ನಾಮಪತ್ರ ಪರಿಶೀಲನೆ, 13 ನಾಮಪತ್ರಗಳು ಅಂಗೀಕೃತ

| Published : May 20 2024, 01:33 AM IST

ಸಾರಾಂಶ

ಮೇ 20ರಂದು ಮಧ್ಯಾಹ್ನ 3 ಗಂಟೆ ವರೆಗೆ ನಾಮಪತ್ರ ಹಿಂಪಡೆಯಲು ಅವಕಾಶವಿದೆ ಎಂದು ಮೈಸೂರು ವಿಭಾಗದ ಪ್ರಾದೇಶಿಕ ನಿರ್ದೇಶಕರಾದ ಡಾ. ಜಿ. ಸಿ. ಪ್ರಕಾಶ್‌ ತಿಳಿಸಿದರು.

ಮಡಿಕೇರಿ : ಕರ್ನಾಟಕ ವಿಧಾನ ಪರಿಷತ್ತಿನ ನೈರುತ್ಯ ಪದವೀಧರರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರ ಮತ್ತು ದಕ್ಷಿಣ ಶಿಕ್ಷಕರ ಕ್ಷೇತ್ರಗಳ ಚುನಾವಣೆ-2024 ಕ್ಕೆ ಸಂಬಂಧಿಸಿದಂತೆ ಸ್ವೀಕೃತವಾದ ನಾಮಪತ್ರಗಳ ಪರಿಶೀಲನಾ ಕಾರ್ಯವು ಶುಕ್ರವಾರ(ಮೇ 17) ನಡೆಯಿತು.

ನಾಮಪತ್ರಗಳ ಪರಿಶೀಲನೆಯಲ್ಲಿ ಕ್ಷೇತ್ರವಾರು ನಾಮಪತ್ರಗಳು ಅಂಗೀಕಾರ ಮತ್ತು ತಿರಸ್ಕೃತವಾಗಿರುವ ವಿವರ ಇಂತಿದೆ. ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ 13 ಮಂದಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, 13 ನಾಮಪತ್ರಗಳು ಅಂಗೀಕೃತವಾಗಿವೆ.

ನೈರುತ್ಯ ಪದವೀಧರರ ಕ್ಷೇತ್ರಕ್ಕೆ11 ಮಂದಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, 11 ನಾಮಪತ್ರಗಳು ಅಂಗೀಕೃತವಾಗಿವೆ. ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ 10 ಮಂದಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, 9 ನಾಮಪತ್ರಗಳು ಅಂಗೀಕೃತವಾಗಿವೆ. 01 ನಾಮಪತ್ರ ತಿರಸ್ಕೃತಗೊಂಡಿದೆ. ಎಂ.ಸತೀಶ್ ಕಾರಂತ್, ಪಕ್ಷೇತರ ಅಭ್ಯರ್ಥಿ ಅವರು ನಮೂನೆ-26 ನೋಟರಿ ಅಫಿಡವಿಟ್ ಹಾಗೂ ವಿಧಾನಸಭಾ ಮತದಾರರ ಪಟ್ಟಿಯ ದೃಢೀಕೃತ ಪ್ರತಿಯನ್ನು ಸಲ್ಲಿಸದಿರುವುದರಿಂದ ತಿರಸ್ಕೃತಗೊಂಡಿರುತ್ತದೆ.

ಮೇ 20 ರಂದು ಮಧ್ಯಾಹ್ನ 3 ಗಂಟೆಯವರೆಗೆ ನಾಮಪತ್ರಗಳನ್ನು ಹಿಂಪಡೆಯಲು ಅವಕಾಶವಿರುತ್ತದೆ ಎಂದು ಕರ್ನಾಟಕ ವಿಧಾನ ಪರಿಷತ್ತಿನ ನೈರುತ್ಯ ಪದವೀಧರರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರ ಮತ್ತು ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರಾದ ಡಾ.ಜಿ.ಸಿ.ಪ್ರಕಾಶ್ ಅವರು ತಿಳಿಸಿದ್ದಾರೆ.