ಕನ್ನಡಪ್ರಭ ವಾರ್ತೆ ವಿಜಯಪುರ ನಗರದ ಪೆಟ್ರೋಲ್ ಬಂಕ್‌ನ ನಕಾಶೆ ಆನ್‌ಲೈನ್‌ನಲ್ಲಿ ಅಪ್‌ಲೋಡ್ ಮಾಡಲು ಲಂಚಕ್ಕೆ ಬೇಡಿಕೆಯಿಟ್ಟು, ₹15 ಸಾವಿರ ಲಂಚ ಪಡೆಯುವಾಗ ಜಿಲ್ಲಾಡಳಿತ ಕಚೇರಿಯ ದ್ವಿತೀಯ ದರ್ಜೆ ಸಹಾಯಕ ಅರವಿಂದ ಪವಾರ ಹಾಗೂ ಹೊರಗುತ್ತಿಗೆ ನೌಕರ ಕಂಪ್ಯೂಟರ್ ಆಪರೇಟರ್ ಅಯೂಬ್ ತೊನಶ್ಯಾಳ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ.
ಕನ್ನಡಪ್ರಭ ವಾರ್ತೆ ವಿಜಯಪುರ
ನಗರದ ಪೆಟ್ರೋಲ್ ಬಂಕ್‌ನ ನಕಾಶೆ ಆನ್‌ಲೈನ್‌ನಲ್ಲಿ ಅಪ್‌ಲೋಡ್ ಮಾಡಲು ಲಂಚಕ್ಕೆ ಬೇಡಿಕೆಯಿಟ್ಟು, ₹15 ಸಾವಿರ ಲಂಚ ಪಡೆಯುವಾಗ ಜಿಲ್ಲಾಡಳಿತ ಕಚೇರಿಯ ದ್ವಿತೀಯ ದರ್ಜೆ ಸಹಾಯಕ ಅರವಿಂದ ಪವಾರ ಹಾಗೂ ಹೊರಗುತ್ತಿಗೆ ನೌಕರ ಕಂಪ್ಯೂಟರ್ ಆಪರೇಟರ್ ಅಯೂಬ್ ತೊನಶ್ಯಾಳ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ.ದೂರುದಾರ ಸುಶೀಲ ವಗ್ಗೆನ್ನವರ ಎಂಬುವವರ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಪೊಲೀಸರು, ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಲೋಕಾಯುಕ್ತ ಎಸ್‌ಪಿ ಟಿ.ಮಲ್ಲೇಶ ಮಾರ್ಗದರ್ಶನದಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ.
