ಸಾರಾಂಶ
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕಛೇರಿಯಲ್ಲಿ ವಾರ್ಷಿಕ ಮಹಾಸಭೆ
ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ದೇಶದ ಭವಿಷ್ಯಕ್ಕಾಗಿ ಉತ್ತಮ ಪ್ರಜೆಗಳನ್ನು ರೂಪಿಸುವ ಸಂಸ್ಥೆಯಾಗಿದೆ. ಈ ಸಂಸ್ಥೆಯನ್ನು ಅಭಿವೃದ್ಧಿ ಮಾಡಬೇಕು ಎಂದು ಜಿಲ್ಲಾ ಮುಖ್ಯ ಆಯುಕ್ತ ಎಂ.ಎನ್. ಷಡಕ್ಷರಿ ಹೇಳಿದ್ದಾರೆ.ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯಿಂದ ಶುಕ್ರವಾರ ನಗರದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕಚೇರಿಯಲ್ಲಿ ನಡೆದ 2023-24 ನೇ ಸಾಲಿನ ವಾರ್ಷಿಕ ಮಹಾಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ಯುವಕರು ಮತ್ತು ಮಕ್ಕಳು ಕುಡಿತ, ಜೂಜಾಟಗಳಂತಹ ಕೆಟ್ಟ ಚಟಗಳಿಗೆ ಬಲಿಯಾಗಿ ತಮ್ಮ ಜೀವನ ಹಾಳು ಮಾಡಿಕೊಳ್ಳುತ್ತಿದ್ದಾರೆ. ಇಂತಹ ಕೆಟ್ಟ ಚಟಗಳಿಂದ ಅವರನ್ನು ದೂರ ಮಾಡಲು ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಶಾಲಾ ಕಾಲೇಜುಗಳಲ್ಲಿ ಪ್ರಾಯೋಗಿಕ ಶಿಬಿರ ಮಾಡುವ ಮೂಲಕ ಮಕ್ಕಳಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್‌ಗಳ ಬಗ್ಗೆ ಅರಿವು ಮೂಡಿಸಿ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು ಭಾಗವಹಿಸಿ ತಮ್ಮ ಕರ್ತವ್ಯ ನಿಭಾಯಿಸುವಂತೆ ಮಾಡಬೇಕು ಎಂದು ಹೇಳಿದರು.
ಪ್ರಪಂಚದಾದ್ಯಂತ ಶಾಂತಿ ಸಾರುವ ಈ ಸಂಸ್ಥೆಗೆ ನೋಬೆಲ್ ಪ್ರಶಸ್ತಿ ಲಭಿಸಿರುವುದು ಹೆಮ್ಮೆಯ ಸಂಗತಿ. ಯಾವುದೇ ಬೇಧ ಭಾವ, ವಯಸ್ಸಿನ ಮಿತಿಯಿಲ್ಲದೇ ಯಾವುದೇ ಸಂಭಾವನೆ ನೀರಿಕ್ಷಿಸದೆ ನಿಸ್ವಾರ್ಥ ಭಾವದಿಂದ ಸಂಸ್ಥೆಗೆ ಸದಾ ನಿಷ್ಠೆಯಿಂದ ಸೇವೆ ಸಲ್ಲಿಸಿರುವ ಸ್ಕೌಟ್ಸ್ ಮತ್ತು ಗೈಡ್ಸ್‌ಗಳಿಂದ ಇದು ಸಾಧ್ಯವಾಗಿದೆ ಎಂದರು.ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಜಿಲ್ಲಾ ಕಾರ್ಯದರ್ಶಿ ನೀಲಕಂಠಚಾರ್ ವಾರ್ಷಿಕ ವರದಿ ವಾಚಿಸಿದರು. ಜಿಲ್ಲಾ ಖಜಾಂಚಿ ಕೆ.ಎಸ್. ರಮೇಶ್ ಲೆಕ್ಕಪತ್ರ ಮಂಡಿಸಿದರು. ಗೈಡ್ಸ್ ಆಯುಕ್ತೆ ಮಮತಾ ಸ್ವಾಗತಿಸಿದರು. ಸಭೆಯಲ್ಲಿ ಜಿಲ್ಲಾ ತರಬೇತಿ ಆಯುಕ್ತೆ ಸಂಧ್ಯಾರಾಣಿ, ಸ್ಕೌಟ್ಸ್ ಜಿಲ್ಲಾ ಆಯುಕ್ತರು ಟಿ.ಕೆ. ಫಣಿರಾಜ್ ಮತ್ತು ಸ್ಥಳೀಯ ಸಂಸ್ಥೆ ಕಾರ್ಯದರ್ಶಿಗಳು ಭಾಗವಹಿಸಿದ್ದರು. 15 ಕೆಸಿಕೆಎಂ 2ಚಿಕ್ಕಮಗಳೂರಿನ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕಛೇರಿಯಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ಸಂಸ್ಥೆಯ ವಾರ್ಷಿಕ ಮಹಾಸಭೆಯಲ್ಲಿ ಎಂ.ಎನ್. ಷಡಕ್ಷರಿ ಮಾತನಾಡಿದರು. ನೀಲಕಂಠಚಾರ್, ಮಮತಾ, ಸಂಧ್ಯರಾಣಿ, ಫಣಿರಾಜ್ ಇದ್ದರು.