ಎಸ್‌ಡಿಎಂ ನ್ಯಾಚುರೋಪತಿ, ಯೋಗ ವಿಜ್ಞಾನ ಕಾಲೇಜು ರಾಷ್ಟ್ರಮಟ್ಟಕ್ಕೆ ಆಯ್ಕೆ

| Published : Oct 30 2025, 02:45 AM IST

ಎಸ್‌ಡಿಎಂ ನ್ಯಾಚುರೋಪತಿ, ಯೋಗ ವಿಜ್ಞಾನ ಕಾಲೇಜು ರಾಷ್ಟ್ರಮಟ್ಟಕ್ಕೆ ಆಯ್ಕೆ
Share this Article
  • FB
  • TW
  • Linkdin
  • Email

ಸಾರಾಂಶ

ಉಜಿರೆಯ ಎಸ್‌.ಡಿ‌.ಎಂ. ನ್ಯಾಚುರೋಪತಿ ಕಾಲೇಜು ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಸಮಗ್ರ ಪ್ರಶಸ್ತಿ ಪಡೆದು ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದೆ.

ಬೆಳ್ತಂಗಡಿ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಹಾಗೂ ಯೋಗ ವಿಜ್ಞಾನಗಳ ಮಹಾವಿದ್ಯಾಲಯ ಮತ್ತು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಆಶ್ರಯದಲ್ಲಿ ‘ಏಕ ವಲಯ ರಾಜ್ಯಮಟ್ಟದ ಯೋಗಾಸನ ಸ್ಪರ್ಧೆ ಮತ್ತು ಆಯ್ಕೆ ಪ್ರಕ್ರಿಯೆ 2025’ ಉಜಿರೆಯ ಕೀರ್ತಿಶೇಷ ಮಾತೃಶ್ರೀ ಡಿ. ರತ್ನಮ್ಮ ಹೆಗ್ಗಡೆ ಸಭಾಂಗಣದಲ್ಲಿ ನಡೆಯಿತು.

ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಎಸ್‌.ಡಿ‌.ಎಂ. ಕಾಲೇಜಿನ ಪ್ರಾಚಾರ್ಯ ಡಾ. ವಿಶ್ವನಾಥ ಹಾಗೂ ಅಧ್ಯಕ್ಷರಾಗಿ ನ್ಯಾಚುರೋಪತಿ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಪ್ರಶಾಂತ್ ಶೆಟ್ಟಿ ಉಪಸ್ಥಿತರಿದ್ದರು.ಯೋಗ ವಿಭಾಗದ ಡೀನ್ ಹಾಗೂ ಶಾಂತಿವನ ಮುಖ್ಯ ವೈದ್ಯಾಧಿಕಾರಿ ಡಾ. ಶಿವಪ್ರಸಾದ್ ಶೆಟ್ಟಿ ಸ್ವಾಗತಿಸಿದರು. ದೈಹಿಕ ಶಿಕ್ಷಣ ನಿರ್ದೇಶಕ ಧರ್ಮೇಂದ್ರ ವಂದಿಸಿದರು. ಮೈಸೂರಿನಿಂದ ಆಗಮಿಸಿದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ವೀಕ್ಷಕ ಮಹೇಂದ್ರ ಹಾಜರಿದ್ದರು.ಎಸ್‌.ಡಿ‌.ಎಂ. ನ್ಯಾಚುರೋಪತಿ ಕಾಲೇಜು ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಸಮಗ್ರ ಪ್ರಶಸ್ತಿ ಪಡೆದು ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದೆ. ಪುರುಷ ಮತ್ತು ಮಹಿಳಾ ವಿಭಾಗಗಳಲ್ಲಿ ನಡೆದ ಈ ವಿಶೇಷ ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ 16 ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿದರು.