ಕಾಪು: ಬಿಜೆಪಿ ಸೇರಿದ ಎಸ್ಡಿಪಿಐ ಪುರಸಭಾ ಸದಸ್ಯೆ ಸರಿತಾ

| Published : Aug 29 2024, 12:45 AM IST

ಕಾಪು: ಬಿಜೆಪಿ ಸೇರಿದ ಎಸ್ಡಿಪಿಐ ಪುರಸಭಾ ಸದಸ್ಯೆ ಸರಿತಾ
Share this Article
  • FB
  • TW
  • Linkdin
  • Email

ಸಾರಾಂಶ

ಕಾಪು ಪುರಸಭಾ ಸದಸ್ಯೆ ಸರಿತಾ ಬುಧವಾರ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡರು. ಶಾಸಕರು ಪಕ್ಷದ ಧ್ವಜವನ್ನು ನೀಡಿ ಅವರನ್ನು ಬರಮಾಡಿಕೊಂಡರು.

ಕನ್ನಡಪ್ರಭ ವಾರ್ತೆ ಕಾಪು

ಭಾರತೀಯ ಜನತಾ ಪಕ್ಷ ನೇತೃತ್ವದ ಕೇಂದ್ರ ಸರ್ಕಾರದ ಜನಪರ ಕಾಳಜಿಯ ಅಭಿವೃದ್ಧಿ ಕಾರ್ಯಕ್ರಮಗಳು ಹಾಗೂ ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ಸುರೇಶ್ ಶೆಟ್ಟಿ ಅವರ ಕಾರ್ಯ ವೈಖರಿಯನ್ನು ಮೆಚ್ಚಿ ಎಸ್ಡಿಪಿಐ (ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ) ಬೆಂಬಲಿತ ಕಾಪು ಪುರಸಭಾ ಸದಸ್ಯೆ ಸರಿತಾ ಹಾಗೂ ಅವರ ಪತಿ ಶಿವಾನಂದ್ ಬುಧವಾರ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾದರು.

ಶಾಸಕರು ಮತ್ತು ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ ಅವರು ಪಕ್ಷದ ಧ್ವಜವನ್ನು ನೀಡಿ ಅವರನ್ನು ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ ಬಾಲಾಜಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಮಾಜಿ ಶಾಸಕ ಲಾಲಾಜಿ, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಶ್ರೀಕಾಂತ್ ನಾಯಕ್, ಕೋಶಾಧಿಕಾರಿ ಮನೋಹರ್ ಕಲ್ಮಾಡಿ, ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ರಾವ್, ಶರಣ್ ಕುಮಾರ್ ಮಟ್ಟು, ಜಿಲ್ಲಾ ಬಿಜೆಪಿ ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ, ಕಾಪು ಪುರಸಭೆಯ ಸದಸ್ಯರು, ಪಕ್ಷದ ಹಿರಿಯರು, ಪ್ರಮುಖರು, ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.