ದೊಡ್ಡಬಳ್ಳಾಪುರ: 2025-26ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳು ಫೆ.28ರಂದು ಶನಿವಾರದಿಂದ ಮಾರ್ಚ್
17ರವರೆಗೆ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 01 ಗಂಟೆವರೆಗೆ ಜರುಗಲ್ಲಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಜಿಲ್ಲಾಡಳಿತ ಪರೀಕ್ಷೆಗೆ ಸಕಲ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ಎನ್.ಅನುರಾಧ ತಿಳಿಸಿದ್ದಾರೆ.ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ-1 ಕ್ಕೆ 20 ಪರೀಕ್ಷಾ ಕೇಂದ್ರಗಳನ್ನು ನಿಗದಿಪಡಿಸಲಾಗಿದೆ. ದೇವನಹಳ್ಳಿ ತಾಲೂಕಿನಲ್ಲಿ 4, ದೊಡ್ಡಬಳ್ಳಾಪುರ ತಾಲೂಕಿನಲ್ಲಿ 3, ಹೊಸಕೋಟೆ ತಾಲೂಕಿನಲ್ಲಿ 7, ನೆಲಮಂಗಲ ತಾಲೂಕಿನಲ್ಲಿ 6 ಸೇರಿದಂತೆ ಒಟ್ಟು 20 ಪರೀಕ್ಷಾ ಕೇಂದ್ರಗಗಳಿವೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಒಟ್ಟು 11,565 ವಿದ್ಯಾರ್ಥಿಗಳು:ಜಿಲ್ಲೆಯಲ್ಲಿ 10,821 ಹೊಸ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಿ, 166 ಖಾಸಗಿ ವಿದ್ಯಾರ್ಥಿಗಳು, 578 ಪುನರಾವರ್ತಿತ ವಿದ್ಯಾರ್ಥಿಗಳು ಸೇರಿ ಒಟ್ಟು 11,565 ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಾಯಿಸಿಕೊಂಡಿದ್ದಾರೆ. ಆ ಪೈಕಿ ಕಲಾ ವಿಭಾಗದಲ್ಲಿ 833 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಲ್ಲಿ 5405, ವಿಜ್ಞಾನ ವಿಭಾಗದಲ್ಲಿ 4583 ವಿದ್ಯಾರ್ಥಿಗಳಿದ್ದಾರೆ. ಸರ್ಕಾರಿ ಕಾಲೇಜುಗಳಲ್ಲಿ 1,724 ವಿದ್ಯಾರ್ಥಿಗಳು, ಅನುದಾನಿತ ಕಾಲೇಜಿನಲ್ಲಿ 1,074, ಅನುದಾನರಹಿತ ಕಾಲೇಜಿನಲ್ಲಿ 8,023 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
ಬಾಲಕಿಯರೇ ಹೆಚ್ಚು:
ಪರೀಕ್ಷೆಗೆ ನೊಂದಾಯಿಸಿಕೊಂಡ ವಿದ್ಯಾರ್ಥಿಗಳಲ್ಲಿ ಬಾಲಕಿಯರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಪರೀಕ್ಷೆಗೆ ಹಾಜರಾಗುವ ಗಂಡು ಮಕ್ಕಳ ಸಂಖ್ಯೆ 4695 ಆಗಿದ್ದರೆ, ಹೆಣ್ಣುಮಕ್ಕಳ ಸಂಖ್ಯೆ 6126 ಆಗಿದೆ ಎಂದು ತಿಳಿಸಿದ್ದಾರೆ.
ಅಗತ್ಯ ಸಿದ್ದತೆ:ಪರೀಕ್ಷೆಗಳನ್ನು ಪಾರದರ್ಶಕತೆ ಹಾಗೂ ಸುವ್ಯವಸ್ಥಿತವಾಗಿ ನಡೆಸುವ ನಿಟ್ಟಿನಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಮತ್ತು ಜಿಲ್ಲಾಡಳಿತದಿಂದ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಜಿಲ್ಲೆಯ ನಾಲ್ಕು ತಾಲೂಕಿನ ಎಲ್ಲಾ ಪರೀಕ್ಷಾ ಕೇಂದ್ರಗಳ ಕೊಠಡಿಗಳಲ್ಲಿ ಸಿಸಿ ಟಿವಿ ಕ್ಯಾಮೆರಾಗಳನ್ನು ಅಳವಡಿಸಿ, ವೆಬ್ ಕ್ಯಾಸ್ಟಿಂಗ್ ವ್ಯವಸ್ಥೆಯನ್ನು ಮಾಡಲಾಗಿದೆ.
ಕೋಟ್...............ದ್ವಿತೀಯ ಪಿಯುಸಿ ಸುಗಮವಾಗಿ, ಸುಲಲಿತವಾಗಿ ನಡೆಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ವಿದ್ಯಾರ್ಥಿಗಳು ಯಾವುದೇ ಭಯ-ಭೀತಿ ಇಲ್ಲದೇ ಧೈರ್ಯದಿಂದ ಪರೀಕ್ಷೆ ಬರೆಯಬೇಕು. ಪರೀಕ್ಷೆ ಬರೆಯಲಿರುವ ಮಕ್ಕಳಲ್ಲಿ ಪೋಷಕರು ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಬೇಕು.
- ಡಾ. ಕೆ.ಎನ್.ಅನುರಾಧ, ಜಿಲ್ಲಾಧಿಕಾರಿ, ಬೆಂಗಳೂರು ಗ್ರಾಮಾಂತರ27ಕೆಡಿಬಿಪಿ4- ದೊಡ್ಡಬಳ್ಳಾಪುರದ ದೇವರಾಜ ಅರಸ್ ಪಿಯು ಕಾಲೇಜು ಪರೀಕ್ಷಾ ಕೇಂದ್ರ.
27ಕೆಡಿಬಿಪಿ5- ಡಾ.ಕೆ.ಎನ್.ಅನುರಾಧಾ, ಜಿಲ್ಲಾಧಿಕಾರಿ