ಸಾರಾಂಶ
ತರಳಬಾಳು ಪರಂಪರೆಯ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿಯವರ 32ನೇ ಶ್ರದ್ಧಾಂಜಲಿ ಸಮಾರಂಭವು ಸೆ.20 ರಿಂದ 24ರವರೆಗೆ ಸಿರಿಗೆರೆಯ ಬಿ.ಎಲ್.ಆರ್. ಪದವಿಪೂರ್ವ ಕಾಲೇಜು ಮೈದಾನದಲ್ಲಿ ನಡೆಸಲಾಗುವುದು. ಅದಕ್ಕಾಗಿ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ನೇತೃತ್ವದಲ್ಲಿ ಭರದ ಸಿದ್ಧತೆಗಳು ನಡೆಯುತ್ತಿವೆ.
ಕನ್ನಡಪ್ರಭ ವಾರ್ತೆ ಸಿರಿಗೆರೆ
ತರಳಬಾಳು ಪರಂಪರೆಯ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿಯವರ 32ನೇ ಶ್ರದ್ಧಾಂಜಲಿ ಸಮಾರಂಭವು ಸೆ.20 ರಿಂದ 24ರವರೆಗೆ ಸಿರಿಗೆರೆಯ ಬಿ.ಎಲ್.ಆರ್. ಪದವಿಪೂರ್ವ ಕಾಲೇಜು ಮೈದಾನದಲ್ಲಿ ನಡೆಸಲಾಗುವುದು. ಅದಕ್ಕಾಗಿ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ನೇತೃತ್ವದಲ್ಲಿ ಭರದ ಸಿದ್ಧತೆಗಳು ನಡೆಯುತ್ತಿವೆ.ಈ ಬಾರಿಯೂ ಐದು ದಿನಗಳ ಸಭಾ ಕಾರ್ಯಕ್ರಮಗಳು ನಡೆಯಲಿವೆ. ಸೆ. 20 ಶುಕ್ರವಾರ ಮಖ್ಯ ಅತಿಥಿಗಳಾಗಿ ದಾವಣಗೆರೆ ಲೋಕಸಭಾ ಸದಸ್ಯೆ ಡಾ. ಪ್ರಭಾ ಮಲ್ಲಿಕಾರ್ಜುನ್, ಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ, ವಿಧಾನಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ ಹಾಗೂ ಅತಿಥಿಗಳಾಗಿ ಚಿತ್ರದುರ್ಗ ಜಿಲ್ಲಾಧಿಕಾರಿ ಟಿ. ವೆಂಕಟೇಶ್, ಶಿವಮೊಗ್ಗ ಹಾಲು ಒಕ್ಕೂಟ ಅಧ್ಯಕ್ಷ ವಿದ್ಯಾಧರ್, ಹಾಸ್ಯ ಸಾಹಿತಿ ಎಂ.ಎಸ್. ನರಸಿಂಹಮೂರ್ತಿ ಭಾಗವಹಿಸುವರು. ವಚನ ಸಾಹಿತ್ಯ ಪ್ರಚಾರ ಮತ್ತು ಶರಣರ ಕ್ಷೇತ್ರ ಸಂಶೋಧನೆಗೆ ಶಿವಕುಮಾರ ಶ್ರೀ ಕೊಡುಗೆ ಕುರಿತು ಉಪನ್ಯಾಸ ನೀಡುವರು. ಸೆ.21ರಂದು ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ, ಶಾಸಕ ಎಚ್.ಡಿ. ತಮ್ಮಯ್ಯ, ಮಾಜಿ ಸಚಿವ ಎಚ್. ಆಂಜನೇಯ ಅತಿಥಿಗಳಾಗಿರುತ್ತಾರೆ. ದಾವಣಗೆರೆಯ ಜಿಲ್ಲಾಧಿಕಾರಿ ಡಿ.ಎಂ. ಗಂಗಾಧರಸ್ವಾಮಿ, ಚಿತ್ರದುರ್ಗ ಜಿಲ್ಲಾ ರಕ್ಷಣಾಧಿಕಾರಿ ರಂಜಿತ್ ಕುಮಾರ್ ಮೀನಾ, ಮಾಜಿ ಶಾಸಕ ಬೆಳ್ಳಿಪ್ರಕಾಶ್ ಆಗಮಿಸಲಿದ್ದು, ಸುಮತಿ ಜಯಪ್ಪ ಸಂಗೀತ ಮತ್ತು ರಂಗಭೂಮಿಗೆ ಶ್ರೀಗಳ ಕೊಡುಗೆ ಕುರಿತು ಉಪನ್ಯಾಸ ನೀಡಲಿದ್ದಾರೆ. ಸೆ. 22ರ ಭಾನುವಾರ ಹೊಳಲ್ಕೆರೆ ಶಾಸಕ ಡಾ.ಎಂ. ಚಂದ್ರಪ್ಪ, ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜ್, ಜಗಳೂರು ಶಾಸಕ ಬಿ. ದೇವೇಂದ್ರಪ್ಪ, ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯ ಅಧ್ಯಕ್ಷೆ ಶುಭ ಧನಂಜಯ್, ರಂಗಕರ್ಮಿ ಎಸ್.ಎನ್. ಸೇತುರಾಂ, ಕರ್ನಾಟಕ ಜನಪದ ಅಕಾಡೆಮಿ ಅಧ್ಯಕ್ಷ ಗೊಲ್ಲಹಳ್ಳಿ ಶಿವಪ್ರಸಾದ್ ಅತಿಥಿಗಳಾಗಿರುವರು. ದಾವಣಗೆರೆ ಬಾಪೂಜಿ ಇಂಜಿನಿಯರಿಂಗ್ ಕಾಲೇಜು ನಿರ್ದೇಶಕ ವೈ. ವೃಷಬೇಂದ್ರಪ್ಪ ದೂರದೃಷ್ಠಿಯ ದಾರ್ಶನಿಕ ಶಿವಕುಮಾರ ಶ್ರೀ ಕುರಿತು ಮಾತನಾಡಲಿರುವರು.ಸೆ. 23ರ ಸೋಮವಾರದ ಮುಖ್ಯ ಅತಿಥಿಗಳಾಗಿ ಗಣಿ, ಭೂ ವಿಜ್ಞಾನ ಮತ್ತು ತೋಟಗಾರಿಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ಹೊನ್ನಾಳಿ ಶಾಸಕ ಡಿ.ಜಿ. ಶಾಂತನಗೌಡ, ಅಂತರಾಷ್ಟ್ರೀಯ ಕೃಷಿ ವಿಜ್ಞಾನಿ ಪ್ರಶಸ್ತಿ ಪುರಸ್ಕೃತ ಡಾ.ಎಸ್.ಎಲ್. ಕೃಷ್ಣಮೂರ್ತಿ, ಕರ್ನಾಟಕ ನಾಟಕ ಅಕಾಡೆಮಿ ಅಧ್ಯಕ್ಷರಾದ ನಾಗರಾಜ ಮೂರ್ತಿ, ಕುಲಪತಿಗಳಾದ ಸೂರ್ಯಪ್ರಸಾದ್ ಆತಿಥಿಗಳಾಗಿರುವರು. ನಿವೃತ್ತ ಪ್ರಾಚಾರ್ಯರಾದ ಡಾ. ನಾ. ಲೋಕೇಶ್ ಒಡೆಯರ್ ಶಿಕ್ಷಣ ಮತ್ತು ಸಾಹಿತ್ಯ ಕ್ಷೇತ್ರಕ್ಕೆ ಶ್ರೀಗಳ ಕೊಡುಗೆ ಕುರಿತು ಮಾತನಾಡಲಿರುವರು.ಸೆ.24ರ ಮಂಗಳವಾರ ಬೆಳಿಗ್ಗೆ 11 ಗಂಟೆಗೆ ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ ಶ್ರದ್ಧಾಂಜಲಿ ಕಾರ್ಯಕ್ರಮದ ಸಮಾರೋಪ ನಡೆಯಲಿದೆ. ಸುಪ್ರೀಂ ಕೋಟ್ ನಿವೃತ್ತ ನ್ಯಾಯಾಧೀಶ ಶಿವರಾಜ್.ವಿ. ಪಾಟೀಲ್ ಅಧ್ಯಕ್ಷತೆ ವಹಿಸಲಿದ್ದಾರೆ. ಸಾಧು ಸಧರ್ಮ ವೀರಶೈವ ಸಂಘದ ಅಧ್ಯಕ್ಷ ಎಚ್.ಆರ್. ಬಸವರಾಜಪ್ಪ ಗುರುವಂದನೆ ನಡೆಸಿಕೊಡಲಿದ್ದಾರೆ.ಮುಖ್ಯ ಅತಿಥಿಗಳಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಗೃಹ ಸಚಿವ ಡಾ.ಜಿ. ಪರಮೇಶ್ವರ್, ಸಚಿವ ಎಂ.ಬಿ. ಪಾಟೀಲ್, ಈಶ್ವರ್ ಬಿ. ಖಂಡ್ರೆ, ಮಾಜಿ ಸಂಸದ ಜಿ.ಎಂ. ಸಿದ್ದೇಶ್ವರ, ವಿಶ್ರಾಂತ ಪೊಲೀಸ್ ವರಿಷ್ಠಾಧಿಕಾರಿ ಶಂಕರ ಎಂ. ಬಿದರಿ ಆಗಮಿಸುವರು. ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ರಾಜೇಶ್ ಅಮ್ಮಿನಭಾವಿ, ಶಾಸಕ ಯು.ಬಿ. ಬಣಕಾರ ಅತಿಥಿಗಳಾಗಿರುವರು.
*ಕೃತಿಗಳ ಲೋಕಾರ್ಪಣೆ
ತರಳಬಾಳು ಪ್ರಕಾಶನದ ಸಾಹಿತ್ಯಸಿರಿ ಮಾಲಿಕೆಯಲ್ಲಿ ಪ್ರಕಟಿಸಲಾಗಿರುವ ಆತ್ಮನಿವೇದನೆ, ಸಂಕಲ್ಪ, ಹಾಗೂ ಹಿಂದಿಯ ಅನುವಾದಿತ ಕೃತಿಗಳಾದ ಅಕ್ಕಮಹಾದೇವಿ ಕೆ. ವಚನ್ ಹಾಗೂ ಅಲ್ಲಮ ಪ್ರಭು ಕೆ. ವಚನ್ ಕೃತಿಗಳು ಲೋಕಾರ್ಪಣೆಗೊಳ್ಳಲಿವೆ.* ದಾಸೋಹಕ್ಕೆ ಭಕ್ತಿ ಸಮರ್ಪಣೆಪ್ರತಿವರ್ಷದಂತೆ ಈ ವರ್ಷವೂ ಸಹ ಶ್ರೀಗಳ ಶ್ರದ್ಧಾಂಜಲಿಗೆ ಚನ್ನಗಿರಿಯ ತುಮ್ಕೋಸ್ ಅವರಿಂದ ಲಾಡು ಪ್ರಸಾದ, ನಾಗತಿ ಬೆಳಗಲು, ಭದ್ರಾವತಿ, ಶಿವಮೊಗ್ಗ, ಹರಿಹರ, ಹೊನ್ನಾಳಿ ಮತ್ತು ನ್ಯಾಮತಿ ತಾಲೂಕು ಶಿಷ್ಯ ಮಂಡಳಿ, ಯಲವಟ್ಟಿ, ಎಂ. ಹನುಮನಹಳ್ಳಿ ಗ್ರಾಮಸ್ಥರು, ಹಾಗೂ ಸಿರಿಗೆರೆ ಮತ್ತು ಸುತ್ತಮುತ್ತಲ ಗ್ರಾಮಾಂತರ ಶಿಷ್ಯ ಮಂಡಳಿಯವರು ಅಕ್ಕಿ, ಬೇಳೆ, ಬೆಲ್ಲ ಮುಂತಾದ ದಾಸೋಹ ಸಾಮಗ್ರಿಗಳನ್ನು ಸಮರ್ಪಿಸಿದ್ದಾರೆ. ಸಿರಿಗೆರೆ ಮತ್ತು ಸುತ್ತಮುತ್ತಲಿನ ಗ್ರಾಮಸ್ಥರ ಜತೆಗೆ ಹರಪನಹಳ್ಳಿ ತಾಲೂಕಿನ ಶಿಷ್ಯ ಮಂಡಳಿಯವರು ದಾಸೋಹ ಸೇವಕರ್ತರಾಗಿ ಸೇವೆ ಸಲ್ಲಿಸಲಿದ್ದಾರೆ. ಸಮಾಜಮುಖಿ ಕಾರ್ಯಕ್ರಮಗಳು.ಸೆ.22ರ ಭಾನುವಾರ ಸಿರಿಗೆರೆಯ ಶ್ರೀ ತರಳಬಾಳು ಜಗದ್ಗುರು ಪಶು ಚಿಕಿತ್ಸಾಲಯದಲ್ಲಿ ಉಚಿತ ಪಶು ಚಿಕಿತ್ಸೆ ಜರುಗಲಿದ್ದು, 23ರ ಸೋಮವಾರ ಬೆಳಗ್ಗೆ ಐಕ್ಯಮಂಟಪದ ಆವರಣದಲ್ಲಿ ಸಾಮೂಹಿಕ ಪ್ರಾರ್ಥನೆ ಮತ್ತು ಶಿವಮಂತ್ರ ಲೇಖನ, 10 ಗಂಟೆಗೆ ರಕ್ತದಾನ ಮತ್ತು ಉಚಿತ ಕಣ್ಣಿನ ತಪಾಸಣೆ ಹಾಗೂ 11 ಗಂಟೆಗೆ ಶ್ರೀ ತರಳಬಾಳು ಜಗದ್ಗುರು ವಿದ್ಯಾಸಂಸ್ಥೆಯ ಹಿರಿಯ ವಿದ್ಯಾರ್ಥಿಗಳ ಹಾಗೂ ನಿವೃತ್ತ ನೌಕರರ ಸಮಾವೇಶ ಜರಗಲಿದೆ. ಸಂಜೆ 4 ಗಂಟೆಗೆ ಶ್ರೀ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿಯವರ ಭಾವಚಿತ್ರದ ಮೆರವಣಿಗೆಯು ಸಿರಿಗೆರೆಯ ಪ್ರಮುಖ ಬೀದಿಗಳಲ್ಲಿ ಜನಪದ ಕಲಾತಂಡಗಳೊಂದಿಗೆ ಅದ್ದೂರಿಯಾಗಿ ಜರುಗಲಿದೆ. ಸೆ.24ರ ಮಂಗಳವಾರ ಐಕ್ಯಮಂಟಪದಲ್ಲಿ ಶಿವಕುಮಾರ ಶ್ರೀಗಳ ಕತೃ ಗದ್ದುಗೆ ವಿಶೇಷ ಪೂಜೆ ಹಾಗೂ ಮಹಾರುದ್ರಾಭಿಷೇಕ, ಶ್ರೀಗಳಿಂದ ಪುಷ್ಪ ನಮನ, ಶಿವ ಧ್ವಜಾರೋಹಣ ಮುಂತಾದ ಕಾರ್ಯಕ್ರಮಗಳು ಜರುಗಲಿವೆ.