ದ್ವಿತೀಯ ಪಿ.ಯು.ಸಿ. ಮರುಮೌಲ್ಯಮಾಪನ: ಕ್ರಿಯೇಟಿವ್ ಕಾಲೇಜಿನ ಸಾನ್ವಿ ರಾವ್ ರಾಜ್ಯಕ್ಕೆ ಪ್ರಥಮ

| Published : Apr 27 2024, 01:29 AM IST / Updated: Apr 27 2024, 09:00 AM IST

PUC EXAM
ದ್ವಿತೀಯ ಪಿ.ಯು.ಸಿ. ಮರುಮೌಲ್ಯಮಾಪನ: ಕ್ರಿಯೇಟಿವ್ ಕಾಲೇಜಿನ ಸಾನ್ವಿ ರಾವ್ ರಾಜ್ಯಕ್ಕೆ ಪ್ರಥಮ
Share this Article
  • FB
  • TW
  • Linkdin
  • Email

ಸಾರಾಂಶ

ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ಒಟ್ಟು 12 ವಿದ್ಯಾರ್ಥಿಗಳು ರಾಜ್ಯದ ಮೊದಲ 10 ರ‍್ಯಾಂಕ್ ಪಟ್ಟಿಯಲ್ಲಿ ಸ್ಥಾನ ಗಿಟ್ಟಿಸಿರುವುದು ಹೆಮ್ಮೆಯ ವಿಷಯವಾಗಿದ್ದು, ವಿದ್ಯಾರ್ಥಿಗಳ ಈ ವಿಶೇಷ ಸಾಧನೆಯನ್ನು ಪ್ರಾಂಶುಪಾಲರು, ಆಡಳಿತ ಮಂಡಳಿ, ಉಪನ್ಯಾಸಕ ವರ್ಗದವರು, ಬೋಧಕೇತರ ವರ್ಗದವರು ಶ್ಲಾಘಿಸಿ, ಅಭಿನಂದಿಸಿದ್ದಾರೆ.

  ಕಾರ್ಕಳ :  ಶೈಕ್ಷಣಿಕ ಸಾಧನೆಯಲ್ಲಿ ತನ್ನದೇ ಛಾಪು ಮೂಡಿಸುತ್ತಿರುವ ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯು ರಾಜ್ಯಮಟ್ಟದಲ್ಲಿ ಗಮನಾರ್ಹ ಸಾಧನೆಗೈದಿದ್ದು, ವಾಣಿಜ್ಯ ವಿಭಾಗದ ಸಾನ್ವಿ ರಾವ್ ರಾಜ್ಯಕ್ಕೆ ಪ್ರಥಮ ರ‍್ಯಾಂಕ್ ಪಡೆದು ವಿಶೇಷ ಸಾಧನೆಗೈದಿದ್ದಾರೆ.

ಸಂಸ್ಕೃತ ಮತ್ತು ಇ.ಬಿ.ಎ.ಸಿ.ಯಲ್ಲಿ ತಲಾ 100ಕ್ಕೆ 100 ಅಂಕಗಳನ್ನು ಪಡೆದುಕೊಂಡಿದ್ದ ಸಾನ್ವಿ ರಾವ್, ಆಂಗ್ಲ ಭಾಷೆಯಲ್ಲಿ 95 ಅಂಕಗಳನ್ನು ಗಳಿಸಿದ್ದರು. ಇದೀಗ ಮರುಮೌಲ್ಯಮಾಪನ ಫಲಿತಾಂಶದಲ್ಲಿ 3 ಅಂಕಗಳನ್ನು ಹೆಚ್ಚುವರಿಯಾಗಿ ಗಳಿಸಿಕೊಂಡು 598 ಅಂಕಗಳೊಂದಿಗೆ ರಾಜ್ಯಕ್ಕೆ ಪ್ರಥಮ ಸ್ಥಾನಿಯಾಗಿ ಹೊರಹೊಮ್ಮಿದ್ದಾರೆ. ಇವರು ಉತ್ತರಕನ್ನಡದ ಹೊನ್ನಾವರದ ಜಗದೀಶ್ ರಾವ್ ಬಿ.ಎಸ್. ಮತ್ತು ವಿನುತಾ ಭಟ್ ದಂಪತಿ ಸುಪುತ್ರಿ.ವಾಣಿಜ್ಯ ವಿಭಾಗದ ಭಕ್ತಿ ಕಾಮತ್, 596 ಅಂಕಗಳೊಂದಿಗೆ ರಾಜ್ಯಕ್ಕೆ ತೃತೀಯ ರ‍್ಯಾಂಕ್, ವಿಜ್ಞಾನ ವಿಭಾಗದ ಸಾಗರ್ ಎಸ್.ಟಿ. 591 ಅಂಕಗಳೊಂದಿಗೆ ರಾಜ್ಯಕ್ಕೆ 8ನೇ ರ‍್ಯಾಂಕ್ ಹಾಗೆಯೇ ವಾಣಿಜ್ಯ ವಿಭಾಗದ ವಿನಯ್ ಪ್ರಶಾಂತ್ 589 ಅಂಕಗಳನ್ನು ಪಡೆಯುವ ಮೂಲಕ ರಾಜ್ಯಕ್ಕೆ 10ನೇ ರ‍್ಯಾಂಕ್ ಗಳಿಸಿರುತ್ತಾರೆ.