ಮಾರ್ಚ್ 15ರಂದು ಎಸ್‌ಡಿಎಂ ಪತ್ರಿಕೋದ್ಯಮ ಸ್ನಾತಕೋತ್ತರ ವಿಭಾಗ ಅಲ್ಯುಮ್ನಿ ಮೀಟ್‌

| Published : Mar 13 2025, 12:52 AM IST

ಸಾರಾಂಶ

ಉಜಿರೆಯ ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ವಿಭಾಗವು ೧೫ ರಂದು ‘ಅಲ್ಯುಮ್ನಿ ಮೀಟ್’ ಕಾರ್ಯಕ್ರಮ ಹಮ್ಮಿಕೊಂಡಿದೆ.

ಕನ್ನಡಪ್ರಭ ವಾರ್ತೆ ಬೆಳ್ತಂಗಡಿ

ಉಜಿರೆಯ ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ವಿಭಾಗವು ೧೫ ರಂದು ‘ಅಲ್ಯುಮ್ನಿ ಮೀಟ್’ ಕಾರ್ಯಕ್ರಮ ಹಮ್ಮಿಕೊಂಡಿದೆ. ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗ ಪ್ರಾರಂಭವಾದಾಗಿನಿಂದ ಇಲ್ಲಿಯವರೆಗೆ ವಿಭಾಗದಲ್ಲಿ ವ್ಯಾಸಂಗ ಮಾಡಿದ ಎಲ್ಲಾ ವಿದ್ಯಾರ್ಥಿಗಳನ್ನು ಒಟ್ಟಿಗೆ ಸೇರಿಸಿ ಸಂಭ್ರಮಿಸುವ ಕಾರ್ಯಕ್ರಮ ಇದಾಗಿದೆ.

ಮುದ್ರಣ, ಶ್ರವ್ಯ, ದೃಶ್ಯ ಮತ್ತು ಹೊಸ ಕಾಲದ ಡಿಜಿಟಲ್ ವೇದಿಕೆಗಳು ಪ್ರತಿಷ್ಠಿತ ಸಮೂಹ ಮಾಧ್ಯಮ ಸಂಸ್ಥೆಗಳಲ್ಲಿ ಸೇರಿದಂತೆ ಎಸ್.ಡಿ.ಎಂ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಹಳೆಯ ವಿದ್ಯಾರ್ಥಿಗಳು ಕಾರ್ಯನಿರ್ವಹಿಸುತ್ತಿದ್ದಾರೆ. ಈ ವಿದ್ಯಾರ್ಥಿಗಳು ‘ಅಲ್ಯುಮ್ನಿ ಮೀಟ್’ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ವಿಭಾಗವು ಹಳೆಯ ವಿದ್ಯಾರ್ಥಿಗಳೊಂದಿಗಿನ ಬಾಂಧವ್ಯವನ್ನು ಅತ್ಯಂತ ಸಕ್ರಿಯವಾಗಿರಿಸಿಕೊಂಡಿದೆ. ಈ ನಿಟ್ಟಿನಲ್ಲಿ ರಚನಾತ್ಮಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಲೇ ಬಂದಿದೆ. ೨೦೦೮ರಿಂದ ೨೦೨೫ರವರೆಗಿನ ಎಲ್ಲಾ ವಿದ್ಯಾರ್ಥಿಗಳನ್ನು ಒಂದೇ ವೇದಿಕೆಯಲ್ಲಿ ಒಟ್ಟಾಗಿ ಸೇರಿಸುವ ಸೃಜನಾತ್ಮಕ ಕಾರ್ಯಕ್ರಮಕ್ಕೆ ಎಸ್.ಡಿ.ಎಂ ಅಂಗಳ ಸಾಕ್ಷಿಯಾಗಲಿದೆ.

ಉಜಿರೆಯ ಎಸ್.ಡಿ.ಎಂ ಕಾಲೇಜಿನ ಸಮ್ಯಕ್‌ದರ್ಶನ ಸಭಾಂಗಣದಲ್ಲಿ ಈ ಕಾರ್ಯಕ್ರಮ ಆಯೋಜಿತವಾಗಲಿದೆ. ‘ಅಲ್ಯುಮ್ನಿ ಮೀಟ್’ ಕಾರ್ಯಕ್ರಮಕ್ಕೆ ೨೦೦ಕ್ಕೂ ಅಧಿಕ ಹಿರಿಯ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ ಎಂದು ವಿಭಾಗದ ಪ್ರಕಟಣೆ ತಿಳಿಸಿದೆ.