ಸಾರಾಂಶ
18 ಪರೀಕ್ಷಾ ಕೇಂದ್ರಗಳು । ಪರೀಕ್ಷೆಗೆ ಬರುವ ವಿದ್ಯಾರ್ಥಿಗಳು ಕೆಎಸ್‌ಆರ್‌ಟಿಸಿ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು
ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುಜಿಲ್ಲೆಯಲ್ಲಿ ಮಾ. 1 ರಿಂದ 22 ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ನಡೆಯಲಿದ್ದು, ಈ ಬಾರಿ 8392 ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದಾರೆ.ಈ ಪೈಕಿ 3668 ಬಾಲಕರು, 4724 ಬಾಲಕಿಯರು ಇದ್ದಾರೆ. ವಿಜ್ಞಾನ ವಿಭಾಗದಲ್ಲಿ 3399, ವಾಣಿಜ್ಯ ವಿಭಾಗದಲ್ಲಿ 2816, ಕಲಾ ವಿಭಾಗದಲ್ಲಿ 2247 ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆಯಲಿದ್ದಾರೆ. ಜಿಲ್ಲೆಯಲ್ಲಿ 18 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ.ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ವಿದ್ಯಾರ್ಥಿಗಳಿಗೆ ಕುಡಿಯುವ ನೀರು, ಶೌಚಾಲಯ ವ್ಯವಸ್ಥೆಯನ್ನು ಆಯಾಯ ಕಾಲೇಜಿನವರು ಮಾಡಿಕೊಂಡಿದ್ದಾರೆ. ನಗರ ಮತ್ತು ಪಟ್ಟಣ ಪ್ರದೇಶಗಳು ಸೇರಿದಂತೆ ಪರೀಕ್ಷಾ ಕೇಂದ್ರಗಳಿಗೆ ತೆರಳುವ ವಿದ್ಯಾರ್ಥಿಗಳು ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಪ್ರವೇಶ ಪತ್ರ ತೋರಿಸಿ ಉಚಿತವಾಗಿ ಪ್ರಯಾಣಿಸಬಹುದು. ಪರೀಕ್ಷೆ ಸುವ್ಯವಸ್ಥಿತವಾಗಿ ಶಾಂತಿ ಮತ್ತು ಶಿಸ್ತು ಪಾಲನೆ, ಗೌಪ್ಯತೆ ಕಾಪಾಡುವ ನಿಟ್ಟಿನಲ್ಲಿ ಮಾರ್ಚ್ 1 ರಿಂದ 22 ರವರೆಗೆ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಗೊಳಿಸಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.ಪರೀಕ್ಷಾ ಕೇಂದ್ರಗಳ ಸುತ್ತ ಇರುವ ಜೆರಾಕ್ಸ್ ಅಂಗಡಿಗಳನ್ನು ಪರೀಕ್ಷೆ ನಡೆಯುವ ಸಮಯದಲ್ಲಿ ಕಡ್ಡಾಯವಾಗಿ ಮುಚ್ಚುವುದು. ನಿಬಂಧಿತ ಪ್ರದೇಶ ವ್ಯಾಪ್ತಿಯಲ್ಲಿ ಬರುವ ಶಾಲಾ ಕಾಲೇಜುಗಳಲ್ಲಿ ಮತ್ತು ಇತರೆ ಶೈಕ್ಷಣಿಕ ಸಂಸ್ಥೆಗಳಲ್ಲಿ ಈ ಪರೀಕ್ಷೆ ಹೊರತುಪಡಿಸಿ ಇತರೆ ರೀತಿಯ ಶೈಕ್ಷಣಿಕ ಚಟುವಟಿಕೆಗಳಿಗೆ ಅವಕಾಶವಿರುವುದಿಲ್ಲ. ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾ ವಿದ್ಯಾರ್ಥಿ/ಅಭ್ಯರ್ಥಿಗಳು ಪರೀಕ್ಷಾ ಕಾರ್ಯನಿರತ ಅಧಿಕಾರಿ / ಸಿಬ್ಬಂದಿ ಮೊಬೈಲ್, ಎಲೆಕ್ಟ್ರಾನಿಕ್ ಉಪಕರಣಗಳ ಬಳಕೆ ನಿರ್ಬಂಧಿಸಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾ ವಿದ್ಯಾರ್ಥಿ ಪ್ರವೇಶ ಪತ್ರ ಮತ್ತು ಪರೀಕ್ಷಾ ಕೇಂದ್ರದ ಅಧಿಕಾರಿ/ಸಿಬ್ಬಂದಿ ಅಧಿಕೃತ ಗುರುತಿನ ದಾಖಲೆಗಳೊಂದಿಗೆ ಮಾತ್ರ ಹಾಜರಿದ್ದು, ಪರೀಕ್ಷಾ ಕರ್ತವ್ಯಗಳನ್ನು ನಿರ್ವಹಿಸಲು ಅವಕಾಶವಿದೆ. ಉಳಿದಂತೆ ವಿನಾ: ಕಾರಣ ಅಧಿಕಾರಿ/ಸಿಬ್ಬಂದಿ ಹಾಜರಿರುವುದನ್ನು ನಿರ್ಬಂಧಿಸಿ ಅವರು ಆದೇಶದಲ್ಲಿ ತಿಳಿಸಿದ್ದಾರೆ.----- ಬಾಕ್ಸ್ ------ದ್ವಿತೀಯ ಪಿಯು ಪರೀಕ್ಷಾ ಕೇಂದ್ರಗಳುಚಿಕ್ಕಮಗಳೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜು ಬೇಲೂರು ರಸ್ತೆ, ಎಲ್.ಬಿ.ಎಸ್. ಸರ್ಕಾರಿ ಪದವಿ ಪೂರ್ವ ಕಾಲೇಜು, ಎಂ.ಇ.ಎಸ್. ಪದವಿ ಪೂರ್ವ ಕಾಲೇಜು, ಬಾಲಿಕಾ ಸರ್ಕಾರಿ ಪದವಿ ಪೂರ್ವ ಕಾಲೇಜು ಬಸವನಹಳ್ಳಿ, ಮೌಂಟೇನ್ ವ್ಯೂ ಪದವಿ ಪೂರ್ವ ಕಾಲೇಜು, ತರೀಕೆರೆ- ಸರ್ಕಾರಿ ಪದವಿ ಪೂರ್ವ ಕಾಲೇಜು, ಬಾಲಿಕಾ ಸರ್ಕಾರಿ ಪದವಿ ಪೂರ್ವ ಕಾಲೇಜು, ಸಖರಾಯಪಟ್ಟಣ- ಸರ್ಕಾರಿ ಪದವಿ ಪೂರ್ವ ಕಾಲೇಜು, ಬೀರೂರು- ಕೆ.ಎಲ್.ಕೆ. ಸರ್ಕಾರಿ ಪದವಿ ಪೂರ್ವ ಕಾಲೇಜು, ಅಜ್ಜಂಪುರ- ಸರ್ಕಾರಿ ಪದವಿ ಪೂರ್ವ ಕಾಲೇಜು, ಮೂಡಿಗೆರೆ- ಸರ್ಕಾರಿ ಪದವಿ ಪೂರ್ವ ಕಾಲೇಜು, ಕಡೂರು- ಸರ್ಕಾರಿ ಪದವಿ ಪೂರ್ವ ಕಾಲೇಜು, ಬಾಲಿಕಾ ಸರ್ಕಾರಿ ಪದವಿ ಪೂರ್ವ ಕಾಲೇಜು, ಕಳಸ- ಸರ್ಕಾರಿ ಪದವಿ ಪೂರ್ವ ಕಾಲೇಜು, ಎನ್.ಆರ್.ಪುರ- ಸರ್ಕಾರಿ ಪದವಿ ಪೂರ್ವ ಕಾಲೇಜು, ಕೊಪ್ಪ- ಸರ್ಕಾರಿ ಪದವಿ ಪೂರ್ವ ಕಾಲೇಜು, ಶೃಂಗೇರಿ- ಸರ್ಕಾರಿ ಪದವಿ ಪೂರ್ವ ಕಾಲೇಜು, ಬಾಳೆಹೊನ್ನೂರು- ಎಸ್.ಜೆ.ಆರ್. ಪದವಿ ಪೂರ್ವ ಕಾಲೇಜು.------ 29 ಕೆಸಿಕೆಎಂ 3ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಯಲಿರುವ ಚಿಕ್ಕಮಗಳೂರಿನ ಪರೀಕ್ಷಾ ಕೇಂದ್ರ.