ಕನ್ನಡಪ್ರಭ ವಾರ್ತೆ ನಾಪೋಕ್ಲು

ಜಿಲ್ಲೆಯ ಉತ್ತಮ ಎಸ್ಡಿಎಂಸಿ ಆಯ್ಕೆಗೆ ಸಂಬಂಧಿಸಿದಂತೆ ಪೆರಾಜೆ ಕುಂದಲ್ಪಾಡಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಎಸ್ ಡಿಎಂಸಿ ಎಕ್ಸ್ ಪೋಷರ್ ತಂಡ ಭೇಟಿ ನೀಡಿತು.

ತಂಡದಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆ ದಬ್ಬಡ್ಕ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಚೆಂಬು ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕುದುರೆಪಾಯ ಗಳ ಮುಖ್ಯ ಶಿಕ್ಷಕರು, ಎಸ್ ಡಿ ಎಂ ಸಿ ಅಧ್ಯಕ್ಷರು, ಸದಸ್ಯರು, ಇದ್ದರು. ಈ ಸಂದರ್ಭ ಶಾಲಾ ಮುಖ್ಯ ಶಿಕ್ಷಕ ಕುಮಾರ್ ಎನ್, ಎಸ್, ಎಸ್ಡಿಎಂಸಿ ಅಧ್ಯಕ್ಷ ಯತೀಶ್ ಸಿ ಎಸ್ ಹಾಗೂ ಎಸ್ ಡಿ ಎಂ ಸಿ ಸದಸ್ಯರು ಪಾಲ್ಗೊಂಡಿದ್ದರು.