ಬೆಳಗಾವಿ ಸರ್ಕಾರಿ ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗೆ ದ್ವಿತೀಯ ಬಹುಮಾನ

| Published : Apr 05 2025, 12:48 AM IST

ಬೆಳಗಾವಿ ಸರ್ಕಾರಿ ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗೆ ದ್ವಿತೀಯ ಬಹುಮಾನ
Share this Article
  • FB
  • TW
  • Linkdin
  • Email

ಸಾರಾಂಶ

ಹಿರಾಶುಗರ್‌ ಇನ್‌ಸ್ಟಿಟ್ಯೂಟ್‌ ಆಫ್ ಟೆಕ್ನಾಲಾಜಿಯಲ್ಲಿ ಜರುಗಿದ Technovision-25 ಡಿಪ್ಲೋಮಾ ವಿದ್ಯಾರ್ಥಿಗಳಿಗೆ ಈಚೆಗೆ ನಡೆದ ರಾಜ್ಯಮಟ್ಟದ ತಂತ್ರಜ್ಞಾನ ಮಾದರಿಗಳ ಸ್ಪರ್ಧೆಯನ್ನು ನಡೆಸಲಾಯಿತು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಹಿರಾಶುಗರ್‌ ಇನ್‌ಸ್ಟಿಟ್ಯೂಟ್‌ ಆಫ್ ಟೆಕ್ನಾಲಾಜಿಯಲ್ಲಿ ಜರುಗಿದ Technovision-25 ಡಿಪ್ಲೋಮಾ ವಿದ್ಯಾರ್ಥಿಗಳಿಗೆ ಈಚೆಗೆ ನಡೆದ ರಾಜ್ಯಮಟ್ಟದ ತಂತ್ರಜ್ಞಾನ ಮಾದರಿಗಳ ಸ್ಪರ್ಧೆಯನ್ನು ನಡೆಸಲಾಯಿತು.

ಬೆಳಗಾವಿ ನಗರದ ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯ ಯಾಂತ್ರಿಕ ವಿಭಾಗದ ಅಂತಿಮ ವರ್ಷದ ಡಿಪ್ಲೋಮಾ ವಿದ್ಯಾರ್ಥಿಗಳಾದ ಪ್ರಕಾಶ ರಾಠೋಡ ತಂಡವು ECO FRIENDLY SOLAR PANEL CLEANING BY ROBOT ವಸ್ತು ಪ್ರದರ್ಶನ ಮಾಡಿ ದ್ವಿತೀಯ ಬಹುಮಾನ ಪಡೆದಿರುತ್ತಾರೆ.

ಎಲ್ಲ ವಿದ್ಯಾರ್ಥಿಗಳನ್ನು ಸಂಸ್ಥೆಯ ಪ್ರಾಚಾರ್ಯ ವಾಸುದೇವ ಕೆ.ಅಪ್ಪಾಜಿಗೋಳ ಹಾಗೂ ಯಾಂತ್ರಿಕ ವಿಭಾಗದ ಮುಖ್ಯಸ್ಥರಾದ ಗಂಗಾಧರ ಹುನಗುಂದ ಅಭಿನಂದಿಸಿದ್ದಾರೆ. ಮಾರ್ಗದರ್ಶಕರಾದ ಲಿಂಗರಾಜ ಬಿ.ಶಾಮನೂರ, ಶಿವಲಿಂಗ ಮೂಕನವರ ಅವರನ್ನು ಸಹ ಪ್ರಾಚಾರ್ಯರು ಹಾಗೂ ವಿಭಾಗ ಮುಖ್ಯಸ್ಥರು ಅಭಿನಂದಿಸಿದ್ದಾರೆ.