ತಾಲೂಕು ಅಧ್ಯಕ್ಷರಾಗಿ ಎಸ್.ಡಿ.ನಾಯಕ್, ಸುಮಾ ಆಯ್ಕೆ

| Published : Feb 18 2024, 01:31 AM IST

ತಾಲೂಕು ಅಧ್ಯಕ್ಷರಾಗಿ ಎಸ್.ಡಿ.ನಾಯಕ್, ಸುಮಾ ಆಯ್ಕೆ
Share this Article
  • FB
  • TW
  • Linkdin
  • Email

ಸಾರಾಂಶ

ಸೊರಬ ತಾಲೂಕಿನ ಬ್ರಹ್ಮಶ್ರೀ ನಾರಾಯಣಗುರು ಧರ್ಮ ಪರಿಪಾಲನಾ ಸಂಘದ ತಾಲೂಕು ಅಧ್ಯಕ್ಷರಾಗಿ ಎಸ್.ಡಿ. ನಾಯಕ್ ಮತ್ತು ಮಹಿಳಾ ಘಟಕ ಅಧ್ಯಕ್ಷರಾಗಿ ಸುಮಾ ಸಂತೋಷ್ ಅವರನ್ನು ಆಯ್ಕೆ ಮಾಡಲಾಯಿತು. ಶುಕ್ರವಾರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬಿ.ಎಸ್.ಎನ್. ಡಿಪಿ ಸಂಘಟನೆಯ ತಾಲೂಕು ಸಂಘಟನೆಯ ಪುರುಷ-ಮಹಿಳಾ ಪದಾಧಿಕಾರಿಗಳ ಆಯ್ಕೆಗಾಗಿ ಕರೆಯಲಾಗಿದ್ದ ಸಭೆಯಲ್ಲಿ ಸಂಘಟನೆ ರಾಜ್ಯಾಧ್ಯಕ್ಷ ಸೈದಪ್ಪ ಗುತ್ತೇದಾರ್ ನೇತೃತ್ವದಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಕನ್ನಡಪ್ರಭ ವಾರ್ತೆ ಸೊರಬ

ತಾಲೂಕಿನ ಬ್ರಹ್ಮಶ್ರೀ ನಾರಾಯಣಗುರು ಧರ್ಮ ಪರಿಪಾಲನಾ ಸಂಘದ ತಾಲೂಕು ಅಧ್ಯಕ್ಷರಾಗಿ ಎಸ್.ಡಿ. ನಾಯಕ್ ಮತ್ತು ಮಹಿಳಾ ಘಟಕ ಅಧ್ಯಕ್ಷರಾಗಿ ಸುಮಾ ಸಂತೋಷ್ ಅವರನ್ನು ಆಯ್ಕೆ ಮಾಡಲಾಯಿತು.

ಶುಕ್ರವಾರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬಿ.ಎಸ್.ಎನ್. ಡಿಪಿ ಸಂಘಟನೆಯ ತಾಲೂಕು ಸಂಘಟನೆಯ ಪುರುಷ-ಮಹಿಳಾ ಪದಾಧಿಕಾರಿಗಳ ಆಯ್ಕೆಗಾಗಿ ಕರೆಯಲಾಗಿದ್ದ ಸಭೆಯಲ್ಲಿ ಸಂಘಟನೆ ರಾಜ್ಯಾಧ್ಯಕ್ಷ ಸೈದಪ್ಪ ಗುತ್ತೇದಾರ್ ನೇತೃತ್ವದಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಸೈದಪ್ಪ ಗುತ್ತಿದಾರ್ ಈ ಸಂದರ್ಭ ಮಾತನಾಡಿ, ಜೆ.ಪಿ. ನಾರಾಯಣಸ್ವಾಮಿ ಜನ್ಮದಿನದಂದು ಮೈಸೂರಿನಲ್ಲಿ ಈಡಿಗ ಸಮುದಾಯದ 26 ಒಳಪಂಗಡಗಳ ಸಮಾವೇಶವನ್ನು ಫೆ.25ರಂದು ಹಮ್ಮಿಕೊಳ್ಳಲಾಗಿದೆ. ಸಂಘಟನೆಯ ಮೂಲಕ ಸರ್ಕಾರದ ಸೌಲಭ್ಯಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಸಂಘಟನಾತ್ಮಕವಾಗಿ ನಾವೆಲ್ಲರೂ ಕಾರ್ಯ ಪ್ರವೃತ್ತರಾಗಬೇಕಿದೆ ಎಂದರು.

ಸಂಘಟನೆಯು 2015ರಿಂದ ನಿರಂತರವಾಗಿ ಹಲವು ಸಮಾಜಮುಖಿ ಚಟುವಟಿಕೆಗಳನ್ನು ಮಾಡುತ್ತಿದೆ. ಮಹಿಳಾ ಸಂಘಟನೆಯು ರಾಜಕೀಯ, ಶೈಕ್ಷಣಿಕ, ಆರ್ಥಿಕ ಹಾಗೂ ಸಾಮಾಜಿಕವಾಗಿ ಹಿಂದುಳಿದ ಹಾಗೂ ಮಾನಸಿಕ ಖಿನ್ನತೆಯಿಂದ ಬಳಲುತ್ತಿರುವವರಿಗೆ ಅಪ್ತ ಸಮಾಲೋಚನೆ ನಡೆಸಿ ಧೈರ್ಯವನ್ನು ತುಂಬುವ ಮೂಲಕ ಸಮಾಜದ ಮುಖ್ಯವಾಹಿನಿಗೆ ತರಲು ಎಲ್ಲರೂ ಸಹಭಾಗಿತ್ವದಿಂದ ಶ್ರಮಿಸಬೇಕಿದೆ ಎಂದರು.

ಪದಾಧಿಕಾರಿಗಳು:

ಇದೇ ಸಂದರ್ಭ ಬ್ರಹ್ಮಶ್ರೀ ನಾರಾಯಣಗುರು ಧರ್ಮ ಪರಿಪಾಲನ ಸಂಘದ ತಾಲೂಕು ಕಾರ್ಯಕಾರಿ ಸಮಿತಿ ರಚನೆ ಮಾಡಲಾಯಿತು. ಉಪಾಧ್ಯಕ್ಷರಾಗಿ ಶಶಿಕಲಾ, ಸುಮಂಗಲಾ, ಪ್ರಧಾನ ಕಾರ್ಯದರ್ಶಿಯಾಗಿ ರೇಖಾ, ಕಾರ್ಯದರ್ಶಿಯಾಗಿ ಮಮತಾ, ಉಪ ಕಾರ್ಯದರ್ಶಿ ದಾಕ್ಷಾಯಿಣಿ, ಸಂಘಟನಾ ಕಾರ್ಯದರ್ಶಿ ಶ್ಯಾಮಲಾ, ಪ್ರಿಯದರ್ಶಿನಿ, ಗೌರವಾಧ್ಯಕ್ಷರಾಗಿ ಸರಿತಾ. ವನಿತಾ, ಸಂಚಾಲಕರಾಗಿ ನಾಗಮ್ಮ, ಜಂಟಿ ಕಾರ್ಯದರ್ಶಿ ಕಾವ್ಯ, ಸಂಘಟನಾ ಕಾರ್ಯದರ್ಶಿ ಹೇಮಾವತಿ, ರೇಣುಕಾ, ಗಂಗಮ್ಮ, ಜಯಶೀಲ, ಸಹ ಸಂಚಾಲಕಿ ಅರ್ಚನಾ, ಜಿಲ್ಲಾ ಸಮಿತಿಗೆ ಅನಸೂಯಾ, ಶ್ಯಾಮಲಾ, ವನಿತಾ ಆಯ್ಕೆ ಆದರು.

ಜಿಲ್ಲಾಧ್ಯಕ್ಷ ಕಲ್ಲಪ್ಪ ಚಿತ್ರಟ್ಟೆಹಳ್ಳಿ, ರಾಜ್ಯ ಸಮಿತಿ ಉಪಾಧ್ಯಕ್ಷ ನಾಗರಾಜ್ ಕೈಸೋಡಿ, ತ್ಯಾಗರಾಜ್, ಪ್ರಶಾಂತ್ ನಾಯ್ಕ್, ದೇವರಾಜ್ ಮೊದಲಾದವರಿದ್ದರು.

- - - -17ಕೆಪಿಸೊರಬ01:

ಸೊರಬ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಧರ್ಮ ಪರಿಪಾಲನ ಸಂಘದ ತಾಲೂಕು ಘಟಕದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.