ಸಾರಾಂಶ
ಮುಸ್ಲಿಮರಿಗೆ 2ಬಿ ಮೀಸಲಾತಿ ಪುನರ್ ಸ್ಥಾಪಿಸಿ ಮೀಸಲು ಪ್ರಮಾಣ 8ಕ್ಕೇರಿಸಬೇಕು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ನೇತೃತ್ವದಲ್ಲಿ ಸುಮಾರು 500ಕ್ಕೂ ಅಧಿಕ ಮುಸ್ಲಿಂ ಸಮುದಾಯದವರು ಪ್ರತಿಭಟನೆ ನಡೆಸಿದರು.
ಬೆಳಗಾವಿ : ಒಳಮೀಸಲಾತಿ ಜಾತಿಗೊಳಿಸಬೇಕು. ಮುಸ್ಲಿಮರಿಗೆ 2ಬಿ ಮೀಸಲಾತಿ ಪುನರ್ ಸ್ಥಾಪಿಸಿ ಮೀಸಲು ಪ್ರಮಾಣ 8ಕ್ಕೇರಿಸಬೇಕು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ನೇತೃತ್ವದಲ್ಲಿ ಸುಮಾರು 500ಕ್ಕೂ ಅಧಿಕ ಮುಸ್ಲಿಂ ಸಮುದಾಯದವರು ಉಡುಪಿ ಜಿಲ್ಲೆಯಿಂದ ಡಿ.10ರಿಂದ ಚಲೋ ಬೆಳಗಾವಿ-2 ಹೋರಾಟ ನಡೆಸಿ ಮಂಗಳವಾರ ಬೆಳಗಾವಿ ತಲುಪಿ ಸುವರ್ಣ ಗಾರ್ಡನ್ ಬಳಿ ಪ್ರತಿಭಟನೆ ನಡೆಸಿದರು.
ಕಾಂತರಾಜ್ ಆಯೋಗದ ಜಾತಿ ಗಣತಿ ವರದಿ ಅಂಗೀಕರಿಸಿ ಸಾರ್ವಜನಿಕಗೊಳಿಸಬೇಕು. ಸದಶಿವ ಆಯೋಗ ವರದಿ ಆಧರಿಸಿ ಒಳಮೀಸಲಾತಿ ಜಾರಿಗೊಳಿಸಬೇಕು. ಬಜೆಟ್‌ನಲ್ಲಿ ಅಲ್ಪಸಂಖ್ಯಾತರಿಗೆ ₹10 ಸಾವಿರ ಕೋಟಿ ಅನುದಾನ ನೀಡುವ ಭರವಸೆ ಇದುವರೆಗೆ ಈಡೇರಿಲ್ಲ. ಬರುವ ಬಜೆಟ್ ಅಧಿವೇಶನದಲ್ಲಿ ಇದನ್ನು ಈಡೇರಿಸಬೇಕು. ವಕ್ಫ್ ಆಸ್ತಿಗಳನ್ನು ಸಂರಕ್ಷಿಸಬೇಕು.
ಕೇಂದ್ರ ಸರ್ಕಾರ ಜಾರಿಗೊಳಿಸಲು ಹೊರಟಿರುವ ವಕ್ಫ್ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಬೇಕು, ಎಸ್ಸಿ,ಎಸ್ಟಿ ಸಮುದಾಯಗಳಿಗೆ ಮೀಸಲಿಟ್ಟಿರುವ ಎಸ್ಸಿಪಿ, ಟಿಎಸ್ಪಿ ಹಣವನ್ನು ಗ್ಯಾರಂಟಿ ಯೋಜನೆ ಸೇರಿ ಇತರ ಯೋಜನೆಗಳಿಗೆ ಬಳಸಬಾರದು. ಖಾಸಗಿ ವಲಯದ ಉದ್ಯೋಗದಲ್ಲಿ ಮೀಸಲಾತಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.ಈ ಸಂದರ್ಭದಲ್ಲಿ ಎಸ್ಪಿಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್, ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಆರ್.ಭಾಸ್ಕರ್ ಪ್ರಸಾದ್, ರಾಜ್ಯ ಪ್ರಧಾನ ಕಾರ್ಯದರ್ಶಿ ಆಪ್ಸರ್ ಕೊಡ್ಲಿಪೇಟೆ, ರಾಜ್ಯ ಕಾರ್ಯದರ್ಶಿ ಅಂಗಡಿ ಚಂದ್ರು ಸೇರಿದಂತೆ ಇತರರು ಇದ್ದರು.