ಸಾರಾಂಶ
ಕೈಕಂಬ ಜಂಕ್ಷನ್‌ನಲ್ಲಿ ಎಸ್‌ಡಿಪಿಐ ಧ್ವಜವನ್ನು ಅನ್ವರ್ ಸಾದತ್ ಬಜತ್ತೂರು ಜಿಲ್ಲಾ ಉಪಾಧ್ಯಕ್ಷ ಮೂನಿಶ್ ಅಲಿಯವರಿಗೆ ಹಸ್ತಾಂತರಿಸುವ ಮೂಲಕ ಪಾದಯಾತ್ರೆಗೆ ಚಾಲನೆ ನೀಡಿದರು.
ಕನ್ನಡಪ್ರಭ ವಾರ್ತೆ ಬಂಟ್ವಾಳ
ಬ್ರಹ್ಮರಕೊಟ್ಲು ಟೋಲ್‌ಗೇಟ್ ಅವ್ಯವಸ್ಥೆಯ ವಿರುದ್ಧ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿಯ ವತಿಯಿಂದ ಕೈಕಂಬದಿಂದ ಟೋಲ್ ಗೇಟ್‌ವರೆಗೆ ಬೃಹತ್ ಪಾದಯಾತ್ರೆ ಹಾಗೂ ಪ್ರತಿಭಟನೆಯು ಜಿಲ್ಲಾಧ್ಯದ ಅನ್ವರ್ ಸಾದತ್ ಬಜತ್ತೂರು ನೇತೃತ್ವದಲ್ಲಿ ಶುಕ್ರವಾರ ಸಂಜೆ ನಡೆಯಿತು.ಕೈಕಂಬ ಜಂಕ್ಷನ್‌ನಲ್ಲಿ ಎಸ್‌ಡಿಪಿಐ ಧ್ವಜವನ್ನು ಅನ್ವರ್ ಸಾದತ್ ಬಜತ್ತೂರು ಜಿಲ್ಲಾ ಉಪಾಧ್ಯಕ್ಷ ಮೂನಿಶ್ ಅಲಿಯವರಿಗೆ ಹಸ್ತಾಂತರಿಸುವ ಮೂಲಕ ಪಾದಯಾತ್ರೆಗೆ ಚಾಲನೆ ನೀಡಿದರು. ಪ್ರತಿಭಟನಾ ಸಭೆಯಲ್ಲಿ ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಬಜತ್ತೂರು, ಎಸ್‌ಡಿಪಿಐ ಮಂಗಳೂರು ನಗರ ಜಿಲ್ಲಾಧ್ಯಕ್ಷರಾದ ಜಲೀಲ್ ಕೆ., ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾ ಉಪಾಧ್ಯಕ್ಷ ಮೂನಿಷ್ ಅಲಿ, ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿ ನವಾಝ್ ಕಟ್ಟೆ ಮಾತನಾಡಿದರು.ಈ ಸಂದರ್ಭದಲ್ಲಿ ಪಕ್ಷದ ಪ್ರಮುಖರಾದ ಶಾಹಿದಾ ತಸ್ನೀಂ ಸಿದ್ದೀಕ್ ಪುತ್ತೂರು, ಸಿದ್ದೀಕ್ ಅಲೆಕ್ಕಾಡಿ, ಅಶ್ರಫ್ ತಲಪಾಡಿ, ಶಾಕಿರ್ ಅಳಕೆಮಜಲು, ನೌರೀನ್ ಆಲಂಪಾಡಿ, ಝಾಹಿದಾ ಸಾಗರ್, ರಹೀಮ್ ಎಂಜಿನಿಯರ್, ಮೂಸಬ್ಬ ತುಂಬೆ, ಝಹನ ಅಕ್ಕರಂಗಡಿ, ಶಮೀರ್ ಪರ್ಲಿಯಾ , ಇಬ್ರಾಹಿಂ ಬಾಂಬಿಲ, ಅಬ್ದುಲ್ ಅಝೀಝ್, ಇಸ್ಮಾಯಿಲ್, ಅಕ್ಬರ್ ಬೆಳ್ತಂಗಡಿ, ಅಶ್ರಫ್ ಬಾವು, ಅಕ್ಬರ್ ಅಲಿ ಪೊನ್ನೋಡಿ, ರಫೀಕ್ ಎಂ.ಎಸ್., ಶರೀಫ್ ವಳವೂರು, ಇರ್ಫಾನ್ ತುಂಬೆ ಮತ್ತಿತರರು ಉಪಸ್ಥಿತರಿದ್ದರು.ಪ್ರತಿಭಟನೆಯ ಬೇಡಿಕೆಯನ್ನು ಮನವಿಯ ರೂಪದಲ್ಲಿ ಸಂಬಂಧಪಟ್ಟ ಅಧಿಕಾರಿಗೆ ನೀಡಲಾಯಿತು. ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿ ಶಾಕಿರ್ ಅಳಕೆಮಜಲು ಕಾರ್ಯಕ್ರಮವನ್ನು ನಿರೂಪಿಸಿ, ವಂದಿಸಿದರು