ಕೊಲ್ಲೂರು ಸಮೀಪ ನಿರ್ಮಾಣ ಹಂತದ ದೇವಸ್ಥಾನದ ಮೇಲಿನಿಂದ ಆಯತಪ್ಪಿ ಬಿದ್ದು ಗಂಭೀರ ಗಾಯಗೊಂಡಿದ್ದ ಶಿಲ್ಪಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಕುಂದಾಪುರ ; ಕೊಲ್ಲೂರು ಸಮೀಪ ನಿರ್ಮಾಣ ಹಂತದ ದೇವಸ್ಥಾನದ ಮೇಲಿನಿಂದ ಆಯತಪ್ಪಿ ಬಿದ್ದು ಗಂಭೀರ ಗಾಯಗೊಂಡಿದ್ದ ಶಿಲ್ಪಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮೃತರನ್ನು ಕಾರ್ಕಳ ತಾಲೂಕಿನ ಕುಕ್ಕಂದೂರು ಗ್ರಾಮ ಶರತ್ ಕುಮಾರ್ (30) ಎಂದು ಗುರುತಿಸಲಾಗಿದೆ.ಅವರು ವಂಡ್ಸೆ ಗ್ರಾಮದ ಕಂಬಳಗದ್ದೆ ಬಳಿಯ ದೇವಸ್ಥಾನದಲ್ಲಿ ಅ.16 ರಂದು ಸಂಜೆ 4:30ರ ಸುಮಾರಿಗೆ ಕೆಲಸ ಮಾಡುವಾಗ ಆಯತಪ್ಪಿ ಮೇಲಿನಿಂದ ಕೆಳಗೆ ಬಿದ್ದಿದ್ದಾರೆ. ಹಣೆಗೆ, ಎಡ ಭುಜಕ್ಕೆ ತೀವ್ರ ಗಾಯಗೊಂಡಿದ್ದ ಅವರನ್ನು ಸ್ಥಳೀಯ ಚಿನ್ಮಯಿ ಆಸ್ಪತ್ರೆಗೆ, ನಂತರ ಉಡುಪಿ ಆದರ್ಶ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ 8:45ಕ್ಕೆ ಮೃತಪಟ್ಟಿದ್ದಾರೆ ಎಂದು ಮೃತರ ತಂದೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
