ಸಾರಾಂಶ
ಶಾಲೆಗಳಲ್ಲಿ ಬಿಸಿಯೂಟ ತಯಾರಕಾ ಸಿಬ್ಬಂದಿಗಳು ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ತಮ್ಮ ಕೆಲಸವನ್ನು ಸ್ಥಗಿತಗೊಳಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಎಸ್.ಡಿ.ಎಂ.ಸಿ. ಅಧ್ಯಕ್ಷರು ಹಾಗೂ ಸದಸ್ಯರು ಸೇರಿ ಬಿಸಿಯೂಟ ತಯಾರಿಸಿ ವಿದ್ಯಾರ್ಥಿಗಳಿಗೆ ನೀಡಿರುವ ಪ್ರಸಂಗ ನಡೆದಿದೆ.
ಕನ್ನಡಪ್ರಭ ವಾರ್ತೆ ಶಿರಾ ಶಾಲೆಗಳಲ್ಲಿ ಬಿಸಿಯೂಟ ತಯಾರಕಾ ಸಿಬ್ಬಂದಿಗಳು ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ತಮ್ಮ ಕೆಲಸವನ್ನು ಸ್ಥಗಿತಗೊಳಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಎಸ್.ಡಿ.ಎಂ.ಸಿ. ಅಧ್ಯಕ್ಷರು ಹಾಗೂ ಸದಸ್ಯರು ಸೇರಿ ಬಿಸಿಯೂಟ ತಯಾರಿಸಿ ವಿದ್ಯಾರ್ಥಿಗಳಿಗೆ ನೀಡಿರುವ ಪ್ರಸಂಗ ನಡೆದಿದೆ. ಈ ಬಗ್ಗೆ ಪತ್ರಿಕೆಗೆ ಮಾಹಿತಿ ನಿಡಿದ ಎಸ್.ಡಿ.ಎಂ.ಸಿ. ಅಧ್ಯಕ್ಷ ನರಸಿಂಹರಾಜು.ಸಿ.ಎನ್ ಅವರು ರಾಜ್ಯಾದ್ಯಂತ ಬಿಸಿಯೂಟ ತಯಾರಿಕಾ ಸಿಬ್ಬಂದಿಗಳು ಬೆಂಗಳೂರಿನಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದು, ಸಿಬ್ಬಂದಿಗಳು ಪ್ರತಿಭಟನೆಯಲ್ಲಿ ಭಾಗವಹಿಸುವುದರಿಂದ ತಾಲೂಕಿನ ಚಿಕ್ಕನಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಶಾಲೆಯ ಹಳೆಯ ವಿದ್ಯಾರ್ಥಿಗಳಾದ ರಂಗನಾಥ್ (ಕಾಮತ್ ಹೋಟೆಲ್), ಸಣ್ಣರಂಗಪ್ಪ, ರಂಗನಾಥ, ರಂಗನಾಥ.ಸಿ.ಡಿ ಎಲ್ಲರೂ ಸೇರಿ ಮಧ್ಯಾಹ್ನದ ಬಿಸಿಯೂಟ ತಯಾರಿಸಿದೆವು ಎಂದು ತಿಳಿಸಿದರು.