ಬೆಳ್ತಂಗಡಿ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಮಹಾವಿದ್ಯಾಲಯದ ಸಮ್ಯಗ್ದರ್ಶನ ಸಭಾಭವನದಲ್ಲಿ ಕೀರ್ತಿಶೇಷ ಡಿ. ರತ್ನವರ್ಮ ಹೆಗ್ಗಡೆ ಸ್ಮಾರಕ ಮಂಗಳೂರು ವಿಶ್ವವಿದ್ಯಾಲಯ ಮಟ್ಟದ ಅಂತರ್ ಕಾಲೇಜು ಕನ್ನಡ ಚರ್ಚಾ ಸ್ಪರ್ಧೆಗೆ ಅಳದಂಗಡಿ ಅರಮನೆಯ ಡಾ. ಪದ್ಮಪ್ರಸಾದ ಅಜಿಲ ಚಾಲನೆ ನೀಡಿದರು.ಬಳಿಕ ಮಾತನಾಡಿದ ಅವರು ಪ್ರತಿಯೊಂದು ವಿಷಯದಲ್ಲೂ ವಿರೋಧದ ವಾದ ಇದ್ದರೆ ಮಾತ್ರ ವಾಸ್ತವದ ವಿಷಯವನ್ನು ಅರಿತು ಕೊಳ್ಳಲು ಸಾಧ್ಯ. ಹಾಗೆಯೇ ಬದುಕಿನಲ್ಲಿ ಸರಿ ತಪ್ಪು ಮತ್ತು ವಿರೋಧದ ಅಂದಾಜು ಇದ್ದರೆ ಮಾತ್ರ ಸರಿ ದಾರಿಯಲ್ಲಿ ಸಾಗಲು ಅನುಕೂಲವಾಗುತ್ತದೆ ಎಂದರು.ಅಧ್ಯಕ್ಷತೆ ವಹಿಸಿದ್ದ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್ ಮಾತನಾಡಿ, ಮನುಷ್ಯ ಅರವತ್ತರ ಹೊಸ್ತಿಲು ತಲುಪುತ್ತಿದ್ದಂತೆ ನಿವೃತ್ತಿಯೆಡೆಗೆ ಸಾಗುತ್ತಾನೆ. ಆದರೆ ಒಂದು ವಿದ್ಯಾ ಸಂಸ್ಥೆ 60 ವರ್ಷ ಕಳೆಯುತ್ತಿದ್ದಂತೆ ಉನ್ನತ ಹಂತವನ್ನು ಏರುತ್ತದೆ ಎಂದರು.ಪ್ರಾಂಶುಪಾಲ ಪ್ರೊ ವಿಶ್ವನಾಥ್ ಪಿ, ಕಾರ್ಯಕ್ರಮದ ಸಂಯೋಜಕ ಡಾ. ನಾಗಣ್ಣ ಮತ್ತು ಉಪನ್ಯಾಸಕ ಪ್ರವೀಣ್ ಉಪಸ್ಥಿತರಿದ್ದರು. ಕಾಲೇಜಿನ ಆಡಳಿತ ಕುಲಸಚಿವ ಪ್ರೊ. ಶ್ರೀಧರ್ ಎನ್ ಭಟ್ , ಪರೀಕ್ಷಾಂಗ ಕುಲಸಚಿವ ಗಣೇಶ್ ನಾಯಕ್ ಸೇರಿದಂತೆ ಪ್ರಮುಖರು ಭಾಗಿಯಾಗಿದ್ದರು.
ಬಹುಮಾನ: ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜುಗಳ ಕನ್ನಡ ಚರ್ಚಾ ಸ್ಪರ್ಧೆಗೆ ಉಡುಪಿ, ಮಡಿಕೇರಿ , ಮಂಗಳೂರು ಸೇರಿದಂತೆ 20 ಕ್ಕೂ ಅಧಿಕ ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಪ್ರಶಸ್ತಿ ವಿಜೇತ ವಿದ್ಯಾರ್ಥಿಗಳಿಗೆ ಪ್ರಥಮ 10,000 ರು. ಹಾಗು ದ್ವಿತೀಯ 8,000 ರು. ಹಾಗು ತೃತೀಯ 5,000 ರು. ನಗದು ಬಹುಮಾನವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಉಪನ್ಯಾಸಕ ಡಾ. ದಿವಾಕರ ಕೊಕ್ಕಡ ನಿರೂಪಿಸಿ, ಉಪನ್ಯಾಸಕಿ ಡಾ. ಧಾನೇಶ್ವರಿ ವಂದಿಸಿದರು.ಚರ್ಚಾ ಸ್ಪರ್ಧೆ ವಿದ್ಯಾರ್ಥಿಯ ಸರ್ವತೋಮುಖ ಬೆಳವಣಿಗೆಗೆ ಪೂರಕ: ಡಾ. ಅಜಿಲ
ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಮಹಾವಿದ್ಯಾಲಯದ ಸಮ್ಯಗ್ದರ್ಶನ ಸಭಾಭವನದಲ್ಲಿ ಕೀರ್ತಿಶೇಷ ಡಿ. ರತ್ನವರ್ಮ ಹೆಗ್ಗಡೆ ಸ್ಮಾರಕ ಮಂಗಳೂರು ವಿಶ್ವವಿದ್ಯಾಲಯ ಮಟ್ಟದ ಅಂತರ್ ಕಾಲೇಜು ಕನ್ನಡ ಚರ್ಚಾ ಸ್ಪರ್ಧೆಗೆ ಅಳದಂಗಡಿ ಅರಮನೆಯ ಡಾ. ಪದ್ಮಪ್ರಸಾದ ಅಜಿಲ ಚಾಲನೆ ನೀಡಿದರು.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.