ಸಾರಾಂಶ
ಕುತ್ಪಾಡಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಮಹಾವಿದ್ಯಾಲಯ ವತಿಯಿಂದ ಕೊಡವೂರಿನ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರ ‘ಪ್ರವರ್ತನ’ ಇದರ ಸಮಾರೋಪ ಸಮಾರಂಭ ನಡೆಯಿತು.
ಕನ್ನಡಪ್ರಭ ವಾರ್ತೆ ಉಡುಪಿಕುತ್ಪಾಡಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಮಹಾವಿದ್ಯಾಲಯ ವತಿಯಿಂದ ಕೊಡವೂರಿನ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರ ‘ಪ್ರವರ್ತನ’ ಇದರ ಸಮಾರೋಪ ಸಮಾರಂಭ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಶೈಕ್ಷಣಿಕ ವಿಭಾಗದ ಡೀನ್ ಡಾ. ಶ್ರೀಲತಾ ಕಾಮತ್, ಶಿಬಿರಾರ್ಥಿಗಳಲ್ಲಿ ಹಲವಾರು ಪ್ರತಿಭೆಗಳನ್ನು ಹುಟ್ಟು ಹಾಕುವಲ್ಲಿ ಶಿಬಿರವು ಬಹು ಮುಖ್ಯ ಪಾತ್ರ ವಹಿಸುತ್ತದೆ ಎಂದು ಹೇಳಿದರು.ಅತಿಥಿಗಳಾದ ಶ್ರೀ ಶಂಕರ ನಾರಾಯಣ ಶಿಕ್ಷಣ ಪ್ರತಿಷ್ಠಾನ ಅಧ್ಯಕ್ಷ ರಾಘವೇಂದ್ರ ಭಟ್, ಶಿಬಿರಕ್ಕೆ ಆಯುರ್ವೇದ ಕಲಿಯುತ್ತಿರುವ ಮಕ್ಕಳು ಈ ಶಾಲೆಗೆ ಬಂದು, ಊರಿನ ಜನರಿಗೆ ಆಯುರ್ವೇದದ ಮಹತ್ವ ತಿಳಿಸಿದ್ದಕ್ಕೆ ಸಂತೋಷ ವ್ಯಕ್ತಪಡಿಸಿದರು.ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಶಾಲಾ ಅಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿಯ ಅಧ್ಯಕ್ಷ ರಾಧಾಕೃಷ್ಣ ಪೈ ಹಾಗೂ ಶಾಲೆಯ ಮುಖ್ಯ ಶಿಕ್ಷಕಿ ಪುಷ್ಪಾವತಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು. ಆಸ್ಪತ್ರೆಯ ಸಮುದಾಯ ಸೇವಾ ಘಟಕದ ಮುಖ್ಯಸ್ಥೆ ಡಾ. ವಿದ್ಯಾಲಕ್ಷ್ಮೀ ಕೆ. ಉಪಸ್ಥಿತರಿದ್ದರು.ರಾಷ್ಟ್ರೀಯ ಸೇವಾ ಯೋಜನಾ ಅಧಿಕಾರಿ ಡಾ. ಶ್ರೀನಿಧಿ ಧನ್ಯ ಬಿ.ಎಸ್. ಅವರು ಏಳು ದಿನಗಳ ಶಿಬಿರದಲ್ಲಿ ಸಾರ್ವಜನಿಕ ಜಾಗೃತಿ, ಸ್ವಚ್ಛತಾ ಕಾರ್ಯಕ್ರಮ, ಗೋವಿಗೆ ಮೇವು, ಉಚಿತ ಆರೋಗ್ಯ ತಪಾಸಣೆ, ಸಾಂಸ್ಕೃತಿಕ ಚಟುವಟಿಕೆಗಳು, ಅತಿಥಿ ಉಪನ್ಯಾಸಗಳು ಮುಂತಾದ ಕಾರ್ಯಕ್ರಮಗಳ ವರದಿ ನೀಡಿ ವಂದಿಸಿದರು. ಸಹಯೋಜನಾಧಿಕಾರಿಗಳಾದ ಡಾ. ಯೋಗೀಶ ಆಚಾರ್ಯ, ಡಾ. ಮಹಾಲಕ್ಷ್ಮೀ. ಎಂ.ಎಸ್., ಡಾ.ಶ್ರೇಯಶ್ರೀ ಸುವರ್ಣ, ಡಾ. ಶಬರಿನಾಥ ಹಾಗೂ ಶಿಬಿರಾರ್ಥಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಶಿಬಿರಾರ್ಥಿ ಸ್ನೇಹಾ ಕಾರ್ಯಕ್ರಮ ನಿರೂಪಿಸಿದರು. ಶಿಬಿರಾರ್ಥಿ ಭವ್ಯಾ ಸ್ವಾಗತಿಸಿದರು.