತು.