ಸಾರಾಂಶ
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯು ಸ್ವಯಂಪ್ರೇರಿತ, ರಾಜಕೀಯೇತರ ಮತ್ತು ಜಾತ್ಯತೀತ ಸಂಸ್ಥೆಯಾಗಿದೆ.
ಹೊಸಪೇಟೆ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯು ಯುವಜನತೆಯಲ್ಲಿ ನಾಯಕತ್ವ ಗುಣ ಮತ್ತು ಸಮಾಜ ಸೇವಾ ಕೌಶಲ್ಯಗಳನ್ನು ಬೆಳೆಸುತ್ತದೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್ ಸಿಂಧ್ಯಾ ಹೇಳಿದರು.
ನಗರದ ಮಹಿಳಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಜಿಲ್ಲಾ ಘಟಕದಿಂದ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯನ್ನು ಉದ್ಘಾಟಿಸಿ ಅವರು ಸೋಮವಾರ ಮಾತನಾಡಿದರು.ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯು ಸ್ವಯಂಪ್ರೇರಿತ, ರಾಜಕೀಯೇತರ ಮತ್ತು ಜಾತ್ಯತೀತ ಸಂಸ್ಥೆಯಾಗಿದೆ. ಇದರಿಂದ ಕ್ಯಾಂಪಿಂಗ್, ಹೈಕಿಂಗ್ ಮತ್ತು ಸಮಾಜ ಸೇವೆಯಂತಹ ಚಟುವಟಿಕೆಗಳ ಮೂಲಕ ದೈಹಿಕ, ಮಾನಸಿಕ, ಸಾಮಾಜಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಸಹಾಯವಾಗಲಿದೆ ಎಂದರು.ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಜಿಲ್ಲಾ ಘಟಕದ ಕಾರ್ಯದರ್ಶಿ ಮಂಜುನಾಥಪ್ಪ ಮಾತನಾಡಿದರು.ಡಿಡಿಪಿಐ ಕಚೇರಿಯ ವಿಷಯ ಪರಿವೀಕ್ಷಕ ಬಸವಂತಯ್ಯ, ಬಿಇಒ ಶೇಖರಪ್ಪ ಹೊರಪೇಟೆ, ಕೂಡ್ಲಿಗಿ ಬಿಇಒ ಲೇಪಾಕ್ಷಪ್ಪ, ಹರಪನಹಳ್ಳಿ ತಾಲೂಕು ದೈಹಿಕ ನಿರೀಕ್ಷಕ ಷಣ್ಮುಖಪ್ಪ, ಹರಪನಹಳ್ಳಿ ಕ್ಷೇತ್ರ ಸಮನ್ವಯ ಅಧಿಕಾರಿ ಶಿವಕುಮಾರ್, ಪ್ರೌಢಶಾಲೆ ಶಿಕ್ಷಕರ ಸಂಘದ ಅಧ್ಯಕ್ಷೆ ಅಕ್ಕಮಹಾದೇವಿ, ಶಿಕ್ಷಕರಾದ ಮಲ್ಲೇಶ್ವರಿ ಜುಜಾರೆ, ರಜನಿ ಶ್ರೀನಿವಾಸ್, ಕಮಲಾ ದಿಕ್ಷೀತ್ ಹಾಗೂ ಜಿಲ್ಲಾ ಮತ್ತು ತಾಲೂಕು ಮಟ್ಟದ ಪದಾಧಿಕಾರಿಗಳು ಭಾಗವಹಿಸಿದ್ದರು.
ಹೊಸಪೇಟೆಯ ಮಹಿಳಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಜಿಲ್ಲಾ ಘಟಕದಿಂದ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯನ್ನು ಉದ್ಘಾಟಿಸಿ ಅವರು ಸೋಮವಾರ ಮಾತನಾಡಿದರು.