ಸಾರಾಂಶ
ಮಾಲೂರು: ಪಟ್ಟಣದ 4 ಪರೀಕ್ಷಾ ಕೇಂದ್ರಗಳಲ್ಲಿ ಪ್ರಾರಂಭಗೊಂಡ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ 1795 ವಿದ್ಯಾರ್ಥಿಗಳ ಪೈಕಿ 1709 ವಿದ್ಯಾರ್ಥಿಗಳು ಹಾಜರಾಗಿದ್ದರೆ 86 ವಿದ್ಯಾರ್ಥಿಗಳು ಗೈರಾಗಿದ್ದರು. ಪರೀಕ್ಷೆ ಕೇಂದ್ರದ ಬಳಿ ಒಂದು ಗಂಟೆಗೂ ಹೆಚ್ಚು ಕಾಲ ವಿದ್ಯಾರ್ಥಿಗಳನ್ನು ತಪಾಸಣೆ ಮಾಡಿ ಪರೀಕ್ಷಾ ಕೇಂದ್ರದೊಳಗೆ ಕಳುಹಿಸಲಾಯಿತು. ಇದೇ ಮೊದಲ ಬಾರಿಗೆ ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಯಾವುದೇ ಗೊಂದಲ ಉಂಟಾಗದಂತೆ ಹಾಗೂ ನಕಲು ತಡೆಯಲು ಕೊಠಡಿಗಳಲ್ಲಿ ಸಿಸಿ ಕ್ಯಾಮೆರಾ ವೆಬ್ ಕಾಸ್ಟಿಂಗ್ ಅಳವಡಿಸಲಾಗಿತ್ತು. ಮೊದಲನೇ ದಿನವಾದ ಶನಿವಾರ ಕನ್ನಡ ವಿಷಯದ ಪರೀಕ್ಷೆ ನಡೆಯಿತು. ಪಟ್ಟಣದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ 496 ವಿದ್ಯಾರ್ಥಿಗಳ ಪೈಕಿ 457 ವಿದ್ಯಾರ್ಥಿಗಳು ಹಾಜರಾಗಿ, 39 ವಿದ್ಯಾರ್ಥಿಗಳು ಗೈರಾಗಿದ್ದರು. ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜಿನಲ್ಲಿ 569 ವಿದ್ಯಾರ್ಥಿಗಳ ಪೈಕಿ 550 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರೆ, 19 ವಿದ್ಯಾರ್ಥಿಗಳು ಗೈರಾಗಿದ್ದರು. ಜೆಎಸ್ಸೆಸ್ ಪದವಿ ಪೂರ್ವ ಕಾಲೇಜಿನಲ್ಲಿ 360 ವಿದ್ಯಾರ್ಥಿಗಳ ಪೈಕಿ 19 ವಿದ್ಯಾರ್ಥಿಗಳು ಗೈರಾಗಿದ್ದರು. ಬಿಜಿಎಸ್ ಕಾಲೇಜಿನಲ್ಲಿ 9 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರಾಗಿದ್ದರು. ಪರೀಕ್ಷಾ ಕೇಂದ್ರಗಳ ಸುತ್ತಲೂ 100 ಮೀಟರ್ ನಿಷೇಧಾಜ್ಞೆ ಹೇರಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು.