ಕೆ.ಹೊನ್ನಲಗೆರೆ ಆರ್.ಕೆ.ಶಿಕ್ಷಣ ಸಂಸ್ಥೆಯಲ್ಲಿ ವಿಜ್ಞಾನ ವಸ್ತು ಪ್ರದರ್ಶನ

| Published : Oct 31 2025, 02:00 AM IST

ಕೆ.ಹೊನ್ನಲಗೆರೆ ಆರ್.ಕೆ.ಶಿಕ್ಷಣ ಸಂಸ್ಥೆಯಲ್ಲಿ ವಿಜ್ಞಾನ ವಸ್ತು ಪ್ರದರ್ಶನ
Share this Article
  • FB
  • TW
  • Linkdin
  • Email

ಸಾರಾಂಶ

ಸಾವಿರಾರು ವರ್ಷಗಳ ಇತಿಹಾಸವಿರುವ ವಿಜ್ಞಾನ ಕ್ಷೇತ್ರಕ್ಕೆ ಭಾರತದ ಕೊಡುಗೆ ಅಪಾರವಾಗಿದೆ. ಶಿಕ್ಷಣ ಸಂಸ್ಥೆಗಳು ಮಕ್ಕಳಿಗೆ ಕೇವಲ ಪಠ್ಯಪುಸ್ತಕ ಓದಿ ಪರೀಕ್ಷೆ ಬರೆಯುವುದಕ್ಕೆ ಸೀಮಿತಗೊಳಿಸದೆ ಪ್ರತಿಭೆ ಪ್ರದರ್ಶನಕ್ಕೆ ವೇದಿಕೆ ಕಲ್ಪಿಸಲು ಚಿಂತನೆ ನಡೆಸಬೇಕು.

ಕನ್ನಡಪ್ರಭ ವಾರ್ತೆ ಮದ್ದೂರು

ತಾಲೂಕಿನ ಕೆ.ಹೊನ್ನಲಗೆರೆ ಆರ್.ಕೆ.ಶಿಕ್ಷಣ ಸಂಸ್ಥೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನದ ಅಂಗ ಗುರುವಾರ ನಡೆದ ವಿಜ್ಞಾನ ವಸ್ತು ಪ್ರದರ್ಶನ ವಿದ್ಯಾರ್ಥಿಗಳ ಹುಮ್ಮಸ್ಸು ಮತ್ತು ಸಂಭ್ರಮಕ್ಕೆ ಸಾಕ್ಷಿಯಾಯಿತು.

ಶಿಕ್ಷಣ ಸಂಸ್ಥೆ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ವಿದ್ಯಾರ್ಥಿಗಳು ಹಾಗೂ ವಿಜ್ಞಾನ ಶಿಕ್ಷಕರು ಮನುಷ್ಯನ ಹೃದಯ, ಜೀರ್ಣಾಂಗ ವ್ಯವಸ್ಥೆ, ಡಿಎನ್ಎ ಮಾದರಿ, ವಿದ್ಯುತ್ತು, ನೀರಿನ ಸಂರಕ್ಷಣೆ ಸೇರಿದಂತೆ ವಿಜ್ಞಾನಕ್ಕೆ ಸಂಬಂಧಿಸಿದ ಅನೇಕ ಮಾದರಿಗಳನ್ನು ಅನಾವರಣಗೊಳಿಸುವ ಪ್ರಯತ್ನ ನಡೆಸಿದ್ದು ಗಣ್ಯರ ಮೆಚ್ಚುಗೆಗೆ ಪಾತ್ರವಾಯಿತು.

ವಸ್ತು ಪ್ರದರ್ಶನಕ್ಕೆ ಚಾಲನೆ ನೀಡಿದ ಭಾರತಿ ಪದವಿ ಕಾಲೇಜಿನ ನಿವೃತ್ತ ಪ್ರೊ.ಎಸ್.ರೇವಣ್ಣ ಮಾತನಾಡಿ, ಸಾವಿರಾರು ವರ್ಷಗಳ ಇತಿಹಾಸವಿರುವ ವಿಜ್ಞಾನ ಕ್ಷೇತ್ರಕ್ಕೆ ಭಾರತದ ಕೊಡುಗೆ ಅಪಾರವಾಗಿದೆ. ಶಿಕ್ಷಣ ಸಂಸ್ಥೆಗಳು ಮಕ್ಕಳಿಗೆ ಕೇವಲ ಪಠ್ಯಪುಸ್ತಕ ಓದಿ ಪರೀಕ್ಷೆ ಬರೆಯುವುದಕ್ಕೆ ಸೀಮಿತಗೊಳಿಸದೆ ಪ್ರತಿಭೆ ಪ್ರದರ್ಶನಕ್ಕೆ ವೇದಿಕೆ ಕಲ್ಪಿಸಲು ಚಿಂತನೆ ನಡೆಸಬೇಕು ಎಂದು ಸಲಹೆ ನೀಡಿದರು.

ವಿಜ್ಞಾನ ಮತ್ತು ತಂತ್ರಜ್ಞಾನ ಮಾನವನ ಜೀವನದಲ್ಲಿ ತುಂಬಾ ಅಗತ್ಯವಾಗಿದೆ. ಹೀಗಾಗಿ ದೈನಂದಿನ ಜೀವನದಲ್ಲಿ ವಿಜ್ಞಾನ ಪ್ರಾಮುಖ್ಯತೆ ಪಡೆದುಕೊಂಡಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕೆ.ಹೊನ್ನಲಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಎಸ್.ಚಂದ್ರಶೇಖರ್, ಹೊಳಲು ವೆಂಕಟೇಶ್ವರ ವಿದ್ಯಾನಿಕೇತನ ಶಾಲೆ ಮುಖ್ಯ ಶಿಕ್ಷಕ ಸಿ.ಜೆ.ಜವರೇಗೌಡ ತೀರ್ಪುಗಾರರಾಗಿ ಭಾಗವಹಿಸಿದ್ದರು. ಆರ್.ಕೆ.ವಿದ್ಯಾಸಂಸ್ಥೆ ಆಡಳಿತಾಧಿಕಾರಿ ಕೆ.ಎಲ್.ಮರಿಸ್ವಾಮಿಗೌಡ, ಪಿಯು ಕಾಲೇಜಿನ ಪ್ರಾಂಶುಪಾಲ ಡಾ.ಸತೀಶ್ ಬಾಬು, ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕ ರಮೇಶ್ ಹಾಗೂ ಶಿಕ್ಷಕ ವೃಂದ ಭಾಗವಹಿಸಿದ್ದರು.

ನ.೧ರಂದು ನೃತ್ಯಾರಾಧನೆ ಕಾರ್ಯಕ್ರಮ

ಕನ್ನಡಪ್ರಭ ವಾರ್ತೆ ಮಂಡ್ಯ

ಶ್ರೀನಂದಿಕೇಶ್ವರ ಭರತಾನಟ್ಯ ಕಲಾ ಶಾಲೆಯ ೧೮ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ನಂದಿಕೇಶ್ವರ ನೃತ್ಯಾರಾಧನೆ ಕಾರ್ಯಕ್ರಮವನ್ನು ನ.೧ರ ಸಂಜೆ ೪ ಗಂಟೆಗೆ ನಗರದ ವಿವೇಕಾನಂದ ರಂಗಮಂದಿರದಲ್ಲಿ ಆಯೋಜಿಸಲಾಗಿದೆ ಎಂದು ಕಲಾ ಶಾಲೆಯ ವಿದುಷಿ ಕೆ.ಎಸ್.ಶೈಲಾ ತಿಳಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದೊಂದಿಗೆ ನಡೆಯುವ ಕಾರ್ಯಕ್ರಮವನ್ನು ಇಲಾಖೆಯ ಸಹಾಯಕ ನಿರ್ದೇಶಕ ಡಾ. ಬಿ.ವಿ.ನಂದೀಶ್ ಉದ್ಘಾಟಿಸುವರು. ಸರ್ವಬಣಜಿಗ (ಬಲಿಜ) ಸಂಘದ ಉಪಾಧ್ಯಕ್ಷ ಎಂ.ಕೆ.ಜಗದೀಶ್ ಅಧ್ಯಕ್ಷತೆ ವಹಿಸಲಿದ್ದಾರೆ. ನಗರಸಭೆ ಸದಸ್ಯ ಎಂ.ಎನ್.ಶ್ರೀಧರ್, ಕೇಂಬ್ರಿಡ್ಜ್ ಕಾನ್ವೆಂಟ್ ಸಂಸ್ಥಾಪಕ ಕಾರ್ಯದರ್ಶಿ ಪಿ.ರಾಜಶೇಖರ್ ಭಾಗವಹಿಸಲಿದ್ದು, ಬೆಂಗಳೂರಿನ ವಿದ್ವಾನ್ ನವೀನ್ ಹುಲ್ಲೂರಪ್ಪ ನಿರೂಪಿಸುವರು ಎಂದರು.

ದಿ.ಕೆ.ಎನ್.ನಾಗರಾಜು ಅವರ ಸ್ಮರಣಾರ್ಥ ಅವರಿಗೆ ಗೌರವ ಸಮರ್ಪಣೆ ಮಾಡಲಾಗುವುದು. ನಿವೃತ್ತ ಮುಖ್ಯ ಶಿಕ್ಷಕಿ ಡಾ. ಬಿ.ಜಿ.ಉಮಾ ಅವರಿಗೆ ಶ್ರೀ ನಂದಿಕೇಶ್ವರ ಕಲಾಶ್ರೀ ಪ್ರಶಸ್ತಿ, ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಸದಸ್ಯರಾದ ವಿದುಷಿ ಉಷಾ ಬಸಪ್ಪ ಅವರಿಗೆ ಶ್ರೀ ನಂದಿಕೇಶ್ವರ ನೃತ್ಯಶ್ರೀ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದರು.

ಸುದ್ದಿಗೋಷ್ಠಿಯಲ್ಲಿ ನಿವೃತ್ತ ಮುಖ್ಯ ಶಿಕ್ಷಕಿ ಡಾ. ಬಿ.ಜಿ.ಉಮಾ, ನಗರಸಭೆ ಸದಸ್ಯ ಎಂ.ಎನ್.ಶ್ರೀಧರ್ ಹಾಜರಿದ್ದರು.