ಮದ್ದೂರು ಪಟ್ಟಣದ ಶಿವಪುರದ ಪೂರ್ಣಪ್ರಜ್ಞಾ ವಿದ್ಯಾ ಸಂಸ್ಥೆಯಲ್ಲಿ ಫೆ.6ರಂದು ವಿಜ್ಞಾನ ವಸ್ತು ಪ್ರದರ್ಶನವನ್ನು ಇಸ್ರೋ ವಿಜ್ಞಾನಿ ಡಾ.ಎಸ್.ವೆಂಕಟೇಶ್ವರ ಶರ್ಮ ಉದ್ಘಾಟಿಸಲಿದ್ದಾರೆ.
ಕನ್ನಡಪ್ರಭ ವಾರ್ತೆ ಮದ್ದೂರು
ಪಟ್ಟಣದ ಶಿವಪುರದ ಪೂರ್ಣಪ್ರಜ್ಞಾ ವಿದ್ಯಾ ಸಂಸ್ಥೆಯಲ್ಲಿ ಫೆ.6ರಂದು ವಿಜ್ಞಾನ ವಸ್ತು ಪ್ರದರ್ಶನವನ್ನು ಇಸ್ರೋ ವಿಜ್ಞಾನಿ ಡಾ.ಎಸ್.ವೆಂಕಟೇಶ್ವರ ಶರ್ಮ ಉದ್ಘಾಟಿಸಲಿದ್ದಾರೆ ಎಂದು ಸಂಸ್ಥೆ ಅಧ್ಯಕ್ಷೆ ಕಸ್ತೂರಿ ಅನಂತೇಗೌಡ ಮಂಗಳವಾರ ಹೇಳಿದರು.ಶಾಲೆ ಆವರಣದಲ್ಲಿ ಬೆಳಗ್ಗೆ 10.30ಕ್ಕೆ ಕೆಂಗೇರಿ ವಿಶ್ವ ಒಕ್ಕಲಿಗರ ಮಹಾಸಂಸ್ಥಾನದ ಪೀಠಾಧ್ಯಕ್ಷ ನಿಶ್ಚಲಾನಂದ ಶ್ರೀಗಳ ಸಾನಿಧ್ಯದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಶಾಸಕ ಕೆ.ಎಂ.ಉದಯ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.
ವಿದ್ಯಾ ಸಂಸ್ಥೆಯಲ್ಲಿ ವ್ಯಾಸಂಗ ಮಾಡಿ ಪ್ರಸ್ತುತ ವೈದ್ಯಕೀಯ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಜಿಪಂ ಸಿಇಒ ಕೆ.ಆರ್. ನಂದಿನಿ ಪ್ರತಿಭಾ ಪುರ ಪುರಸ್ಕಾರ ನೀಡಿ ಗೌರವಿಸಲಿದ್ದಾರೆ. ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುವ ವಿದ್ಯಾರ್ಥಿಗಳಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಸಿ.ಧನಂಜಯ ಹಾಗೂ ನಿವೃತ್ತ ಶಿಕ್ಷಣಾಧಿಕಾರಿ ಬಿ.ಎನ್. ಮರೀಗೌಡ ಸನ್ಮಾನಿಸಲಿದ್ದಾರೆ.ಕಾರ್ಯಕ್ರಮದಲ್ಲಿ ಎಸ್.ವಿ.ರಮೇಶ್, ಡಾ.ಬಿ.ಕೃಷ್ಣ, ಕೆ.ಪಿ.ನಾಗೇಶ್, ಎಂ.ರಾಜೇಂದ್ರ ಹಾಗೂ ಪುಟ್ಟರಾಜು ಪಾಲ್ಗೊಳ್ಳಲಿದ್ದಾರೆ ಎಂದು ಕಸ್ತೂರಿ ಅನಂತಗೌಡ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ವಿದ್ಯಾಸಂಸ್ಥೆ ಕಾರ್ಯದರ್ಶಿ ಎಚ್.ಆರ್. ಅನಂತಗೌಡ ಇದ್ದರು.
ಇಂದು ಬೃಹತ್ ಕಾಲ್ನಡಿಗೆ ಜಾಥಾ: ವಾಕಥಾನ್ಮಂಡ್ಯ:
ಜಿಲ್ಲಾಡಳಿತ, ಸಾರಿಗೆ ಇಲಾಖೆ, ಪೊಲೀಸ್ ಇಲಾಖೆ, ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ, ಕಾನೂನು ಸೇವೆಗಳ ಪ್ರಾಧಿಕಾರ, ಸ್ಕೌಟ್ ಅಂಡ್ ಗೈಡ್ ಸಹಯೋಗದೊಂದಿಗೆ ರಾಷ್ಟ್ರೀಯ ರಸ್ತೆ ಸುರಕ್ಷತಾ ಜಾಗೃತಿ ಮಾಸಾಚಾರಣೆ 2026ರ ಅಂಗವಾಗಿ ಫೆ.4 ರಂದು ಬೃಹತ್ ಕಾಲ್ನಡಿಗೆ ಜಾಥಾ-ವಾಕಥಾನ್ ಹಮ್ಮಿಕೊಳ್ಳಲಾಗಿದೆ. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಅಧ್ಯಕ್ಷ ಡಾ.ಕುಮಾರ ಅಂದು ಬೆಳಗ್ಗೆ 8.30ಕ್ಕೆ ಜಿಲ್ಲಾಧಿಕಾರಿಗಳ ಕಚೇರಿಯಿಂದ ಜಯಚಾಮರಾಜ ಒಡೆಯರ್ ವೃತ್ತದವರಿಗೆ ಜಾಥಾಗೆ ಚಾಲನೆ ನೀಡಲಿದ್ದಾರೆ. ಜಿಲ್ಲಾ ಕಾನೂನು ಸೇವಗಳ ಪ್ರಾಧಿಕಾರ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳಾದ ಎಂ.ಆನಂದ್, ಜಿಪಂ ಸಿಇಒ ಕೆ.ಆರ್.ನಂದಿನಿ, ಆರಕ್ಷಕ ಅಧೀಕ್ಷಕರಾದ ವಿ.ಜೆ.ಶೋಭಾರಾಣಿ, ಅಪರ ಜಿಲ್ಲಾಧಿಕಾರಿ ಬಿ.ಸಿ. ಶಿವಾನಂದಮೂರ್ತಿ, ಜಂಟಿ ಸಾರಿಗೆ ಆಯುಕ್ತೆ ಎಂ.ಶೋಭಾ, ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಕಾರ್ಯನಿರ್ವಾಹಕ ಅಭಿಯಂತರರಾದ ಕೆ.ಎಂ.ಪುರುಷೋತ್ತಮ್, ವಿಭಾಗೀಯ ನಿಯಂತ್ರಣ ಅಧಿಕಾರಿ ಕೆ.ಎಂ.ಶರಣ್ ಬಸವರಾಜು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ನಿರ್ದೇಶಕರಾದ ಟಿ.ಕೆ.ಹರೀಶ್, ಪ್ರಾದೇಶಿಕ ಸಾರಿಗೆ ಅಧಿಕಾರಿ ಟಿ.ಜಿ.ಹೇಮಾವತಿ ಭಾಗವಹಿಸುವರು.