ಸಾರಾಂಶ
ಸರ್ವಜ್ಞ ಶಿಕ್ಷಣ ಸಂಸ್ಥೆಯ ಜಸ್ಟಿಸ್ ಶಿವರಾಜ ಪಾಟೀಲ ಕಾಲೇಜು ಈ ಬಾರಿ ಪಿಯುಸಿಯಲ್ಲಿ ಉತ್ತಮ ಸಾಧನೆ ಮಾಡಿದೆ. ಇಲ್ಲಿನ ವಿದ್ಯಾರ್ಥಿ ಪ್ರವೀಣ ಹಿರಗೋಪನ್ ದ್ವಿತೀಯ ಪಿಯು ವಿಜ್ಞಾನ ವಿಭಾಗದಲ್ಲಿ 600ಕ್ಕೆ 595 ಅಂಕ ಪಡೆದು ರಾಜ್ಯಕ್ಕೆ 4ನೇ ರ್‍ಯಾಂಕ್ ಮತ್ತು ಕಲಬುರಗಿ ವಿಭಾಗಕ್ಕೆ ಹಾಗು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದು ಕಾಲೇಜಿಗೆ ಕೀರ್ತಿ ತಂದಿದ್ದಾನೆ.
ಕನ್ನಡಪ್ರಭ ವಾರ್ತೆ ಕಲಬುರಗಿ
ನಗರದ ಸರ್ವಜ್ಞ ಶಿಕ್ಷಣ ಸಂಸ್ಥೆಯ ಜಸ್ಟಿಸ್ ಶಿವರಾಜ ಪಾಟೀಲ ಕಾಲೇಜು ಈ ಬಾರಿ ಪಿಯುಸಿಯಲ್ಲಿ ಉತ್ತಮ ಸಾಧನೆ ಮಾಡಿದೆ. ಇಲ್ಲಿನ ವಿದ್ಯಾರ್ಥಿ ಪ್ರವೀಣ ಹಿರಗೋಪನ್ ದ್ವಿತೀಯ ಪಿಯು ವಿಜ್ಞಾನ ವಿಭಾಗದಲ್ಲಿ 600ಕ್ಕೆ 595 ಅಂಕ ಪಡೆದು ರಾಜ್ಯಕ್ಕೆ 4ನೇ ರ್‍ಯಾಂಕ್ ಮತ್ತು ಕಲಬುರಗಿ ವಿಭಾಗಕ್ಕೆ ಹಾಗು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದು ಕಾಲೇಜಿಗೆ ಕೀರ್ತಿ ತಂದಿದ್ದಾನೆ.ಎಸ್ಎಸ್ಎಲ್ಸಿಯಲ್ಲಿ ಶೇ.88 ಪಡೆದ ಪ್ರವೀಣ ಸಿದ್ದಪ್ಪ ದ್ವಿತೀಯ ಪಿಯುಸಿಯಲ್ಲಿ ಶೇ.99.17 ಪಡೆದಿದ್ದು ವಿಶೇಷ ಮತ್ತು ಪಿಸಿಎಂಬಿಯಲ್ಲಿ 100ಕ್ಕೆ 100 ಅಂಕಗಳಿಸಿದ್ದು ಇನ್ನೂ ವಿಶೇಷ. ಇವರ ತಂದೆ ಸಣ್ಣ ರೈತನಾಗಿದ್ದು, ಕಲಬುರಗಿ ತಾಲೂಕಿನ ಕುಮ್ಸಿ ವಾಡಿಯಲ್ಲಿ ನೆಲೆಸಿರುತ್ತಾರೆ.
ಮರೆಮ್ಮ ತಂದೆ ಹಾವಣ್ಣ ಕರಗೊಂಡ ಶೇ.97.33 ಮತ್ತು ಪಿಸಿಎಂ ಅಲ್ಲಿ 100ಕ್ಕೆ 100 ಅಂಕ ಪಡೆದಿದ್ದಾಳೆ, ಸುಮೀತ್ ತಂದೆ ನಾಮದೇವ ಶೇ.97.17 ಪಡೆದು ಕಾಲೇಜಿಗೆ ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದಿದ್ದಾರೆ.192 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ, 202 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಪಡೆದಿದ್ದಾರೆ. ಇವರ ಸಾಧನೆಗೆ ಸಂಸ್ಥೆಯ ಸಂಸ್ಥಾಪಕರಾದ ಪ್ರೊ. ಚನ್ನಾರಡ್ಡಿ ಪಾಟೀಲರು, ಅಧ್ಯಕ್ಷ ಗೀತಾ ಚನ್ನಾರಡ್ಡಿ ಪಾಟೀಲ, ಶೈಕ್ಷಣಿಕ ನಿರ್ದೇಶಕ ಅಭಿಷೇಕ್ ಚನ್ನಾರಡ್ಡಿ ಪಾಟೀಲರು, ಪ್ರಾಚಾರ್ಯ ಎಂ.ಸಿ.ಕಿರೇದಳ್ಳಿ, ವಿನೂತಾ ಆರ್.ಬಿ., ಉಪಪ್ರಾಚಾರ್ಯರಾದ ಪ್ರಶಾಂತ ಕುಲಕರ್ಣಿ, ಕರುಣೇಶ್ ಹಿರೇಮಠ, ಗುರುರಾಜ ಕುಲಕರ್ಣಿ, ಬೋಧಕ ಮತ್ತು ಭೋಧಕೇತರ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.